BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

,

ಸಿದ್ದರಾಮಯ್ಯ ವಿರುದ್ಧ ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ

Author Picture
Published On: April 5, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ “ಕಟ್” ಹೇಳಿಕೆ ಬಿಜೆಪಿಯ ನೀಚ ರಾಜಕಾರಣವನ್ನು ಮತ್ತೊಮ್ಮೆ ಬಟ್ಟಬಯಲು ಮಾಡಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಶನಿವಾರ ಮಾಜಿ ಸಂಸದನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುರ್ಜೇವಾಲ ಅವರು, ಪ್ರತಾಪ್ ಸಿಂಹರ ಈ ಆಕ್ರೋಶ ಹತಾಶೆಯಿಂದ ಹುಟ್ಟಿದ್ದು ಎನ್ನುವುದು ಈಗ ಸ್ಪಷ್ಟ. ಹಿಂದುಳಿದ ಸಮುದಾಯದ ಅತ್ಯಂತ ಹಿರಿಯ ನಾಯಕರಾದ ಸಿದ್ದರಾಮಯ್ಯನವರನ್ನು ಅವಮಾನಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಪ್ರತಾಪ್ ಸಿಂಹರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನುವಾದಿ ದೃಷ್ಟಿಕೋನದ ಅನುಸಾರ ಕೀಳಾಗಿ ಮತ್ತು ಅಧೀನರಾಗಿ ಕಾಣುತ್ತೇವೆ ಎಂಬ ಸಂದೇಶವನ್ನು ರವಾನಿಸುವ ಏಕೈಕ ಉದ್ದೇಶದ ಇದರ ಹಿಂದೆ ಇದೆ. ಇಂತಹ ನಡವಳಿಕೆ ಬಿಜೆಪಿಯಲ್ಲಿನ ವಿಚಾರ, ನೈತಿಕತೆ ಮತ್ತು ನಾಯಕತ್ವದ ಸಂಪೂರ್ಣ ದಿವಾಳಿತನವನ್ನು ಬಯಲು ಮಾಡುತ್ತದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು “ಕೊಂದು ದೇಹವನ್ನು ಫ್ರಿಡ್ಜ್‌ನಲ್ಲಿ ತುಂಬುತ್ತೇವೆ” ಎಂಬ ಹೇಯ ಬೆದರಿಕೆ ಸೇರಿದಂತೆ ಈ ಹಿಂದೆ ಇದೇ ವಿಭಜನಕಾರಿ ಶಕ್ತಿಗಳಿಂದ ಜೀವಬೆದರಿಕೆಗಳು ಕೊಡ ಬಂದಿವೆ.

ಇದು ಒಬ್ಬ ವ್ಯಕ್ತಿಯ ಹುಚ್ಚಾಟವಲ್ಲ — ಇದು ಬಿಜೆಪಿಯ ರಾಜಕೀಯ ಸಂಸ್ಕೃತಿಯೇ ಆಗಿದೆ. ಇದೇ ಪ್ರತಾಪ್ ಸಿಂಹ ಬಿಜೆಪಿ ಕೇಂದ್ರ ನಾಯಕತ್ವದ ಸೂಚನೆಯ ಮೇರೆಗೆ ಜನರಿಂದ ಆಯ್ಕೆಯಾದ ಕಾಂಗ್ರೆಸ್ ಕರ್ನಾಟಕ ಸರ್ಕಾರವನ್ನು ಒಮ್ಮೆಯಲ್ಲ, ಪದೇ ಪದೇ “ತಾಲಿಬಾನ್ ಸರ್ಕಾರ” ಎಂದು ಕರೆದವರು. ವಿಷಕಾರಿ ಭಾಷಣ ಹರಡುವುದರಲ್ಲಿ ಬಿಜೆಪಿ ನಾಯಕರು ಮರು ಅಪರಾಧಿಗಳು. ಮಾಜಿ ಸಂಸದ ಅನಂತಕುಮಾರ್ ಹೆಗಡೆ ಕೇಂದ್ರ ಸಚಿವರಾಗಿದ್ದಾಗಲೇ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿಯನ್ನು ಬಹಿರಂಗವಾಗಿ ಅವಮಾನಿಸಿದರು. ಬಿಜೆಪಿ ಶಾಸಕ ಸಿ.ಟಿ. ರವಿ ಕರ್ನಾಟಕ ವಿಧಾನಪರಿಷತ್ತಿನ ಒಳಗೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸಿ ಅತ್ಯಂತ ಕೆಳಮಟ್ಟಕ್ಕೆ ಇಳಿದರು. ಇತರ ಬಿಜೆಪಿ ನಾಯಕರು ವ್ಯಕ್ತಿಗಳನ್ನು, ಸಮುದಾಯಗಳನ್ನು ಮತ್ತು ಧರ್ಮಗಳನ್ನು ಅವಮಾನಿಸುವ, ಅಗೌರವಿಸುವ ಮತ್ತು ಹೀಯಾಳಿಸುವ ಹೇಳಿಕೆಗಳನ್ನು ನೀಡುವುದರಲ್ಲಿ ಮರು ಅಪರಾದಿಗಳಾಗಿದ್ದರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp