Updated By: Priyalachhi

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version