Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಜಯ, 12 ವರ್ಷಗಳ ಬಳಿಕ ಆಡಳಿತಕ್ಕೆ ಮರಳಿದ ಟೀಂ‌ ಇಂಡಿಯಾ ಮಾಜಿ ವೇಗಿ
Sports News

ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ ಬಣಕ್ಕೆ ಭರ್ಜರಿ ಜಯ, 12 ವರ್ಷಗಳ ಬಳಿಕ ಆಡಳಿತಕ್ಕೆ ಮರಳಿದ ಟೀಂ‌ ಇಂಡಿಯಾ ಮಾಜಿ ವೇಗಿ

Sambrama Prabha NewsBy Sambrama Prabha NewsDecember 8, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯಲ್ಲಿ 191 ಮತಗಳ ಅಂತರದಿಂದ ಜಯ ಸಾಧಿಸಿದ ಟೀಂ‌ ಇಂಡಿಯಾದ ಮಾಜಿ ಕ್ರಿಕೆಟಿಗ ಬಿ.ಕೆ.ವೆಂಕಟೇಶ್ ಪ್ರಸಾದ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಬೆಳಗ್ಗೆಯಿಂದ ನಡೆದ ಮತದಾನ ಪ್ರಕ್ರಿಯೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಹಲವು ಮಂದಿ ಸದಸ್ಯರು ಮತದಾನ ಮಾಡಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಿದೆ.

20 ಸುತ್ತುಗಳ ಮತದಾನ ಎಣಿಕೆ ಪ್ರಕ್ರಿಯೆಯಲ್ಲಿ ವೆಂಕಟೇಶ್ ಪ್ರಸಾದ್‌ಗೆ ಒಟ್ಟು 749 ಮತಗಳು ದೊರೆತರೆ, ಬ್ರಿಜೇಶ್ ಪಟೇಲ್ ಬಣದ ಕೆ.ಎನ್.ಶಾಂತಕುಮಾರ್ ಅವರಿಗೆ 558 ಮತಗಳು ಲಭಿಸಿವೆ. ಇದರೊಂದಿಗೆ ಪ್ರಸಾದ್‌ 191 ಮತಗಳ ಅಂತರದಿಂದ ಗೆದ್ದು ಅಧ್ಯಕ್ಷ ಗಾದಿಗೇರಿದ್ದಾರೆ.

ವೆಂಕಟೇಶ್ ಪ್ರಸಾದ್ ಬಣದಲ್ಲಿದ್ದ ಮತ್ತೋರ್ವ ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಬಿ – ಉಪಾಧ್ಯಕ್ಷ, ಸಂತೋಷ್ ಮೆನನ್ – ಪ್ರಧಾನ ಕಾರ್ಯದರ್ಶಿ, ಬಿ.ಎನ್.ಮಧುಕರ್ – ಖಜಾಂಚಿ, ಬಿ.ಕೆ.ರವಿ – ಜಂಟಿ‌ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಒಟ್ಟು 1,315 ಮತಗಳ ಚಲಾವಣೆಯಾಗಿವೆ. 2013 ರಲ್ಲಿ 1,351 ಮತಗಳ ಚಲಾವಣೆಗೊಂಡಿದ್ದವು.

12 ವರ್ಷಗಳ ಬಳಿಕ ಮತ್ತೆ ವೆಂಕಟೇಶ್ ಪ್ರಸಾದ್ ಯುಗಾರಂಭ: ಈ ಹಿಂದೆ 2013-2016ರವರೆ ಅನಿಲ್‌ ಕುಂಬ್ಳೆ‌ ಅವರು ಕೆಎಸ್‌ಸಿಎ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಸೇವೆ ಸಲ್ಲಿಸಿದ್ದರು. ಅದೇ ಅವಧಿಯಲ್ಲಿ‌ ಜಾವಗಲ್‌ ಶ್ರೀನಾಥ್‌ ಕಾರ್ಯದರ್ಶಿಯಾಗಿದ್ದರು. ಇದೀಗ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ‌ 12 ವರ್ಷಗಳ ಬಳಿಕ ಮತ್ತೆ ಕೆಎಸ್‌ಸಿಎ ಆಡಳಿತಕ್ಕೆ ವಾಪಸ್ಸಾಗಿದ್ದಾರೆ.

ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಪ್ರತಿಕ್ರಿಯಿಸಿದ ವೆಂಕಟೇಶ್ ಪ್ರಸಾದ್, “ಕೆಎಸ್‌ಸಿಎ ಇತಿಹಾಸದಲ್ಲಿ ಈ ಗೆಲುವು ಹೊಸ ಅಧ್ಯಾಯವಾಗಲಿದೆ. ಸದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಮಾಯವಾಗಿರುವ ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ ಅನ್ನ ಮತ್ತೆ ಮರಳಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನಿಸುವುದರ ಜೊತೆಗೆ ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ಧಿಗಾಗಿ ಅಗತ್ಯ ಕೆಲಸಗಳನ್ನು ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕೆಎಸ್‌ಸಿಎ ಚುನಾವಣೆ
Add as Preferred on Google Follow on Google News
Share. WhatsApp Facebook Twitter Telegram
Previous Articleಉಡುಪಿ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್​ಗೆ ಅಭಿನವ ಶ್ರೀ ಕೃಷ್ಣದೇವರಾಯ ಪ್ರಶಸ್ತಿ ನೀಡಿದ ಕೃಷ್ಣಮಠ
Next Article Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್

April 16, 2026

IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ

April 15, 2026

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್?

January 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.