ರಾಜ್ಯ

ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಆಹ್ವಾನ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.
ಎಂ.ಕೃಷ್ಣ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಟ್ವೀಟ್
ಮಾಡಿರುವ ಮುಖ್ಯಮಂತ್ರಿ ಕಚೇರಿ, ‘ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ
ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು’ ಎಂದು ಹೇಳಿದೆ. ಕೋವಿಡ್
ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ ದಸರಾ ಆಚರಿಸಲಾಗುತ್ತಿದ್ದು, ಅ.7 ರಂದು ಬೆಳಿಗ್ಗೆ 8.15 ರಿಂದ 8.45 ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದೆ. ಅ.15 ರಂದು ವಿಜಯದಶಮಿ ದಿನ ಸಂಜೆ 4.36 ರಿಂದ 4.46ರ ಅವಧಿಯಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. 5.00 ರಿಂದ 5.30ರ ಒಳಗೆ ಜಂಬೂ ಸವಾರಿ ನಡೆಯಲಿದ್ದು, ಅರಮನೆ
ಆವರಣಕ್ಕೆ ಮಾತ್ರ ಸೀಮಿತವಾಗಿರಲಿದೆ. ಜಂಬೂ ಸವಾರಿಯಲ್ಲಿ ಎಂಟು ಆನೆಗಳು ಪಾಲ್ಗೊಳ್ಳಲಿವೆ.
ನವರಾತ್ರಿಯ ಎಲ್ಲಾ ದಿನ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ

ಇದನ್ನೂ ಓದಿ...

Back to top button
>