Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸತತ 9ನೇ ಬಜೆಟ್​​​​​ ಮಂಡಿಸಲಿರುವ ಸಚಿವೆ ಸೀತಾರಾಮನ್
Nation News

ಸತತ 9ನೇ ಬಜೆಟ್​​​​​ ಮಂಡಿಸಲಿರುವ ಸಚಿವೆ ಸೀತಾರಾಮನ್

Sambrama Prabha NewsBy Sambrama Prabha NewsJanuary 27, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ದಾಖಲೆಯ ಒಂಬತ್ತನೇ ಸತತ ಬಜೆಟ್ ಮಂಡಿಸಲಿದ್ದಾರೆ. ಜಾಗತಿಕ ಅಸ್ಥಿರತೆ ನಡುವೆ ಸೀತಾರಾಮನ್​ ದಾಖಲೆಯ 9ನೇ ಬಜೆಟ್​ ಮಂಡನೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿ ಮುಗಿಸಿದ್ದಾರೆ. ಅಸ್ಥಿರ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ನಡುವೆ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಗುರಿಯೊಂದಿಗೆ ಸುಧಾರಣಾ ಕ್ರಮಗಳನ್ನು ಒಳಗೊಂಡಿರುವ ಬಜೆಟ್​ ಮಂಡಿಸುವ ನಿರೀಕ್ಷೆಯಿದೆ.

10 ಬಜೆಟ್​ ಗಳನ್ನು ಮಂಡಿಸಿರುವ ಮೊರಾರ್ಜಿ ದೇಸಾಯಿ: ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ವಿವಿಧ ಕಾಲಮಾನಗಳಲ್ಲಿ ಮಂಡಿಸಿದ 10 ಬಜೆಟ್‌ಗಳ ದಾಖಲೆಗೆ ಸೀತಾರಾಮನ್ ಅವರನ್ನು ಹತ್ತಿರ ತರುತ್ತಿದೆ. ಮೊರಾರ್ಜಿ ದೇಸಾಯಿ 1959 – 1964ರಲ್ಲಿ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಒಟ್ಟು 6 ಬಜೆಟ್‌ಗಳನ್ನು ಮತ್ತು 1967-1969ರ ನಡುವೆ 4 ಬಜೆಟ್‌ಗಳನ್ನು ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವರಾದ ಪಿ ಚಿದಂಬರಂ ಮತ್ತು ಪ್ರಣಬ್ ಮುಖರ್ಜಿ ಅವರು ವಿವಿಧ ಪ್ರಧಾನ ಮಂತ್ರಿಗಳ ಅಡಿ ಕ್ರಮವಾಗಿ ಒಂಬತ್ತು ಮತ್ತು ಎಂಟು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಈ ನಡುವೆ ಅರ್ಥಖಾತೆ ಸಚಿವೆ ಸೀತಾರಾಮನ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಡಿ ಸತತ ಒಂಬತ್ತು ಬಜೆಟ್‌ಗಳನ್ನು ಮಂಡಿಸಿದ ದಾಖಲೆಯನ್ನು ಮಾಡಲಿದ್ದಾರೆ. ಸತತವಾಗಿ ಇದುವರೆಗೂ ಯಾರೂ 9 ಬಜೆಟ್​ ಗಳನ್ನು ಮಂಡಿಸಿಲ್ಲ.

2019 ರಲ್ಲಿ ಪ್ರಧಾನಿ ಮೋದಿ ನಿರ್ಣಾಯಕ ಎರಡನೇ ಅವಧಿಗೆ ಗೆದ್ದಾಗ, ಸೀತಾರಾಮನ್​ ಭಾರತದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವರಾಗಿ ನೇಮಕಗೊಂಡರು. 2024ರಲ್ಲಿ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದ ನಂತರವೂ ಸೀತಾರಾಮನ್ ಅವರನ್ನೇ ಹಣಕಾಸು ಸಚಿವರನ್ನಾಗಿ ನೇಮಕ ಮಾಡಿದ್ದಾರೆ. ಇಲ್ಲಿಯವರೆಗೆ ಅವರು ಫೆಬ್ರವರಿ 2024ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು ಎಂಟು ನೇರ ಬಜೆಟ್​ ಗಳನ್ನು ಮಂಡಿಸಿದ್ದಾರೆ. ಸ್ವತಂತ್ರ ಭಾರತದಲ್ಲಿ ಬಜೆಟ್ ಮಂಡನೆಗೆ ಸಂಬಂಧಿಸಿದ ಕೆಲವು ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

ಮೊದಲ ಬಜೆಟ್ ಮಂಡಿಸಿದ್ದು ಯಾರು?: ಸ್ವತಂತ್ರ ಭಾರತದ ಮೊದಲ ಕೇಂದ್ರ ಬಜೆಟ್ ಅನ್ನು ನವೆಂಬರ್ 26, 1947 ರಂದು ದೇಶದ ಮೊದಲ ಹಣಕಾಸು ಸಚಿವ ಆರ್ ಕೆ ಷಣ್ಮುಖಂ ಚೆಟ್ಟಿ ಮಂಡಿಸಿದ್ದರು.

