Updated By: Priyalachhi 

ಬೆಂಗಳೂರು: ವಾಹನ ದಟ್ಟಣೆ ಸಮಸ್ಯೆಗೆ ಸಿಲುಕಿರುವ ಸಿಲಿಕಾನ್​ ಸಿಟಿ ಬೆಂಗಳೂರು ಮಂದಿಗೆ ನಮ್ಮ ಮೆಟ್ರೋ ಗುಡ್​​ನ್ಯೂಸ್​​ ಕೊಟ್ಟಿದ್ದು, ಎರಡು ಹೊಸ ಮಾರ್ಗಗಗಳು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿವೆ. ಈಗಾಗಲೇ ಸೇವೆ ಒದಗಿಸುತ್ತಿರುವ ಗ್ರೀನ್, ಪರ್ಪಲ್ ಮತ್ತು ಯಲ್ಲೋ ಮಾರ್ಗಗಳ ಜೊತೆ ಮತ್ತೆರಡು ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಲಿದೆ.

ಹೊಸ ಮಾರ್ಗಗಳು

2026ರ ಅಂತ್ಯದ ಒಳಗೆ ಪಿಂಕ್​ ಮತ್ತು ಬ್ಲೂ ಲೈನ್​​ಗಳಲ್ಲಿ ಮೆಟ್ರೋ ರೈಲುಗಳು ವಾಣಿಜ್ಯ ಸಂಚಾರ ನಡೆಸಲಿವೆ. ಮೇ ತಿಂಗಳಿನಲ್ಲಿ ಪಿಂಕ್ ಲೈನ್ ಮೊದಲ ಹಂತ ಆರಂಭವಾದರೆ, ಡಿಸೆಂಬರ್​​ ವೇಳೆಗೆ ಬ್ಲೂ ಲೈನ್ ಮೊದಲ ಹಂತವೂ ಕಾರ್ಯಾಚರಣೆ ಆರಂಭಿಸಲಿದೆ.

ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕಿಸುವ ಪಿಂಕ್ ಲೈನ್​​ 21.25 ಕಿ.ಮೀ. ವಿಸ್ತೀರ್ಣವಿದ್ದು, ಆ ಪೈಕಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ.ಯ 6 ಎಲಿವೇಟೆಡ್ ಮೆಟ್ರೋ ಸ್ಟೇಷನ್​​ಗಳು ಮೇನಲ್ಲಿ ಆರಂಭವಾಗಲಿದೆ. ನವೆಂಬರ್​​ನಲ್ಲಿ ತಾವರೆಕೆರೆಯಿಂದ ನಾಗವಾರ 12 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್​​ಗಳ ಕಾರ್ಯಾಚರಣೆ ಆರಂಭವಾಗಲಿದೆ. ಪಿಂಕ್ ಲೈನ್​​ಗಾಗಿ ಈಗಾಗಲೇ BEMLನಿಂದ ಒಂದು ಚಾಲಕರಹಿತ ರೈಲು ಆರಂಭವಾಗಲಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version