Updated By: Priyalachhi

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ಕೋರ್ಟ್ ಗೆ ವರ್ಗಾಯಿಸಲು ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ.

ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version