ರಾಜಕೀಯರಾಜ್ಯ

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ: ಚುನಾವಣಾ ಮೂಡ್‌ನಲ್ಲಿ ಕರ್ನಾಟಕ

Countdown to state assembly election date announcement: Karnataka in election mood

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು (ಮಾ.29-ಬುಧವಾರ) ದಿನಾಂಕ ಘೋಷಣೆ ಆಗಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ, ಕೇಂದ್ರ ಚುನಾವಣಾ ಆಯೋಗ ಈ ವಿಚಾರವಾಗಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಲಿದೆ.

ಬೆಳಗ್ಗೆ 11.30ಕ್ಕೆ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣೆಯ ವೇಳಾಪಟ್ಟಿಯನ್ನು ಘೋಷಣೆ ಮಾಡಲಿದ್ದಾರೆ. ಎಷ್ಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂಬುದು ಚುನಾವಣಾ ಆಯೋಗದ ಸುದ್ದಿಗೋಷ್ಠಿ ಬಳಿಕ ಸ್ಪಷ್ಟವಾಗಲಿದೆ.

2018ರ ಮೇ 12 ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಮತದಾನ ನಡೆದು ಮೂರು ದಿನಗಳ ನಂತರ ಫಲಿತಾಂಶಗಳನ್ನು ಘೋಷಿಸಲಾಗಿತ್ತು.

 

ಇದನ್ನೂ ಓದಿ...

Back to top button
>