• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

2nd PUC result ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ

Sambrama Prabha News by Sambrama Prabha News
April 9, 2026
in Latest News, Nation News
0
2nd PUC result ಪ್ರಕಟ: ಈ ಬಾರಿ ದಾಖಲೆಯ ಫಲಿತಾಂಶ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.

ದಿಶಾ ರಾಜ್ಯಕ್ಕೆ ಫಸ್ಟ್

ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್‌ಸೈಟ್‌ https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದು.

ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

Tags: 2nd PUC result
Previous Post

ಸಂಪುಟ ಪುನಾರಚನೆ ವಿಚಾರ ಮತ್ತೆ ಮುನ್ನಲೆಗೆ: ಏಪ್ರಿಲ್ 12ಕ್ಕೆ ಸಿದ್ದರಾಮಯ್ಯ ಬಣ ದೆಹಲಿಗೆ

Next Post

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Next Post
ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.