ಅತಿ ಹೆಚ್ಚು ಬಾರಿ ಬಜೆಟ್​ ಮಂಡಿಸಿದವರು; ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಪ್ರಧಾನಿ ಜವಾಹರಲಾಲ್ ನೆಹರು ಮತ್ತು ನಂತರ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಅಡಿ ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ ಒಟ್ಟು 10 ಬಜೆಟ್‌ಗಳನ್ನು ಮಂಡಿಸಿದ್ದರು.

ಫೆಬ್ರವರಿ 28, 1959 ರಂದು ತಮ್ಮ ಮೊದಲ ಬಜೆಟ್ ಮಂಡಿಸಿದ್ದರು. 1962 ರಲ್ಲಿ ಮಧ್ಯಂತರ ಬಜೆಟ್ ಮಂಡಿಸುವ ಮೊದಲು ಮುಂದಿನ ಎರಡು ವರ್ಷಗಳಲ್ಲಿ ಪೂರ್ಣ ಬಜೆಟ್‌ಗಳನ್ನು ಮಂಡಿಸಿದ್ದರು. ನಾಲ್ಕು ವರ್ಷಗಳ ನಂತರ ಅವರು 1967 ರಲ್ಲಿ ಮತ್ತೊಂದು ಮಧ್ಯಂತರ ಬಜೆಟ್ ಕೂಡಾ ಮಂಡಿಸಿದ್ದರು. ನಂತರ 1967, 1968 ಮತ್ತು 1969 ರಲ್ಲಿ ಮೂರು ಪೂರ್ಣ ಬಜೆಟ್‌ ಭಾಷಣಗಳನ್ನು ಮಾಡಿದ್ದಾರೆ. ಒಟ್ಟು 10 ಬಜೆಟ್‌ಗಳನ್ನು ಮಂಡಿಸಿದ ದಾಖಲೆ ಅವರ ಹೆಸರಲ್ಲಿದೆ.

ಎರಡನೇ ಅತಿ ಹೆಚ್ಚು ಬಜೆಟ್‌ ಮಂಡಿಸಿದವರು ಇವರು: ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಒಂಬತ್ತು ಬಾರಿ ಬಜೆಟ್ ಮಂಡಿಸಿದ್ದಾರೆ. ಅವರು ಮಾರ್ಚ್ 19, 1996 ರಂದು ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಯುನೈಟೆಡ್ ಫ್ರಂಟ್ ಸರ್ಕಾರದ ಅವಧಿಯಲ್ಲಿ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದರು. ಮುಂದಿನ ವರ್ಷ ಅದೇ ಸರ್ಕಾರದ ಅವಧಿಯಲ್ಲಿ ಅವರು ಮತ್ತೊಂದು ಬಜೆಟ್ ಮಂಡಿಸಿದ್ದರು. 2004 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂದಾಗ ಮತ್ತೆ ಚಿದಂಬರಂ ಹಾಟ್ ಸೀಟ್‌ಗೆ ಮರಳಿದ್ದರು.

2004 ಮತ್ತು 2008ರ ನಡುವೆ ಅವರು ಐದು ಬಜೆಟ್‌ಗಳನ್ನು ಮಂಡಿಸಿದ್ದರು. ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ನಂತರ, ಅವರು ಹಣಕಾಸು ಸಚಿವಾಲಯಕ್ಕೆ ಮರಳಿದ್ದರು. ಆ ಬಳಿಕ ಅಂದರೆ 2013 ಮತ್ತು 2014 ರಲ್ಲಿ ಬಜೆಟ್‌ಗಳನ್ನು ಮಂಡಿಸಿದ ಹೆಗ್ಗಳಿಕೆ ಹೊಂದಿದ್ದಾರೆ.

ಮೂರನೇ ಅತಿ ಹೆಚ್ಚು ಬಜೆಟ್‌ ಮಂಡಿಸಿದ್ದು ಯಾರು?; ಪ್ರಣಬ್ ಮುಖರ್ಜಿ ಅವರು ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಎಂಟು ಬಜೆಟ್‌ಗಳನ್ನು ಮಂಡಿಸಿದ್ದಾರೆ. ಮುಖರ್ಜಿ 1982, 1983 ಮತ್ತು 1984 ರಲ್ಲಿ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಫೆಬ್ರವರಿ 2009 ಮತ್ತು ಮಾರ್ಚ್ 2012 ರ ನಡುವೆ ಸತತ ಐದು ಬಜೆಟ್‌ಗಳನ್ನು ಮಂಡಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಚಿವೆ ಸೀತಾರಾಮನ್
Add as Preferred on Google Follow on Google News
Share. WhatsApp Facebook Twitter Telegram
Previous Articleನಾಳೆಯಿಂದ ಸಂಸತ್​ನ ಬಜೆಟ್ ಅಧಿವೇಶನ ಆರಂಭ
Next Article ಬೆಳೆ ವಿಮೆ ವ್ಯಾಪ್ತಿಗೆ ತೆಂಗು ಸೇರಿಸಲು ಕೋರಿ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

October 1, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.