Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ‘ಮೂಲಭೂತ ಹಕ್ಕಿಗೆ ಧಕ್ಕೆ’: ಮುನ್ನೆಚ್ಚರಿಕಾ ಬಂಧನ ಆದೇಶ ರದ್ದುಪಡಿಸಿದ ಹೈಕೋರ್ಟ್​
Latest News

‘ಮೂಲಭೂತ ಹಕ್ಕಿಗೆ ಧಕ್ಕೆ’: ಮುನ್ನೆಚ್ಚರಿಕಾ ಬಂಧನ ಆದೇಶ ರದ್ದುಪಡಿಸಿದ ಹೈಕೋರ್ಟ್​

Sambrama Prabha NewsBy Sambrama Prabha NewsNovember 24, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಪದೇ ಪದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವ ಆರೋಪಿಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸುವ ಸಂಬಂಧ ಪೊಲೀಸ್​ ಆಯುಕ್ತರು ಆದೇಶ ಹೊರಡಿಸಿದ ಬಳಿಕ, ಆದೇಶ ರದ್ದು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಂಧಿತರಿಗೆ ಮನವರಿಕೆ ಮಾಡದೇ ಇರುವುದು ಸಂವಿಧಾನ ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು.

ಇದೇ ವೇಳೆ, ಮಾದಕ ಪದಾರ್ಥ ಮತ್ತದರ ಉತ್ಪನ್ನಗಳ ಅಕ್ರಮ ಸಾಗಣೆ ತಡೆಗಟ್ಟುವಿಕೆಗೆ ಕಾಯ್ದೆ(ಎನ್​ಡಿಪಿಎಸ್​)ಯಡಿ ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಲು ಬೆಂಗಳೂರು ನಗರ ಪೊಲೀಸ್​ ಆಯುಕ್ತರು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ.

ಮಾದಕ ವಸ್ತುಗಳ ಸಾಗಣೆ ಆರೋಪದಲ್ಲಿ ದಾಖಲಾದ 3 ಪ್ರಕರಣಗಳಲ್ಲಿ ಜಾಮೀನು ಪಡೆದ ಆರೋಪಿಯೊಬ್ಬರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಿದ್ದ ಪೊಲೀಸ್​ ಆಯುಕ್ತರ ಕ್ರಮ ಪ್ರಶ್ನಿಸಿ, ಆರೋಪಿತರ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್​.ಮುದ್ಗಲ್​ ಮತ್ತು ನ್ಯಾ.ವೆಂಕಟೇಶ್​ ನಾಯಕ್​ ಟಿ. ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.

ಅಲ್ಲದೆ, ಎನ್​ಡಿಪಿಎಸ್​ ಕಾಯಿದೆಯ ಸೆಕ್ಷನ್ 9(ಎಫ್) ಸರ್ಕಾರ, ಬಂಧಿತರು ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸುವ ಅರ್ಜಿಯನ್ನು ಪರಿಗಣಿಸಬೇಕು ಎಂದು ತಿಳಿಸಿದೆ. ಆದರೆ, ಅರ್ಜಿದಾರರ ಮಗನ ವಿರುದ್ಧ ಹೊರಡಿಸಿರುವ ಬಂಧನ ಆದೇಶದಲ್ಲಿ ಈ ಕುರಿತು ಯಾವುದೇ ಅಂಶವನ್ನು ಪ್ರಸ್ತಾಪಿಸಿಲ್ಲ. ಇದು ಸುಪ್ರೀಂ ಕೋರ್ಟ್​ ಆದೇಶಗಳಿಗೆ ವಿರುದ್ಧವಾಗಿದೆ. ಒಬ್ಬ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿಸುವ ಸಂದರ್ಭದಲ್ಲಿ ಆ ವ್ಯಕ್ತಿಯ ವಿರುದ್ಧದ ಕ್ರಿಮಿನಲ್​ ನ್ಯಾಯಾಲಯಗಳು ನೀಡಿರುವ ಜಾಮೀನು ಸೇರಿ ಅವರ ವಿರುದ್ಧದ ಆದೇಶಗಳನ್ನು ಪರಿಗಣಿಸುವುದು ಅತ್ಯವಶ್ಯಕ. ಈ ಪ್ರಕರಣದಲ್ಲಿ ಬಂಧನ ಆದೇಶ ಹೊರಡಿಸಿರುವ ಪೊಲೀಸ್​ ಆಯುಕ್ತರು, ಆರೋಪಿಯ ವಿರುದ್ಧದ ಮೂರು ಕ್ರಿಮಿನಲ್ ಪ್ರಕರಣಗಳಲ್ಲಿ ಹೊರಡಿಸಲಾದ ಜಾಮೀನು ಆದೇಶ ಪರಿಗಣಿಸಿಲ್ಲ. ಹೀಗಾಗಿ ಅವರದ ಬಂಧನ ಆದೇಶ ಸಹ ಉಲ್ಲಂಘನೆಯಾಗಲಿದೆ ಎಂದು ತಿಳಿಸಿದೆ.

ಎನ್​ಡಿಪಿಎಸ್​ ಕಾಯ್ದೆಯ ಸೆಕ್ಷನ್ 3(2)ರ ಪ್ರಕಾರ, ರಾಜ್ಯ ಸರ್ಕಾರವು ಬಂಧನ ಆದೇಶವನ್ನು, ಸೆಕ್ಷನ್ 12(1)(b) ಅಡಿಯಲ್ಲಿ ಕೇಂದ್ರ ಸರ್ಕಾರ ರದ್ದುಪಡಿಸುವುದು ಮತ್ತು ಮಾರ್ಪಡಿಸಲು ಅವಕಾಶವಿರಲಿದೆ. ಆದ್ದರಿಂದ ಬಂಧನ ಆದೇಶ ಹೊರಡಿಸಿದ 10 ದಿನಗಳಲ್ಲಿ ಬಂಧನ ಆದೇಶ ರದ್ದು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಂಧಿತರಿಗೆ ತಿಳಿಸಬೇಕು. ಅದಕ್ಕೆ ಅವಕಾಶ ನೀಡಿಲ್ಲ. ಇದು ಸಂವಿಧಾನದ 22(5)ನೇ ವಿಧಿಯ ಅಡಿಯ ಮೂಲಭೂತ ಹಕ್ಕಿನ ಧಕ್ಕೆಯಾಗಲಿದೆ ಎಂದು ತಿಳಿಸಿ ಪೊಲೀಸ್​ ಆಯುಕ್ತರ ಆದೇಶ ರದ್ದುಪಡಿಸಿ ಆದೇಶಿಸಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಮೂಲಭೂತ ಹಕ್ಕಿಗೆ ಧಕ್ಕೆ
Add as Preferred on Google Follow on Google News
Share. WhatsApp Facebook Twitter Telegram
Previous Articleಮತ್ತೊಂದು ಡಿಕೆಶಿ ಆಪ್ತ ಬಣ ದೆಹಲಿ ಯಾತ್ರೆ
Next Article ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.