• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಉದ್ಯೋಗದ ಆಸೆಗೆ ಬಿದ್ದು ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ

Sambrama Prabha News by Sambrama Prabha News
November 21, 2025
in Nation News
0
ಉದ್ಯೋಗದ ಆಸೆಗೆ ಬಿದ್ದು ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿದ್ದ 25 ಮಂದಿ ಕನ್ನಡಿಗರು ಸೇರಿ 125 ಭಾರತೀಯರ ರಕ್ಷಣೆ

Updated By: Priyalachhi

ನವದೆಹಲಿ/ಬೆಂಗಳೂರು: ಉದ್ಯೋಗದ ಆಸೆಗೆ ಬಿದ್ದು ಮ್ಯಾನ್ಮಾರ್‌ನಲ್ಲಿ ವಂಚಕರ ಬಲೆಯಲ್ಲಿ ಸಿಲುಕಿಕೊಂಡಿದ್ದ 25 ಮಂದಿ ಕನ್ನಡಿಗರು ಸೇರಿ ಒಟ್ಟು 125 ಮಂದಿ ಭಾರತೀಯರನ್ನು ರಕ್ಷಣೆ ಮಾಡಲಾಗಿದ್ದು, ಥೈಲ್ಯಾಂಡ್ ನಿಂದ ಭಾರತಕ್ಕೆ ಬುಧವಾರ ಕರೆತರಲಾಗಿದೆ.

ಇದರೊಂದಿಗೆ, ಈ ವರ್ಷದ ಮಾರ್ಚ್‌ನಿಂದ ಮಯನ್ಮಾರ್‌ನ ಕಳ್ಳಸಾಗಣೆ ಕೇಂದ್ರಗಳಿಂದ ಒಟ್ಟು 1,500 ಭಾರತೀಯರನ್ನು ಥೈಲ್ಯಾಂಡ್ ಮೂಲಕ ದೇಶಕ್ಕೆ ಮರಳಿ ಕರೆತರಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಆಗ್ನೇಯ ಏಷ್ಯಾದ ಕಳ್ಳಸಾಗಣೆ ಕೇಂದ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆತರುವ ಭಾರತ ಸರ್ಕಾರದ ಪ್ರಯತ್ನಗಳ ಭಾಗವಾಗಿ, ಬ್ಯಾಂಕಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಥೈಲ್ಯಾಂಡ್‌ನ ಚಿಯಾಂಗ್ ಮಾಯ್ ಪ್ರಾಂತ್ಯದಲ್ಲಿರುವ ಭಾರತೀಯ ದೂತವಾಸವು ಭಾರತೀಯ ಪ್ರಜೆಗಳನ್ನು ಮರಳಿ ಕರೆತರಲು ಥಾಯ್ ಸರ್ಕಾರ ಮತ್ತು ಟಕ್ ಪ್ರಾಂತ್ಯದ ವಿವಿಧ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಕೆಲಸ ಮಾಡಿದೆ.

ಅಲ್ಲದೇ, ಭಾರತೀಯ ನಾಗರಿಕರು ವಿದೇಶಗಳಲ್ಲಿ ಉದ್ಯೋಗಾವಕಾಶ ಸ್ವೀಕರಿಸುವ ಮೊದಲು ವಿದೇಶಿ ಉದ್ಯೋಗದಾತರ ರುಜುವಾತುಗಳನ್ನು ಪರಿಶೀಲಿಸಲು ಮತ್ತು ನೇಮಕಾತಿ ಏಜೆಂಟ್‌ಗಳು ಮತ್ತು ಕಂಪನಿಗಳ ದಾಖಲೆಯನ್ನು ಪರಿಶೀಲಿಸಲು ಬಲವಾಗಿ ಸಲಹೆ ನೀಡಲಾಗಿದೆ.

ಇದಲ್ಲದೇ, ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರಿಗೆ ಥೈಲ್ಯಾಂಡ್‌ಗೆ ವೀಸಾ-ಮುಕ್ತ ಪ್ರವೇಶವು ಪ್ರವಾಸೋದ್ಯಮ ಮತ್ತು ಅಲ್ಪಾವಧಿಯ ವ್ಯಾಪಾರ ಉದ್ದೇಶಗಳಿಗಾಗಿ ಮಾತ್ರ ಮತ್ತು ಥೈಲ್ಯಾಂಡ್‌ನಲ್ಲಿ ಉದ್ಯೋಗವನ್ನ ಹುಡುಕಲು ದುರುಪಯೋಗಪಡಿಸಿಕೊಳ್ಳಬಾರದು ಎಂದು ಥೈಲ್ಯಾಂಡ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

Tags: ಉದ್ಯೋಗ
Previous Post

ಮಕ್ಕಳು ಹೆಲ್ಮೆಟ್ ಧರಿಸುವುದು ಕಡ್ಡಾಯ

Next Post

ನ್ಯಾ.ಕುನ್ಹಾ ಆಯೋಗ ರಚನೆ ಪ್ರಶ್ನಿಸಿ ಡಿಎನ್ಎ ಎಂಟರ್ಟೈನ್ಮೆಂಟ್ ಸಲ್ಲಿಸಿದ್ದ ಅರ್ಜಿ ವಜಾ

Next Post
ನ್ಯಾ.ಕುನ್ಹಾ ಆಯೋಗ ರಚನೆ ಪ್ರಶ್ನಿಸಿ ಡಿಎನ್ಎ ಎಂಟರ್ಟೈನ್ಮೆಂಟ್ ಸಲ್ಲಿಸಿದ್ದ ಅರ್ಜಿ ವಜಾ

ನ್ಯಾ.ಕುನ್ಹಾ ಆಯೋಗ ರಚನೆ ಪ್ರಶ್ನಿಸಿ ಡಿಎನ್ಎ ಎಂಟರ್ಟೈನ್ಮೆಂಟ್ ಸಲ್ಲಿಸಿದ್ದ ಅರ್ಜಿ ವಜಾ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.