• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

Sambrama Prabha News by Sambrama Prabha News
January 16, 2026
in Politics
0
ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

Updated By: Priyalachhi

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬ್ಯಾನರ್ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು. ಈ ವೇಳೆ ಘಟನೆ ನಡೆದಿದೆ.

ಸಂಕ್ರಾಂತಿ ಹಬ್ಬದ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ದೇವಾಲಯದ ಮುಂದೆ ಹುಲ್ಲು, ಹೂ ಬ್ಯಾನರ್ ಗಳಿಂದ ಸಿಂಗಾರ ಮಾಡಲಾಗಿತ್ತು. ಪಟಾಕಿ‌ ಹಚ್ಚುವಾಗ ಬೆಂಕಿ‌ ಕಿಡಿ ಬ್ಯಾನರ್ ಗೆ ಹಾಕಿದ್ದ ಹುಲ್ಲಿಗೆ ಬಿದ್ದು ಅವಘಡ ಸಂಭವಿಸಿದೆ.
Tags: ದಿನೇಶ್ ಗುಂಡೂರಾವ್
Previous Post

ಶಿಡ್ಲಘಟ್ಟ ಬ್ಯಾನರ್ ತೆರವು ಪ್ರಕರಣ: ರಾಜೀವ್ ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ

Next Post

ಇರಾನ್ ಸಂಘರ್ಷ: ಭಾರತೀಯರ ಕರೆತರಲು ‘ಕೇಂದ್ರ’ ಸಜ್ಜು

Next Post
ಇರಾನ್ ಸಂಘರ್ಷ: ಭಾರತೀಯರ ಕರೆತರಲು ‘ಕೇಂದ್ರ’ ಸಜ್ಜು

ಇರಾನ್ ಸಂಘರ್ಷ: ಭಾರತೀಯರ ಕರೆತರಲು 'ಕೇಂದ್ರ' ಸಜ್ಜು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.