Updated By: Priyalachhi 

ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಸಾವಿಗೀಡಾದ ಕಾರ್ಯಕರ್ತನಿಗೆ 25ಲಕ್ಷ ರೂ ನಗದು ಪರಿಹಾರ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹೊಸ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ.

ಹೌದು.. ರಾಜ್ಯದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದ್ದು, ಹಿಂದೂ ಸಂಘಟನೆಗಳ ಮುಖಂಡ ತೇಜಸ್ ಗೌಡ ಆದಾಯ ತೆರಿಗೆ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಜನವರಿ 1 ರಂದು ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಹತ್ಯೆಯಾದ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ವಸತಿ ಸಚಿವ ಜಮೀರ್ ಅಹಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರದ ಹಣವನ್ನು ವಿತರಿಸಿದ್ದರು. 25 ಲಕ್ಷ ರೂಪಾಯಿ ಹಣವನ್ನು ಬಟ್ಟೆ ಬ್ಯಾಗ್ ನಲ್ಲಿ ಮುಚ್ಚಿ ರಾಜಶೇಖರ್ ರೆಡ್ಡಿ ಅವರ ತಾಯಿಗೆ ನೀಡಿದ್ದರು. ಇದೀಗ ಇದೇ ಹಣ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸಂಕಷ್ಟ ತಂದೊಡ್ಡಿದೆ.

ಮೂಲಗಳ ಪ್ರಕಾರ ಆದಾಯ ತೆರಿಗೆ ನಿಯಮಾವಳಿಗಳಂತೆ 2 ಲಕ್ಷ ರೂಗಿಂತ ಹೆಚ್ಚಿನ ನಗದನ್ನು ಯಾವುದೇ ರೂಪದಲ್ಲಿ ನೀಡುವಂತಿಲ್ಲ. ಆದಾಗ್ಯೂ ಓರ್ವ ಜನಪ್ರತಿನಿಧಿಯಾಗಿ 25ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿರುವುದನ್ನು ಪ್ರಶ್ನಿಸಿ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲಿಸಲಾಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version