—Advertisement—

ಸಿಎಂ ಸೇರಿದಂತೆ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ

Author Picture
Published On: January 19, 2026

—Advertisement—

Updated By: Priyalachhi

ಬೆಂಗಳೂರು: ”ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ”ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ದೆಹಲಿ ಭೇಟಿ ಬಗ್ಗೆ ಮಾತನಾಡಿ ”ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದಾಗ, ”ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp