Updated By: Priyalachhi 

ಬೆಂಗಳೂರು: ಕೋಗಿಲು ಬಡಾವಣೆ ತೆರವು ಪ್ರಕರಣದಲ್ಲಿ ಸಂತ್ರಸ್ತರಾದ 161 ಕುಟುಂಬಗಳ ಪೈಕಿ ಕೇವಲ 26 ಮಂದಿಗಷ್ಟೇ ಪರ್ಯಾಯವಾಗಿ ಮನೆ ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಈ ಕುರಿತಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಾಹಿತಿ ನೀಡಿದ್ದು, 26 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ. ಕೋಗಿಲು ಸಂತ್ರಸ್ತರಿಗೆ ಮನೆ ನೀಡುವ ವಿಚಾರವಾಗಿ ಸಚಿವ ಕೃಷ್ಣಬೈರೇಗೌಡರು ನನಗೆ ಕರೆ ಮಾಡಿದ್ದರು. 26 ಜನರ ದಾಖಲೆ ಪರಿಶೀಲನೆ ಮುಗಿದಿದೆ ಎಂದು ಹೇಳಿದ್ದಾರೆ ಎಂದರು.

ಕೋಗಿಲು ಸಂತ್ರಸ್ತರ ದಾಖಲೆಗಳನ್ನು ಇನ್ನು ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟು 261 ಮನೆಗಳ ಪೈಕಿ 161 ಮನೆಗಳನ್ನು ತೆರವು ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅರ್ಜಿಗಳು ಜಾಸ್ತಿ ಬಂದಿವೆ. ಆದರೆ ಅವರಿಗೆಲ್ಲ ಮನೆಗಳು ಕೊಡಲು ಆಗುವುದಿಲ್ಲ. ಯಾರ ಮನೆಗಳನ್ನು ತೆರವು ಮಾಡಲಾಗಿದೆ ಅವರನ್ನು ಪರಿಗಣಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ತೀರ್ಮಾನ ಮಾಡಿದ್ದಾರೆ. ಸಂತ್ರಸ್ತರ ಪೈಕಿ ಸ್ಥಳೀಯರು ಹಾಗೂ ಕರ್ನಾಟಕದವರಿಗೆ ಮಾತ್ರ ಮನೆ ಕೊಡುತ್ತೇವೆ. ಅವರು ಐದು ವರ್ಷಗಳ ಕಾಲ ಬೆಂಗಳೂರು ನಿವಾಸಿಗಳು ಆಗಿರಬೇಕು ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version