Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ‘ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ’
Politics Latest News Nation News

‘ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ’

Sambrama Prabha NewsBy Sambrama Prabha NewsNovember 18, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಹೆಚ್ಚುವರಿ ಕೆಲಸದ ಅವಧಿಯ ಕುರಿತು ಮೊದಲಿನಿಂದಲೂ ಒತ್ತಾಯ ಹೇರುತ್ತಾ ಬಂದಿದ್ದ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಇದೀಗ ಅಂತಹುದೇ ಮತ್ತೊಂದು ಸೂತ್ರದೊಂದಿಗೆ ಮುಂದೆ ಬಂದಿದ್ದಾರೆ.

ಹೌದು.. ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತೊಮ್ಮೆ ಕೆಲಸದ ಅವಧಿಯ ವಿಚಾರವಾಗಿ ಮಾತನಾಡಿದ್ದು, ಈ ಬಾರಿ ಚೀನಾ ನಿದರ್ಶನದೊಂದಿಗೆ ಸುದ್ದಿಗೆ ಗ್ರಾಸವಾಗುತ್ತಿದ್ದಾರೆ. ನಾರಾಯಣಮೂರ್ತಿ ಅವರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆನ್ನುವ ವಾದ ಸಮರ್ಥಿಸಿಕೊಂಡಿದ್ದು, ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮೂರ್ತಿಗಳು ಚೀನಾದ ನಿದರ್ಶನ ನೀಡಿದ್ದಾರೆ.

ಚೀನಾದಲ್ಲಿ ವಾರಕ್ಕೆ 6 ದಿನ, ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಕೆಲಸ ಮಾಡಲಾಗುವುದನ್ನು ನಾರಾಯಣಮೂರ್ತಿ ಉದಾಹರಣೆಯಾಗಿ ನೀಡಿದ್ದಾರೆ. ಅಂತೆಯೇ ಸಮರ್ಥ ಕೆಲಸದ ವ್ಯವಸ್ಥೆಯು ದೇಶದ ಅಭಿವೃದ್ದಿಗೆ ಎಷ್ಟು ಮುಖ್ಯ ಎಂಬುದನ್ನು ವಿವರಿಸಿದ್ದಾರೆ.

ಪ್ರಯತ್ನದಿಂದ ಮಾತ್ರವೇ ಅಭಿವೃದ್ಧಿ ಬರುವುದು. ಯಾವುದೇ ವ್ಯಕ್ತಿ ಸಮುದಾಯ ಮತ್ತು ದೇಶವಾಗಲೀ ಪರಿಶ್ರಮ ಇಲ್ಲದೇ ಅಭಿವೃದ್ಧಿ ಹೊಂದಿಲ್ಲ. ಹಾಗೆಯೇ, ಮೊದಲು ಜೀವನ ಪಡೆಯಿರಿ, ಬಳಿಕ ಕೆಲಸ ಮತ್ತು ಜೀವನ ಸಮತೋಲನ ಸಾಧಿಸಿರಿ ಎಂದೂ ಯುವಜನರಿಗೆ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.

