Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಶಾಂತಕುಮಾರ್ ನಾಮಪತ್ರ ಅಂಗೀಕರಿಸಲು ಸೂಚಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್ ದ್ವಿಸದಸ್ಯ ಪೀಠ
Latest News

ಶಾಂತಕುಮಾರ್ ನಾಮಪತ್ರ ಅಂಗೀಕರಿಸಲು ಸೂಚಿಸಿದ್ದ ಕ್ರಮ ಎತ್ತಿಹಿಡಿದ ಹೈಕೋರ್ಟ್ ದ್ವಿಸದಸ್ಯ ಪೀಠ

Sambrama Prabha NewsBy Sambrama Prabha NewsDecember 4, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಷಿಯೇನ್ (ಕೆಎಸ್​ಸಿಎ) ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕೆ.ಎನ್. ಶಾಂತಕುಮಾರ್ ಅವರು ಸಲ್ಲಿಸಿರುವ ನಾಮಪತ್ರವನ್ನು ಅಂಗೀಕರಿಸಲು ಸೂಚನೆ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ಎತ್ತಿಹಿಡಿದಿದೆ.

ಅಲ್ಲದೆ, ಶಾಂತಕುಮಾರ್ ಅವರ ನಾಮಪತ್ರ ಅಂಗೀಕರಿಸುವಂತೆ ನಿರ್ದೇಶನ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಕೆಎಸ್​ಸಿಎ ಅಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದುಕೊಂಡಿದ್ದ ಕಲ್ಪನಾ ವೆಂಕಟಾಚಾರ್ ಎಂಬವರು ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಈ ಆದೇಶದಿಂದಾಗಿ ಕೆಎಸ್​ಸಿಎ ಚುನಾವಣೆಯು ನಿಗದಿತ ದಿನಾಂಕವಾದ ಡಿಸೆಂಬರ್ 7ರಂದು ಚುನಾವಣೆ ನಡೆಯಲಿದೆ.

ಪ್ರಕರಣದ ಹಿನ್ನೆಲೆ: ಕೆಎಸ್​ಸಿಎ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕೆ.ಎನ್. ಶಾಂತಕುಮಾರ್ ಅವರು ಚುನಾವಣಾಧಿಕಾರಿಯು ತಾಂತ್ರಿಕ ಕಾರಣಗಳಿಂದ ತಮ್ಮ ಉಮೇದುವಾರಿಕೆಯನ್ನು ತಿರಸ್ಕರಿಸಿದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರು ಪ್ರತಿನಿಧಿಸುವ ಪ್ರಜಾವಾಣಿ- ಡೆಕ್ಕನ್ ಹೆರಾಲ್ಡ್ ಸ್ಪೋರ್ಟ್ ಕ್ಲಬ್ 200 ರೂ.ಗಳ ಚಂದಾದಾರಿಕೆ ಬಾಕಿ ಉಳಿಸಿಕೊಂಡಿದೆ ಎಂಬ ಕಾರಣ ನೀಡಿ ಕೆಎಸ್​ಸಿಎ​ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ, ಶಾಂತಕುಮಾರ್ ಅವರ ನಾಮಪತ್ರ ತಿರಸ್ಕರಿಸಿ ಚುನಾವಣಾಧಿಕಾರಿ ನೀಡಿದ್ದ ಹಿಂಬರಹವನ್ನು ರದ್ದುಪಡಿಸಿ ಆದೇಶಿಸಿತ್ತು. ಜೊತೆಗೆ ನಿಗದಿತ ದಿನಾಂಕ (ಡಿಸೆಂಬರ್ 7)ರಂದು ಚುನಾವಣೆ ನಡೆಸಿ ಫಲಿತಾಂಶ ಪ್ರಕಟಿಸಲು ನಿರ್ದೇಶನ ನೀಡಿತ್ತು. ಈ ಆದೇಶ ಪ್ರಶ್ನಿಸಿ ಕಲ್ಪನಾ ವೆಂಕಟಾಚಾರ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಪ್ರತ್ಯೇಕ ಸುದ್ದಿ, ಕೆಎಸ್​ಸಿಎ ಚುನಾವಣಾ ಪ್ರಚಾರ: ಕೆಎಸ್​ಸಿಎ ಪದಾಧಿಕಾರಿಗಳ ಚುನಾವಣಾ ಪ್ರಚಾರದ ಪ್ರಯುಕ್ತ ಬುಧವಾರ ಶಿವಮೊಗ್ಗಕ್ಕೆ ಆಗಮಿಸಿದ್ದ ಕೆ.ಎನ್. ಶಾಂತಕುಮಾರ್ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ, ಕೆಎಸ್​ಸಿಎ ದೊಡ್ಡ ಸಂಸ್ಥೆ. ಇದಕ್ಕೆ ದೀರ್ಘವಾದ, ವೈಭವಯುತ ಇತಿಹಾಸ ಇದೆ. ಕಳೆದ 9 ದಶಕಗಳಲ್ಲಿ ಸಾಕಷ್ಟು ದಿಗ್ಗಜರು ಸೇವೆ ಸಲ್ಲಿಸಿದ್ದಾರೆ. ಈ ಸಂಸ್ಥೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಕ್ರೀಡಾಪಟುಗಳಿಗೆ ಮೂಲಭೂತ ಸೌಕರ್ಯ, ತರಬೇತಿ ನೀಡುವ ಎಲ್ಲಾ ಪ್ರಯತ್ನ ಮಾಡಲಾಗುವುದು. ನಮ್ಮ ಟೀಂನಲ್ಲಿ ಹಲವು ಕ್ರೀಡಾಪಟುಗಳಿದ್ದಾರೆ. ಕಳೆದ ಎರಡು ದಶಕಗಳಿಂದ ನಾನು ಕೂಡ ಕ್ರೀಡೆಗೆ ನನ್ನದೇ ಆದ ಸಣ್ಣ ಕೊಡುಗೆ ನೀಡಿದ್ದೇನೆ. ನಮ್ಮ ಟೀಂಗೆ ಬ್ರಿಜೇಶ್ ಪಟೇಲ್ ಸಾರಥ್ಯ ಇದೆ ಎಂದು ತಿಳಿಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಶಾಂತಕುಮಾರ್ ನಾಮಪತ್ರ ಹೈಕೋರ್ಟ್
Add as Preferred on Google Follow on Google News
Share. WhatsApp Facebook Twitter Telegram
Previous Articleಮೊಬೈಲ್, ಎಲೆಕ್ಟ್ರಾನಿಕ್ಸ್ ಬಿಡಿಭಾಗ ತಯಾರಿಕೆಗೆ ವಿಷನ್ ಡಾಕ್ಯುಮೆಂಟ್: ಸಚಿವ ಎಂ.ಬಿ. ಪಾಟೀಲ್
Next Article ನಟ ದರ್ಶನ್ ಪ್ರಕರಣ: ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್ ಜಾರಿ ಮಾಡಿದ ಕೋರ್ಟ್!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.