Updated By: Priyalachhi 

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

ನಿನ್ನೆ ನಡೆದ ಘಟನೆಯೇನು?

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು. ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಈ ಘಟನೆ ನಡೆದಿದೆ. ನಾಳೆ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version