Updated By: Priyalachhi 

ಗದಗ : ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆ ಆಗಿರುವ ನಿಧಿಯಲ್ಲಿ 466 ಗ್ರಾಂ ಚಿನ್ನಾಭರಣಗಳು ಮತ್ತು 634 ಗ್ರಾಂ ತಾಮ್ರದ ತಂಬಿಗೆ ಪತ್ತೆಯಾಗಿದ್ದು, ಅವುಗಳನ್ನು ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಸಂಪೂರ್ಣ ಘಟನೆ ಬೆಳಕಿಗೆ ಬರಲು ಕಾರಣನಾದ 14 ವರ್ಷದ ಬಾಲಕ ಪ್ರಜ್ವಲ್ ರಿತ್ತಿ ಅವರ ಪ್ರಾಮಾಣಿಕತೆ ನಿಜಕ್ಕೂ ಅನುಕರಣೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್‌. ಕೆ. ಪಾಟೀಲ್‌ ಅವರು ಹೇಳಿದರು.

ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸನ್ಮಾನಿಸಿದರು. ನಂತರ ಗ್ರಾಮದ ಲಕ್ಷ್ಮಿ ನಾರಾಯಣ ದೇವಸ್ಥಾನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ರಾಷ್ಟ್ರಕೂಟರು ಮತ್ತು ಚಾಲುಕ್ಯರು ಆಳ್ವಿಕೆ ನಡೆಸಿದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಒಂದು ವಿಶಿಷ್ಟ ಸ್ಥಳವಾಗಿದೆ. ಇಂತಹ ಪುರಾತನ ಮತ್ತು ಮಹತ್ವದ ಪ್ರದೇಶಗಳಲ್ಲಿ ಕೆಲವೊಮ್ಮೆ ಅಚ್ಚರಿಯ ಘಟನೆಗಳು ಸಂಭವಿಸುವುದು ಸಹಜ ಎಂದು ಸಚಿವರು ಹೇಳಿದ್ದಾರೆ.

ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಈ ವಿಚಾರ ಮುಖ್ಯಮಂತ್ರಿ ಅವರ ಗಮನಕ್ಕೆ ಬಂದಾಗ, ‘ನಿಧಿ ಎಷ್ಟೇ ದೊಡ್ಡದಾಗಿರಲಿ. ಆದರೆ, ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ಒಪ್ಪಿಸಿರುವ ಈ ಬಾಲಕನ ನಡೆ ನಿಧಿಗಿಂತಲೂ ದೊಡ್ಡದು’ ಎಂದು ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಸಚಿವರು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version