Updated By: Priyalachhi

ಬೆಂಗಳೂರು/ಮೈಸೂರು/ಹುಬ್ಬಳ್ಳಿ: ದೆಹಲಿಯಲ್ಲಿ ಭೀಕರ ಕಾರು ಸ್ಫೋಟದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ. ಸೋಮವಾರ ರಾತ್ರಿಯಿಂದಲೇ ಜನದಟ್ಟಣೆಯ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಬೆಂಗಳೂರಲ್ಲಿ ಹೋಟೆಲ್‌, ಲಾಡ್ಜ್‌ಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ತಂಗಿರುವವರ ಕುರಿತು ಮಾಹಿತಿ ಕಲೆಹಾಕುತ್ತಿರುವ ಪೊಲೀಸರು, ಸಾರ್ವಜನಿಕ ಸ್ಥಳಗಳಾದ ಮಾಲ್, ಏರ್‌ಪೋರ್ಟ್, ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳಲ್ಲಿ ಶ್ವಾನದಳದೊಂದಿಗೆ ತೆರಳಿ ತಪಾಸಣೆ ನಡೆಸಿದ್ದಾರೆ.

ರಾಜ್ಯದಲ್ಲಿ ಬಿಗಿ ಭದ್ರತೆ: ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯತ್​​ನಲ್ಲಿ ಸೋಮವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದರು.

CAR BLAST  ಕೆಂಪು ಕೋಟೆ ಬಳಿ ಸ್ಫೋಟ  ದೆಹಲಿ ಸ್ಫೋಟ  ಕರ್ನಾಟಕದಲ್ಲಿ ಬಿಗಿ ಭದ್ರತೆ DELHI RED FORT CAR BLAST

ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version