Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಇಂದು ಭಾರತದ ಸಂವಿಧಾನ ದಿನ
Nation News

ಇಂದು ಭಾರತದ ಸಂವಿಧಾನ ದಿನ

Sambrama Prabha NewsBy Sambrama Prabha NewsNovember 26, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಇಂದು ಭಾರತದ ಸಂವಿಧಾನ ದಿನ . ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ.

ಇಂದಿನ ಲೇಖನದಲ್ಲಿ ಸಂವಿಧಾನ ದಿನದ ಪ್ರಾಮುಖ್ಯೆತೆಯ ಜತೆಗೆ ವಿದ್ಯಾರ್ಥಿಗಳು ಈ ದಿನದಂದು ಭಾಷಣ ಮಾಡಲು, ಪ್ರಬಂಧಕ್ಕೆ ಪ್ರಮುಖ ಅಂಶಗಳ ಬಗ್ಗೆ ಇಲ್ಲಿ ತಿಳಿಸಿಕೊಡಲಾಗಿದೆ.

ಭಾರತ ಸಂವಿಧಾನ ದಿನದ ಭಾಷಣ ಮತ್ತು ಪ್ರಬಂಧಕ್ಕೆ ಸಲಹೆಗಳು

ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ.ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26 ರಂದು. ಈ ದಿನವನ್ನು ಗಣರಾಜೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ.ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು.ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ.ನವೆಂಬರ್ 26 ರಂದು ಸಂವಿಧಾನ ದಿನ ಆಚರಿಸುವಂತೆ 2015 ರ ನವೆಂಬರ್ 19 ಎಂದು ಭಾರತ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿತು. ಇದಕ್ಕೂ ಮೊದಲು 2015ರ ಅಕ್ಟೋಬರ್ 11 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದ್ದರು. ಅದರಂತೆ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

ಭಾಷಣ ಮತ್ತು ಪ್ರಬಂಧದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಸೇರಿಸಿ

  • ಭಾರತ ಸಂವಿಧಾನವು ಹಲವು ದೇಶದ ಸಂವಿಧಾನದ ಪ್ರಮುಖ ಅಂಶಗಳನ್ನು ಎರವಲು ಪಡೆದಿದೆ.
  • ಬ್ರಿಟನ್, ಐರ್‌ಲ್ಯಾಂಡ್, ಜಪಾನ್, ಯುಎಸ್‌ಎ, ದಕ್ಷಿಣ ಆಫ್ರಿಕಾ, ಜರ್ಮನಿ, ಆಸ್ಟ್ರೇಲಿಯಾ ಮತ್ತು ಕೆನಡಾ ದೇಶಗಳ ಸಂವಿಧಾನದ ಕೆಲವು ಅಂಶಗಳನ್ನು ಎರವಲು ಪಡೆದಿದೆ.
  • 2 ವರ್ಷ 11 ತಿಂಗಳು, 17 ದಿನಗಳ ಅವಧಿಯಲ್ಲಿ ರಚಿಸಿದ ಸಂವಿಧಾನ ನಮ್ಮದಾಗಿದೆ.
  • ಭಾರತ ಸಂವಿಧಾನ ಅತಿದೊಡ್ಡ ಕೈಬರವಣಿಗೆಯ ಡಾಕ್ಯುಮೆಂಟ್ ಹೊಂದಿರುವ ಸಂವಿಧಾನವಾಗಿದ್ದು, ಇಂಗ್ಲಿಷ್‌ನಲ್ಲಿ ಒಟ್ಟು 1,17,369 ಪದಗಳನ್ನು ಹೊಂದಿದೆ.
  • ಕೈ ಬರವಣಿಗೆಯಲ್ಲಿ ಬರೆದ ಮೂಲ ಸಂವಿಧಾನ ಪುಸ್ತಕವನ್ನು ಸಂಸತ್ತಿನ ಗ್ರಂಥಾಲಯದಲ್ಲಿ ಹೀಲಿಯಂ ನಿಂದ ಕೂಡಿದ ಕೇಸ್‌ನಲ್ಲಿ ಸುರಕ್ಷಿತವಾಗಿ ಇಡಲಾಗಿದೆ.
  • ಸಂವಿಧಾನ ಅಂಗೀಕಾರದ ನಂತರ ಗಣರಾಜ್ಯ ದೇಶದ ಮೊದಲ ರಾಷ್ಟ್ರಪತಿಯಾಗಿ ಡಾ. ಬಾಬು ರಾಜೇಂದ್ರ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿತ್ತು.
ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಭಾರತದ ಸಂವಿಧಾನ ದಿನ
Add as Preferred on Google Follow on Google News
Share. WhatsApp Facebook Twitter Telegram
Previous Articleಅಂಧರ T20 ವಿಶ್ವಕಪ್ ಗೆದ್ದ ತಂಡದಲ್ಲಿ ಮಲೆನಾಡಿನ ಹೆಮ್ಮೆಯ ಪುತ್ರಿ ಕಾವ್ಯ
Next Article 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ಶಿವಮೊಗ್ಗ-ತುಮಕೂರು ಚತುಷ್ಪಥ ಹೆದ್ದಾರಿ: 2027ರ ಮಾರ್ಚ್‌ಗೆ ಪೂರ್ಣ | ನಿತಿನ್ ಗಡ್ಕರಿ

August 1, 2026

ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?

July 29, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.