ನ.14ರಂದು ರೈತರೊಂದಿಗೆ ಕಾಲ ಕಳೆಯಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಆರಂಭಿಸಿರುವ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದ ಅಂಗವಾಗಿ ಸ್ಯಾಂಡಲ್'ವುಡ್'ನ ಜನಪ್ರಿಯ ನಟ ದರ್ಶನ್ ಅವರು, ನವೆಂಬರ್ 14 ರಂದು ಹಿರೇಕೆರೂರಿನ ರೈತರೊಂದಿಗೆ ಒಂದು ದಿನ ಕಾಲ ಕಳೆಯಲಿದ್ದಾರೆ.
ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಆರಂಭಿಸಿರುವ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದ ಅಂಗವಾಗಿ ಸ್ಯಾಂಡಲ್’ವುಡ್’ನ ಜನಪ್ರಿಯ ನಟ ದರ್ಶನ್ ಅವರು, ನವೆಂಬರ್ 14 ರಂದು ಹಿರೇಕೆರೂರಿನ ರೈತರೊಂದಿಗೆ ಒಂದು ದಿನ ಕಾಲ ಕಳೆಯಲಿದ್ದಾರೆ.
ಈ ಹಿಂದೆ ಯಡಿಯೂರಪ್ಪ ಸರ್ಕಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕ ಮಾಡಿತ್ತು. ಈ ಕೆಲಸಕ್ಕೆ ದರ್ಶನ್ ಅವರು ಸರ್ಕಾರದಿಂದ ಯಾವುದೇ ಸಂಭಾವನೆ ಬಯಸದೆಯೇ ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸಿವೆ.
‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮವನ್ನು ಕಳೆದ ವರ್ಷ ಮಂಡ್ಯ ಜಿಲ್ಲೆಯ ಜಿಲ್ಲೆಯ ಮದವಿನ ಕೋಡಿ ಗ್ರಾಮದಲ್ಲಿ 2020 ರ ನವೆಂಬರ್ 14 ರಂದು (ಅವರ ಜನ್ಮದಿನ) ಸಚಿವ ಪಾಟೀಲ್ ಅವರು ಪ್ರಾರಂಭಿಸಿದರು. ಬಿಸಿ. ಪಾಟೀಲ್ ಅವರು ಅಭಿನಯಿಸಿರುವ ಜನಮನ ಸೆಳೆದ ‘ಕೌರವ’ ಚಿತ್ರದ ಚಿತ್ರೀಕರಣ ಆ ಹಳ್ಳಿಯಲ್ಲಿ ನಡೆದಿತ್ತು. ಕಾರ್ಯಕ್ರಮವನ್ನು ಆರಂಭಿಸಿದ್ದ ಬಿಸಿ ಪಾಟೀಲ್ ಅವರು, ಅಂದು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಸೇರಿ ರೈತರೊಂದಿಗೆ ಕಾಲ ಕಳೆದಿದ್ದರು.
ರೈತರ ಸಮಸ್ಯೆಗಳನ್ನು ಅರಿತು ಪರಿಹಾರ ಕಂಡುಕೊಳ್ಳುವುದು, ಯಶಸ್ವಿ ರೈತರನ್ನು ಆಹ್ವಾನಿಸಿ ಅವರಿಂದ ಉತ್ತಮ ಕೃಷಿ ಪದ್ಧತಿಗಳ ಕುರಿತು ಇತರೆ ರೈತರಿಗೆ ಉಪನ್ಯಾಸ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಕಾರ್ಯಕ್ರವನ್ನು ತಿಂಗಳಿಗೆ ಎರಡು ಬಾರಿ ವಿವಿಧ ಜಿಲ್ಲೆಗಳಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಕಾರ್ಯಕ್ರಮವು ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಸೋಂಕು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಪುನರಾರಂಭಿಸಲಾಗಿದೆ.
ದರ್ಶನ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರ ಕುರಿತು ಮಾಹಿತಿ ನೀಡಿರುವ ನಟ ದರ್ಶನ್ ಅವರು, ನವೆಂಬರ್ 14 ರಂದು ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ನಡೆಯುವ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ನಟ ದರ್ಶನ್ ಪಾಲ್ಗೊಳ್ಳಲಿದ್ದಾರೆ. ದರ್ಶನ್ ನಮಗೆ ಉತ್ತಮ ಬೆಂಬಲ ನೀಡಿದ್ದಾರೆ. ಕೃಷಿಯಲ್ಲಿ ತೊಡಗಿಕೊಂಡಿರುವ ದರ್ಶನ್ ಅವರು, ಸರ್ಕಾರದ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಶ್ರಮಿಸಲಿದ್ದಾರೆ. ರೈತರು ಮತ್ತು ಸರ್ಕಾರದ ನಡುವಿನ ಅಂತರವನ್ನು ಕಡಿಮೆ ಮಾಡಲು ದರ್ಶನ್ ಸೇತುವೆಯಾಗಿ ಕೆಲಸ ಮಾಡಲಿದ್ದಾರೆಂದು ಹೇಳಿದ್ದಾರೆ.
ಆದರೆ, ಅಧಿಕಾರಿಗಳು ಮಾತ್ರ ಕಾರ್ಯಕ್ರಮದಲ್ಲಿ ದರ್ಶನ್ ಪಾಲ್ಗೊಳ್ಳುತ್ತಿರುವುದರ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ದರ್ಶನ್ ಭಾಗವಹಿಸಿದರೆ ದೊಡ್ಡ ಸಂಖ್ಯೆಯಲ್ಲಿ ಜನರು ಸೇರುತ್ತಾರೆ. ಈ ವೇಳೆ ನಟನನ್ನು ನೋಡಲು ಬರುವ ರೈತರು ಮತ್ತು ಸಾರ್ವಜನಿಕರ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಕಷ್ಟಕರವಾಗಿರುತ್ತದೆ ಎಂದು ತಿಳಿಸಿದ್ದಾರೆ.