ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೀದರ್: ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ನಿನ್ನೆ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.

ಈ ಬಗ್ಗೆ ಇಂದು ಬೀದರ್ ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ ಏನೂ ಹೇಳಿಲ್ಲ,ಹೀಗಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version