Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 5 ಜನ ಸೇರಿ 2 ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು, ತಪ್ಪೇನಿದೆ: ಸಚಿವ ಜಿ. ಪರಮೇಶ್ವರ್
Politics

5 ಜನ ಸೇರಿ 2 ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು, ತಪ್ಪೇನಿದೆ: ಸಚಿವ ಜಿ. ಪರಮೇಶ್ವರ್

Sambrama Prabha NewsBy Sambrama Prabha NewsDecember 6, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: “ಐದು ಜನ ಸೇರಿ ಎರಡು ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು. ಇದರಲ್ಲಿ ತಪ್ಪೇನಿದೆ” ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಪ್ರಶ್ನಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಸಚಿವರುಗಳು ಪರಸ್ಪರ ಭೇಟಿಯಾಗುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ಕ್ಷೇತ್ರಕ್ಕೆ ಮತ್ತು ಜಿಲ್ಲೆಗೆ ಕೆಲಸಗಳಾಗಬೇಕು. ಸತೀಶ್ ಜಾರಕಿಹೊಳಿ ಅವರು ಲೋಕೋಪಯೋಗಿ ಸಚಿವರಿದ್ದಾರೆ. ಬಹಳ ಮುಖ್ಯವಾದ ಖಾತೆ. ಹೀಗಾಗಿ ಭೇಟಿ ಮಾಡಲು ಹೋಗಿರುತ್ತೇವೆ. ಕೆಲವು ಸಂದರ್ಭಗಳಲ್ಲಿ ರಾಜಕೀಯ ಮಾತನಾಡಲು ಹೋಗಿರುತ್ತೇವೆ. ಇದರಲ್ಲಿ ಮುಚ್ಚುಮರೆ ಏನಿದೆ” ಎಂದ ಅವರು, “ಐದು ಜನ ಸೇರಿ ಎರಡು ಸಲ ಊಟಕ್ಕೆ ಸೇರಿ ರಾಜಕೀಯ ಮಾತನಾಡಿದ್ದೆವು. ಇದರಲ್ಲಿ ತಪ್ಪೇನಿದೆ. ನಾವೆಲ್ಲ ರಾಜಕಾರಣಿಗಳಲ್ಲವೇ?. ನಾವು ಮಾಡುತ್ತಿರುವುದೇ ರಾಜಕಾರಣ. ಪಕ್ಷದ ಸಿದ್ಧಾಂತಗಳೇನು, ಸರ್ಕಾರದಲ್ಲಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆಯೇ, ಇಲ್ಲವೇ ಎಂಬುದು ಸೇರಿದಂತೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆಯೂ ಮಾತನಾಡಿರುತ್ತೇವೆ. ಅದರಲ್ಲಿ ನಿಮಗೆ ಆಶ್ಚರ್ಯ ತರುವಂತದ್ದು ಏನು ಇಲ್ಲ” ಎಂದು ಪ್ರತಿಕ್ರಿಯಿಸಿದರು.

ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂಬುದನ್ನು ಸಮಂಜಸವಾದ ಉತ್ತರವನ್ನು ಸದನಕ್ಕೆ ನೀಡುತ್ತೇನೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದನ್ನು ಅಂಕಿ-ಅಂಶಗಳು ಹೇಳುತ್ತವೆ. ಯಾವುದೇ ಘಟನೆ ನಡೆದಿಲ್ಲ ಎಂದು ಹೇಳುವುದಿಲ್ಲ‌. ಅವರು ಆಡಳಿತ ನಡೆಸಿದಾಗ ಹೇಗಿತ್ತು, ಈಗ ಏನಿದೆ ಎಂಬುದನ್ನು ತಿಳಿಸುತ್ತೇನೆ. ಬಿಜೆಪಿ ಆಡಳಿತ ನಡೆಸುತ್ತಿರುವ ಬೇರೆ ರಾಜ್ಯಗಳಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ. ಬಿಜೆಪಿಯವರ ಅಧಿಕಾರಾವಧಿಯಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗಿತ್ತು, ಕಳೆದ ಎರಡು ವರ್ಷದಿಂದ ಹೇಗಿದೆ ಎಂಬುದನ್ನು ಸದನದಲ್ಲಿ ಹೇಳುತ್ತೇನೆ” ಎಂದರು.

“ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಡೆದ ಘಟನೆಗಳು ಯಾವ ಸರ್ಕಾರ ಅಧಿಕಾರದಲ್ಲಿತ್ತು ಎಂಬುದನ್ನು ಹೇಳುತ್ತೇನೆ. ನಾವು ಆಡಳಿತ ನಡೆಸುವಾಗ ಆಗಿದೆ ಎಂದಾಗ ಸೂಕ್ತವಾದ ಕ್ರಮ ತೆಗೆದುಕೊಂಡಿದ್ದೇವೆ. ಹಳೇ ವಿಡಿಯೋಗಳನ್ನು ಹಾಕಿ, ಈಗ ನಡೆದಿದ್ದು ಹೇಳಿರುವುದಕ್ಕೆ ಪ್ರತಿಯೊಂದು ಘಟನೆಯನ್ನು ತಿಳಿಸುತ್ತೇನೆ” ಎಂದು ಉತ್ತರಿಸಿದರು.

ಕಾಂಗ್ರೆಸ್​ ಗ್ರಾ.ಪಂಚಾಯತ್​ ಸದಸ್ಯನ ಹತ್ಯೆ ವಿಚಾರ: “ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣವನ್ನು ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯಾವ ಕಾರಣದಿಂದ ಹತ್ಯೆಯಾಗಿದೆ ಎಂಬುದರ ಬಗ್ಗೆ ತನಿಖೆಯ ವರದಿ ಬಂದರೆ ಗೊತ್ತಾಗುತ್ತದೆ. ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಚಿವ ಜಿ. ಪರಮೇಶ್ವರ್
Add as Preferred on Google Follow on Google News
Share. WhatsApp Facebook Twitter Telegram
Previous Articleಉಡುಪಿಯಲ್ಲಿ ನಾಳೆ ಬೃಹತ್ ಗೀತೋತ್ಸವ ಸಮಾರೋಪ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆಗಮನ
Next Article ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.