BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

, ,

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ: ಕಾಂಗ್ರೆಸ್ ಆಗ್ರಹ

Author Picture
Published On: February 1, 2026

—Advertisement—

Updated By: Priyalachhi

ಬೆಂಗಳೂರು: ಕೇಂದ್ರ ಸರ್ಕಾರದ 2026-2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು ಕಾಂಗ್ರೆಸ್ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ಹೇಳಿದೆ.

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಕನ್ನಡಿಗರಿಗೆ ಅಕ್ಷರಶಃ ನಾಮ ಇಡುತ್ತಿದೆ. ಇದರಲ್ಲಿ ಅನುಮಾನವೇ ಇಲ್ಲ.ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂಬುದು ಒಂದೆಡೆಯಾದರೆ, ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರಕ್ಕೆ 23,402 ಕೋಟಿ ರೂ. ಹೊರೆಯಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ದ್ರೋಹ ಬಗೆದಿದ್ದು, ಸಾಕು. ಈ ಬಾರಿ ಬಜೆಟ್ ನಲ್ಲಿಯಾದರೂ ಕರ್ನಾಟಕಕ್ಕೆ ನ್ಯಾಯ ಒದಗಿಸಲಿ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp