ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ, ವರ್ಕ್ ಫ್ರಂ ಹೋಮ್ ರೂಢಿಸಿಕೊಳ್ಳಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಅಣಕಿಸಿ ನಟ ಕಿಶೋರ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಂದಿನ ಪ್ರಕಟಣೆಯಲ್ಲಿ ಈ ನಾನ್-ಬಯಲಾಜಿಕಲ್ ಸರ್ಕಾರವು ಹಸ್ದೇವ್ ನಿಂದ ನಿಕೋಬಾರ್ ವರೆಗೆ ನಮ್ಮ ಕಾಡುಗಳನ್ನು ಮಿಸ್ಟರ್ ಎ ಗೆ ಮಾರಾಟ ಮಾಡುವಲ್ಲಿ ನಿರತವಾಗಿದ್ದು, ಭಾರತವನ್ನು ವಿಶ್ವದ ಅತ್ಯಂತ ಕಲುಷಿತ ದೇಶವನ್ನಾಗಿ ಮಾಡಿ, ಮಾಲಿನ್ಯವನ್ನು ನಿಭಾಯಿಸಲು ಅಸಮರ್ಥವಾಗಿರುವುದರಿಂದ ಸಾರ್ವಜನಿಕರು 25% ರಷ್ಟು ಉಸಿರಾಟವನ್ನು ಕಡಿಮೆ ಮಾಡಿ ದೇಶಭಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕಿಶೋರ್ ಕುಮಾರ್ ಮಾಡಿರುವ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version