Updated By: Priyalachhi

ಫರಿದಾಬಾದ್(ನವದೆಹಲಿ): ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ದೆಹಲಿಯ ಫರಿದಾಬಾದ್​ನ ಮನೆಯೊಂದರಲ್ಲಿ ಅಪಾರ ಪ್ರಮಾಣದ ದಹನಕಾರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳು ಅಮೋನಿಯಂ ನೈಟ್ರೇಟ್​, ​ಅಸಾಲ್ಟ್ ರೈಫಲ್ಸ್ ಮತ್ತು ಮದ್ದುಗುಂಡುಗಳಾಗಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ವಾರ ಬಂಧನಕ್ಕೊಳಗಾಗಿದ್ದ ವೈದ್ಯ ನೀಡಿದ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ.

ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ ಫರಿದಾಬಾದ್​ ಪೊಲೀಸ್​ ಆಯುಕ್ತರು, ಫರಿದಾಬಾದ್‌ನ ಧೌಜ್ ಪ್ರದೇಶದ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಬೋಧನೆ ಮಾಡುತ್ತಿದ್ದ ಡಾ.ಮುಜಮ್ಮಿಲ್​ನನ್ನು ಕೆಲವು ದಿನಗಳ ಹಿಂದೆ ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಇದಾದ ಬಳಿಕ ಭಾನುವಾರ ಇಲ್ಲಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಕಳೆದ ಕೆಲವು ದಿನಗಳಿಂದ ಫರಿದಾಬಾದ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಮುಜಮ್ಮಿಲ್​ನನ್ನು ನಮ್ಮ ತಂಡ ಬಂಧಿಸಿದೆ. ನಿನ್ನೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ ಮನೆಯೊಂದರಲ್ಲಿ 360 ಕೆಜಿ ದಹನಕಾರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅದು ಬಹುಶಃ ಅಮೋನಿಯಂ ನೈಟ್ರೇಟ್ ಆಗಿರಬಹುದು. ಆದರೆ, ಆರ್‌ಡಿಎಕ್ಸ್ ಅಲ್ಲ ಎಂದು ಸ್ಪಷ್ಟವಾಗಿದೆ. ತನಿಖೆ ಮುಂದುವರೆದಿದೆ ಎಂದು ಹೇಳಿದರು.

ದಾಳಿಯ ಸಮಯದಲ್ಲಿ ಸುಮಾರು 20 ಟೈಮರ್‌ಗಳು, ಬ್ಯಾಟರಿಗಳನ್ನು ಹೊಂದಿರುವ ಟೈಮರ್‌ಗಳು ಮತ್ತು ಇತರ ವಸ್ತುಗಳು ಸೇರಿದಂತೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ಬಳಸಬಹುದಾದ ಹಲವಾರು ಇತರೆ ವಸ್ತುಗಳು ಸಿಕ್ಕಿವೆ. ಅಸಾಲ್ಟ್ ರೈಫಲ್, ಮೂರು ಮ್ಯಾಗಜೀನ್‌ಗಳು ಮತ್ತು 83 ಲೈವ್ ರೈಫಲ್‌ಗಳು, ಒಂದು ಪಿಸ್ತೂಲ್ ಮತ್ತು ಎಂಟು ಲೈವ್ ರೈಫಲ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version