• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶಾಲೆಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಸರ್ಕಾರಕ್ಕೆ ಒತ್ತಾಯ

Sambrama Prabha News by Sambrama Prabha News
December 10, 2025
in Nation News
0
ಶಾಲೆಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಬೇಕು: ಸುಧಾ ಮೂರ್ತಿ ಸರ್ಕಾರಕ್ಕೆ ಒತ್ತಾಯ

Updated By: Priyalachhi

ನವದೆಹಲಿ: ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಂದೇ ಮಾತರಂ ರಚನೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ವಂದೇ ಮಾತರಂ ಗೀತೆ ದೇಶವನ್ನು ಒಂದುಗೂಡಿಸುವ ಸೂತ್ರ ಎಂದು ಕರೆದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರ ಗೀತೆ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ನಾನು ಇಲ್ಲಿ ಸಂಸದೆಯಾಗಿ, ಲೋಕೋಪಕಾರಿ ಅಥವಾ ಲೇಖಕಿಯಾಗಿ ನಿಂತಿಲ್ಲ. ಮಂದರ್ ಇಂಡಿಯಾ ಅಥವಾ ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ ಎಂದು ಹೇಳಿದರು.

ಭಾರತದಲ್ಲಿರುವ ಪ್ರತಿ ರಾಜ್ಯವು ಬಣ್ಣ ಬಣ್ಣದ ತುಂಡಿನ ಬಟ್ಟೆಯಂತೆ. ಆ ಎಲ್ಲಾ ತುಂಡುಗಳನ್ನು ಒಟ್ಟಿಗೆ ಬೆಸೆಯುವ ದಾರ ಮತ್ತು ಸೂಜಿಯೇ ಈ ವಂದೇ ಮಾತರಂ ಗೀತೆ. ಇದು ಕೇವಲ ಭೂಪಟ ಅಥವಾ ಧ್ವಜವಲ್ಲ, ಇದು ಭೂಮಿಯನ್ನು ತಾಯ್ನಾಡು ಎಂದು ಪರಿಗಣಿಸುವ ಪರಿಕಲ್ಪನೆ. ಇದು ಕೇವಲ ಭೂಮಿಯ ತುಂಡಲ್ಲ, ಇದು ಮಾತೃಭೂಮಿʼ ಎಂದು ಸುಧಾ ಮೂರ್ತಿ ಅವರು ವರ್ಣಿಸಿದರು.

Tags: ಸುಧಾ ಮೂರ್ತಿ
Previous Post

ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದಲ್ಲಿ ಎಲ್ಲರ ಗಮನ ಸೆಳೆದ ಮತ್ಸ್ಯ 6000 ಜಲಾಂತರ್ಗಾಮಿ

Next Post

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ ‘ಹ್ಯಾಕ್’ ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

Next Post
EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ ‘ಹ್ಯಾಕ್’ ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

EVMs ಅಲ್ಲವೇ ಅಲ್ಲ, ಪ್ರಧಾನಿ ಮೋದಿ ಇದನ್ನೇ 'ಹ್ಯಾಕ್' ಮಾಡಿದ್ದಾರೆ! ಲೋಕಸಭೆಯಲ್ಲಿ ಕಂಗನಾ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.