ಚೀನಾದ ಹೊಟೆಲ್ ಉದಾಹರಣೆ

‘ಕಳೆದ ವರ್ಷ ಕಾಟಮರನ್​ನ (ನಾರಾಯಣಮೂರ್ತಿ ಅವರ ಹೂಡಿಕೆ ಸಂಸ್ಥೆ) ಕೆಲ ಹಿರಿಯ ಉದ್ಯೋಗಿಗಳು ಚೀನಾಗೆ ಭೇಟಿ ನೀಡಿದ್ದರು. ಅಲ್ಲಿಯ 1, 2, ಮತ್ತು 3ನೇ ಸ್ತರ ನಗರಗಳಿಗೆ ಭೇಟಿ ನೀಡಿದ್ದರು. ಚೀನಾದ ವಾಸ್ತವ ಪರಿಸ್ಥಿತಿ ಹೇಗಿದೆ ಎಂದು ತಿಳಿಯಲು ಅವರು ಈ ಮೂರೂ ರೀತಿಯ ನಗರಗಳಲ್ಲಿನ ಹೋಟೆಲ್​ಗಳಲ್ಲಿ ಉಳಿದಿದ್ದರು. ಅಲ್ಲಿ 9, 9, 6 ಎನ್ನುವ ಮಾತಿದೆ. ಹಾಗಂದರೆ ಏನು ಗೊತ್ತಾ? ಬೆಳಗ್ಗೆ 9ರಿಂದ ರಾತ್ರಿ 9, ವಾರಕ್ಕೆ 6. ಅಂದರೆ ವಾರಕ್ಕೆ 72 ಗಂಟೆ ಆಯಿತು’ ಎಂದು ಎನ್ ಆರ್ ನಾರಾಯಣಮೂರ್ತಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಆದರ್ಶ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ನಾರಾಯಣ ಮೂರ್ತಿ ‘ಯುವಜನರಿಗೆ ಪ್ರಧಾನಿ ಮೋದಿ ಆದರ್ಶ. ನರೇಂದ್ರ ಮೋದಿ ಅವರು ವಾರಕ್ಕೆ ಬಹುತೇಕ 100 ಗಂಟೆ ಕೆಲಸ ಮಾಡುತ್ತಾರೆ ಎಂದರು. ಅಂತೆಯೇ ಈ ರೀತಿಯ ದೀರ್ಘ ಸಮಯ ಕೆಲಸದಲ್ಲಿ ತೊಡಗಿಸಿಕೊಳ್ಳುವುದರ ಬಗ್ಗೆ ಮಾತ್ರವಲ್ಲ, ಶಿಸ್ತು ಮತ್ತು ದೇಶಾದ್ಯಂತ ಅನೇಕ ಜನರು ಹಂಚಿಕೊಂಡ ಸ್ಪಷ್ಟ ಗುರಿಯ ಬಗ್ಗೆಯೂ ಆಗಿದೆ.

ಈ ರೀತಿಯ ನಿರಂತರ ಹಾಗೂ ವಿಶೇಷ ಪ್ರಯತ್ನವು ವರ್ಷಗಳಲ್ಲಿ ಚೀನಾದ ಆರ್ಥಿಕ ಏರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಭಾರತವು ಬುದ್ಧಿವಂತ ಜನರು ಮತ್ತು ಅದ್ಭುತ ಐಡಿಯಾಗಳನ್ನು ಹೊಂದಿದೆ. ಆದರೆ, ಗಂಭೀರ ಕ್ರಮದೊಂದಿಗೆ ಆ ಆಲೋಚನೆಗಳನ್ನು ಬೆಂಬಲಿಸಬೇಕು. ಈ ಆಲೋಚನೆಗಳನ್ನು ಅನುಷ್ಠಾನ ಮಾಡಬೇಕು ಎಂದು ನಾರಾಯಣಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರು ವಾರಕ್ಕೆ 100 ಗಂಟೆ ಕೆಲಸ ಮಾಡುತ್ತಾರೆ, ಇದು ಇಂದಿನ ಪೀಳಿಗೆಯ ಯುವಕರಿಗೆ ಪ್ರೇರಣೆ. ಯಾಕೆಂದರೆ ಕಡಿಮೆ ಅವಕಾಶಗಳನ್ನು ಹೊಂದಿರುವವರು ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಕಡಿಮೆ ಸಾಧ್ಯತೆಯಲ್ಲಿ ಉತ್ತಮ ಸಾಧ್ಯತೆಗಳನ್ನು ಕಂಡುಕೊಳ್ಳಬಹುದು. ನನ್ನ ಪ್ರಕಾರ ಕಠಿಣ ಪರಿಶ್ರಮ ಎನ್ನುವುದು ಒಬ್ಬ ವ್ಯಕ್ತಿ, ಸಮುದಾಯ, ಅಥವಾ ದೇಶದ ಯಶಸ್ಸಿಗೆ ಬಹು ಮುಖ್ಯ’ ಎಂದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪ್ರಧಾನಿ ಮೋದಿ ವಾರಕ್ಕೆ 72 ಗಂಟೆ ಕೆಲಸ
Add as Preferred on Google Follow on Google News
Share. WhatsApp Facebook Twitter Telegram
Previous Articleಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಸುಧಾರಣೆಗೆ 1 ಲಕ್ಷ ಕೋಟಿ ರೂ.ಗೂ ಹೆಚ್ಚು ಖರ್ಚು
Next Article ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

October 7, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.