ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿರುವ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಖಂಡಿಸಿ ಮತ್ತು 2ಬಿ ಮೀಸಲಾತಿ ಪುನರ್ ಸ್ಥಾಪಿಸಲು ಆಗ್ರಹಿಸಿ ನಿನ್ನೆಯಿಂದ ರಾಜ್ಯಾದ್ಯಂತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆಗಳನ್ನು ನಡೆಸುತ್ತಿದೆ.
ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಸಿದ್ದ ರಾಜ್ಯ ಸರ್ಕಾರ, ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ಹಾಗೂ ಈ ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲು ನಿರ್ಧರಿಸಿತ್ತು. (ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ವತಿಯಿಂದ ಪ್ರತಿಭಟನೆ)
2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ಹಿಂದುಳಿದ ವರ್ಗ(EWS) ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. (ಎಸ್‌ಡಿಪಿಐ ಮೈಸೂರು ಜಿಲ್ಲಾ ವತಿಯಿಂದ ಪ್ರತಿಭಟನೆ)
ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ, 2ಸಿಯಲ್ಲಿರುವ ಒಕ್ಕಲಿಗರಿಗೆ ಶೇ. 4ರಿಂದ ಶೇ. 6ರಷ್ಟು ಹಾಗೂ 2ಡಿಯಲ್ಲಿರುವ ವೀರಶೈವ ಹಾಗೂ ಲಿಂಗಾಯತರಿಗೆ ಶೇ. 5ರಿಂದ ಶೇ. 7ರಷ್ಟು ಮೀಸಲಾತಿ ಹೆಚ್ಚಳವಾಗಲಿದೆ. (ಎಸ್‌ಡಿಪಿಐ ಗುಲ್ಬರ್ಗ ಜಿಲ್ಲಾ ವತಿಯಿಂದ ಪ್ರತಿಭಟನೆ)
ಇದನ್ನು ತೀವ್ರವಾಗಿ ಖಂಡಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), 2ಬಿ ಮೀಸಲಾತಿ ಪುನರ್ ಸ್ಥಾಪಿಸಲು ಆಗ್ರಹಿಸಿ ನಿನ್ನೆಯಿಂದ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. (ಎಸ್‌ಡಿಪಿಐ ಚಿಕ್ಕಮಗಳೂರು ಜಿಲ್ಲಾ ವತಿಯಿಂದ ಪ್ರತಿಭಟನೆ)
ದೇಶದ ಮತ್ತು ರಾಜ್ಯದ ಈ ವರೆಗಿನ ಎಲ್ಲಾ ಆಯೋಗಗಳು ಮುಸ್ಲಿಮರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯ ಎಂದು ಗುರುತಿಸಿದೆ. ಆದರೆ ಬಿಜೆಪಿ ಸರ್ಕಾರ ಮುಸ್ಲಿಮರ 2B ಮೀಸಲಾತಿ ರದ್ದು ಪಡಿಸಿ, ಮುಸ್ಲಿಮರಿಗೆ ಐತಿಹಾಸಿಕ ದ್ರೋಹ ಮಾಡಿದೆ. (ಎಸ್‌ಡಿಪಿಐ ಬಿಜಾಪುರ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ)
ಪ್ರಜ್ಞಾವಂತ ಒಕ್ಕಲಿಗರು ಮತ್ತು ಲಿಂಗಾಯತರು ಮುಸ್ಲಿಮರಿಂದ ಕಿತ್ತು ಕೊಟ್ಟ ಈ ಕೋಟ ಧಿಕ್ಕರಿಸಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ. (ಎಸ್‌ಡಿಪಿಐ ರಾಯಚೂರು ಜಿಲ್ಲಾ ವತಿಯಿಂದ ಪ್ರತಿಭಟನೆ)
ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಸಿಎಂ ಬೊಮ್ಮಾಯಿ, ನ್ಯಾಯ ನೀಡುವಾಗ ಇತರರಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ. ಇದನ್ನು ಜಾರಿಗೆ ತರಲು ಯಾರಿಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. (ಎಸ್‌ಡಿಪಿಐ ಬಾಗಲಕೋಟೆ ಜಿಲ್ಲಾ ವತಿಯಿಂದ ಪ್ರತಿಭಟನೆ)