• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

Sambrama Prabha News by Sambrama Prabha News
January 28, 2026
in Politics
0
ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

Updated By: Priyalachhi

ಬೆಂಗಳೂರು: ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು ಪರಿಷ್ಕರಿಸಲಾಗಿದ್ದು, ಶೀಘ್ರದಲ್ಲಿ ಇದನ್ನು ಘೋಷಿಸಿ ಅನುಷ್ಠಾನಕ್ಕೆ ತರಲಾಗುವುದು ಎಂದು ಜವಳಿ ಸಚಿವ ಶಿವಾನಂದ ಎಸ್. ಪಾಟೀಲ್ ತಿಳಿಸಿದರು.

ವಿಧಾನಪರಿಷತ್​ನಲ್ಲಿ ಮಂಗಳವಾರ ಬಿಜೆಪಿ ಸದಸ್ಯ ಎಂ. ನಾಗರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಹಿಂದಿನ ಮೂರು ಜವಳಿ ನೀತಿಗಳ ಸಾಧಕ-ಬಾಧಕಗಳ ಅಧ್ಯಯನ ಮಾಡಿ, ಎಲ್ಲರ ಸಲಹೆ ಸೂಚನೆಗಳನ್ನು ಪರಿಗಣಿಸಿ, 2025ರಿಂದ 2030ರ ವರೆಗೆ ಹೊಸ ಜವಳಿ ನೀತಿ ರೂಪಿಸಲಾಗಿದೆ. ಶೀಘ್ರದಲ್ಲಿ ಇದನ್ನು ಘೋಷಿಸಿ, ಕಾರ್ಯಾರೂಪಕ್ಕೆ ತರಲಾಗುವುದು ಎಂದರು.

ನೂತನ ನೀತಿಯಲ್ಲಿ ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ಹಾಗೂ ಕೈಮಗ್ಗ ನೇಕಾರರಿಗೆ 2ರಿಂದ 3 ಸಾವಿರ ಸಹಾಯಧನ ನೀಡಲಾಗುವುದು. ನೇಕಾರ ಸನ್ಮಾನ ಯೋಜನೆಯಡಿ ಕೊಡಲಾಗುತ್ತಿದ್ದ 2,500 ರೂ.ಗಳನ್ನು 5 ಸಾವಿರ ರೂ.ಗೆ ಏರಿಸಲಾಗಿದೆ. ಪರಿಷ್ಕೃತ ನೀತಿಯಲ್ಲಿ ಇನ್ನೂ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಜವಳಿ ಕೈಗಾರಿಕೆಗಳಿಗೆ ಹೆಚ್ಚಿನ ಮಟ್ಟದಲ್ಲಿ ಸಬ್ಸಿಡಿ ನೀಡಲಾಗುತ್ತಿದೆ. 1ರಿದ 10 ಹೆಚ್.ಪಿ ವಿದ್ಯುತ್ ಸಂಪರ್ಕ ಪಡೆದ ವಿದ್ಯುತ್ ಮಗ್ಗಗಳಿಗೆ ಉಚಿತ ವಿದ್ಯುತ್ ಪೂರೈಸಲಾಗುತ್ತಿದೆ. 10 ಹೆಚ್.ಪಿಯಿಂದ 20 ಹೆಚ್​​.ಪಿ ವಿದ್ಯುತ್ ಮಗ್ಗಗಳಿಗೆ ಪ್ರತಿ ಯೂನಿಟ್ 1.25 ರೂಪಾಯಿ ಶುಲ್ಕ ವಿಧಿಸಿದರೆ, ಬೇರೆ ರಾಜ್ಯಗಳಲ್ಲಿ ಪ್ರತಿ ಯೂನಿಟ್​​​ಗೆ 5 ರೂಪಾಯಿ ಇದೆ. 2019ರಿಂದ 2024 ರವರೆಗೆ 954 ಕೋಟಿ ರೂಪಾಯಿ ಸಬ್ಸಿಡಿ ನೀಡಲಾಗಿದೆ ಎಂದು ವಿವರಿಸಿದರು.

Tags: ಸಚಿವ ಶಿವಾನಂದ ಎಸ್.ಪಾಟೀಲ್
Previous Post

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಪರಿಹಾರ ಒದಗಿಸಲು ಶೀಘ್ರದಲ್ಲೇ ಸಭೆ

Next Post

ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

Next Post
ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.