ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲು
ಗಲ್ಲುಶಿಕ್ಷೆ ಬದಲಿಗೆ ಜೀವನ ಪರ್ಯಂತ ಜೈಲುವಾಸಕ್ಕೆ ಕೋರಿ ಸಲ್ಲಿಸಿದ್ದ.ಅರ್ಜಿಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
- ರಾಷ್ಟ್ರಪತಿ ಕ್ಷಮಾದಾನ ತಿರುಸ್ಕಾರ ಕ್ಷಮಾದಾನ ಕೋರಿ ರಾಷ್ಟ್ರಪತಿಗೆ ಉಮೇಶ್ ರೆಡ್ಡಿ ತಾಯಿ ಸಲ್ಲಿಸಿದ್ದ ಅರ್ಜಿ ೨೦೧೩ ರಲ್ಲಿ ತಿರಸ್ಕರಿಸಲ್ಪಟ್ಟಿತ್ತು. ತದನಂತರ ಗಲ್ಲು ಶಿಕ್ಷೆ ಜೀವಾವಧಿಯಾಗಿ ಮಾರ್ಪಡಿಸಲು ಉಮೇಶ್ ರೆಡ್ಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ.
- ಹಲವು ಮಹಿಳೆಯರ ಮೇಲೆ ವಿಕೃತಿ ಮೆರೆದಿದ್ದ ಕಾಮುಕ ಫೆಬ್ರವರಿ ೨೮, ೧೯೯೮ ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ೨೦೦೭ ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದಲ್ಲದೇ ಹಲವು ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಉಮೇಶ್ ರೆಡ್ಡಿ ಆರೋಪಿಯಾಗಿದ್ದ. ೬ ಬಾರಿ ಪೊಲೀಸರ ಬಂಧನದಿAದ ತಪ್ಪಿಸಿಕೊಂಡಿದ್ದ. ಮೊದಲಿಗೆ ಪೊಲೀಸ್ ಕೆಲಸದಲ್ಲಿದ್ದು ಸೇವೆಯಿಂದ ವಜಾಗೊಂಡಿದ್ದ ಚಿತ್ರದುರ್ಗ ಮೂಲದ ಉಮೇಶ್ ರೆಡ್ಡಿ ಜೈಲಿನಲ್ಲಿ ಬೆತ್ತಲಾಗಿ ತಿರುಗುತ್ತಿದ್ದ ಎಂದು ಸಹ ವರದಿಯಾಗಿತ್ತು. ಹೈಕೋರ್ಟ್ ಅರ್ಜಿಯ ವಿರುದ್ಧ ಮೇಲ್ಮನವಿಯಲ್ಲಿ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ಎತ್ತಿ ಹಿಡಿದಿತು
ಬೆಂಗಳೂರು: ಸರಣಿ ಹಂತಕ, ಅತ್ಯಾಚಾರಿ, ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ. ಈ ಮುಂಚೆ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದುಗೊಳಿಸಿದೆ. ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಅಪರಾಧಿ ಉಮೇಶ್ ರೆಡ್ಡಿಯನ್ನು
ಸುಪ್ರೀಂಕೋರ್ಟ್ ನಿರ್ದೇಶನದಂತೆ ಗಲ್ಲುಶಿಕ್ಷೆಗೆ ಅಣಿ ಮಾಡಬೇಕಿದೆ. ಒಟ್ಟು ೧೮ ವರ್ಷ ಶಿಕ್ಷೆ ಅದರಲ್ಲಿ ೧೦ ವರ್ಷ ಏಕಾಂತ ಸೆರೆಮನೆವಾಸ ಅನುಭವಿಸಿದ್ದೇನೆ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ, ನನಗೆ ಕ್ಷಮಾದಾನ ನೀಡಿ ಎಂದು ರಾಷ್ಟ್ರಪತಿಗಳಿಗೆ ೨೦೧೬ರಲ್ಲೇ ಉಮೇಶ್ ರೆಡ್ಡಿ ಮನವಿ ಸಲ್ಲಿಸಿದ್ದ. ಗಲ್ಲು ಶಿಕ್ಷೆಯಿಂದ
ಕ್ಷಮಾದಾನ ನೀಡಲು ತಿರಸ್ಕರಿಸಿದ ರಾಜ್ಯ ಗೃಹ ಇಲಾಖೆ, ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಉಮೆಶ್ ರೆಡ್ಡಿ ಮನವಿ ಮಾಡಿಕೊಂಡಿದ್ದ. ಆದರೆ, ಕ್ಷಮಾದಾನ ಸಿಕ್ಕಿರಲಿಲ್ಲ, ನಂತರ ಗಲ್ಲುಶಿಕ್ಷೆ ಬದಲಿಗೆ ಜೀವನ ಪರ್ಯಂತ ಜೈಲುವಾಸಕ್ಕೆ
ಕೋರಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿ ಇತ್ಯರ್ಥವಾಗುವ ತನಕ ಗಲ್ಲಿಗೇರಿಸದಂತೆ ಮನವಿ ಸಲ್ಲಿಸಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಸಲ್ಲಿಸಿದ್ದ ಮನವಿ ಪುರಸ್ಕರಿಸಿದ್ದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.
೨೦೨೧ರ ತೀರ್ಪು: ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸಲು ಉಮೇಶ್ ರೆಡ್ಡಿ ಪರ ವಕೀಲರಾದ ಬಿ.ಎನ್. ಜಗದೀಶ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಗಲ್ಲು ಶಿಕ್ಷೆ ಖಾಯಂಗೊಳಿಸಿ, ನ್ಯಾ ಅರವಿಂದ್ ಕುಮಾರ್, ನ್ಯಾ. ಪ್ರದೀಪ್ ಸಿಂಗ್ ಅವರಿಂದ ನ್ಯಾಯಪೀಠ ಆದೇಶ ನೀಡಿದೆ. ಸುಮಾರು ೧೨ ವರ್ಷಗಳ ಬಳಿಕ ಸುಪ್ರೀಂಕೋಟ್ನಿAðದ ಮಂಗಳವಾರ ಮಹತ್ವದ ಆದೇಶ ೨೦೧೧ರಲ್ಲಿ ಹೊರಬಿದ್ದಿತ್ತು ೧೯೯೮ರಲ್ಲಿ ಉಮೇಶ್ ರೆಡ್ಡಿ ಜಯಶ್ರೀ ಎಂಬ ಮಹಿಳೆಯ ಕೈಯನ್ನು ಕಟ್ಟಿ ಅತ್ಯಾಚಾರ ಎಸಗಿದ್ದ, ಆ ಬಳಿಕ ಆಕೆಯನ್ನು ಕೊಂದು ಆಭರಣಗಳನ್ನು ದೋಚಿ ಪರಾರಿಯಾಗಿದ್ದ. ಇನ್ನೊಂದು ಮನೆಯಲ್ಲೂ ಅಪರಾಧ ಎಸಗಲು ಯತ್ನಿಸಿದಾಗ ಆತನನ್ನು ಬಂಧಿಸಲಾಗಿತ್ತು.