Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಾಮಾಜಿಕ ಭ್ರದತಾ ಯೋಜನೆಯಡಿ 24.50 ಲಕ್ಷ ಅಕ್ರಮ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ: ಕೃಷ್ಣ ಭೈರೇಗೌಡ
Politics

ಸಾಮಾಜಿಕ ಭ್ರದತಾ ಯೋಜನೆಯಡಿ 24.50 ಲಕ್ಷ ಅಕ್ರಮ ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ: ಕೃಷ್ಣ ಭೈರೇಗೌಡ

Sambrama Prabha NewsBy Sambrama Prabha NewsDecember 12, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಳಗಾವಿ: ಸದ್ಯ ರಾಜ್ಯದಲ್ಲಿ ನಿಖರವಾಗಿ ಕುಟುಂಬದ ಆದಾಯ ನಿರ್ಧರಿಸುವ ವ್ಯವಸ್ಥೆಯಿಲ್ಲ. ಇದರ ಲಾಭ ಪಡೆದು ಕೆಳ ಹಂತದ ಅಧಿಕಾರಿಗಳು ಆದಾಯ ಪ್ರಮಾಣ ಪತ್ರಗಳನ್ನು ಮನಬಂದಂತೆ ನೀಡುತ್ತಿದ್ದಾರೆ. ಇದರ ಫಲವಾಗಿ ರಾಜ್ಯದ ಸಾಮಾಜಿಕ ಭದ್ರತಾ ಯೋಜನೆಗಳು ದುರ್ಬಳಕೆಯಾಗುತ್ತಿದೆ. ಸುಮಾರು 24.50 ಲಕ್ಷ ಅಕ್ರಮ ಫಲಾನುಭವಿಗಳು ಯೋಜನೆಯ ಲಾಭ ಪಡೆಯುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ ನೀಡಿದರು.

ಗುರುವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು. ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳ ಆಧಾರ್ ಜೋಡಣೆ ಸಂದರ್ಭದಲ್ಲಿ ನಿಗದಿಪಡಿಸಿದ ವಯೋಮಿತಿಗೂ ಕಡಿಮೆ ವಯಸ್ಸಿನವರು ಸೌಲಭ್ಯ ಪಡೆಯುತ್ತಿದ್ದಾರೆ. ಇದರೊಂದಿಗೆ ಸುಮಾರು 10 ಸಾವಿರಕ್ಕೂ ಅಧಿಕ ಆದಾಯ ತೆರಿಗೆ ಪಾವತಿದಾರರು, ಹೆಚ್.ಆರ್.ಎಂ.ಎಸ್‍ನಲ್ಲಿ ಮಾಹಿತಿ ಇರುವ ಸರ್ಕಾರಿ ನೌಕರರು ಸಹ ಸಾಮಾಜಿಕ ಭದ್ರತಾ ಯೋಜನೆಯ ಸೌಲಭ್ಯ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಅಕ್ರಮ ಫಲಾನುಭವಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ. ಕೂಡಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿಸಲ್ಲಿಸುವ ಆದಾಯ ಮಿತಿಯನ್ನು ಬಿ.ಪಿ.ಎಲ್. ಕಾರ್ಡು ಮಾದರಿಯಲ್ಲಿ 1.2 ಲಕ್ಷಕ್ಕೆ ಹೆಚ್ಚಿಸುವಂತೆ ಮನವಿಗಳು ಕೇಳಿಬಂದಿವೆ. ಸದ್ಯ ಸರ್ಕಾರದ ಗೃಹಲಕ್ಷ್ಮಿ ಸೇರಿದಂತೆ ಪಂಚ ಗ್ಯಾರಂಟಿ ಹಾಗೂ ಇತರ ಯೋಜನೆಗಳಿಂದಲೇ ಪ್ರತಿ ಕುಟುಂಬಕ್ಕೆ 32,000 ಕ್ಕಿಂತಲೂ ಹೆಚ್ಚು ಹಣ ಜಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಟುಂಬದ ಆದಾಯಮಿತಿ ನಿಖರವಾಗಿ ನಿರ್ಧರಿಸುವ ವ್ಯವಸ್ಥೆ ಜಾರಿಗೊಳಿಸಿದ ಬಳಿಕ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಗೆ ಆದಾಯ ಮಿತಿ ಹೆಚ್ಚಿಸುವುದಾಗಿ ಉತ್ತರಿಸಿದರು.

ಡೀಮ್ಡ್ ಅರಣ್ಯ ವೀಸ್ತಿರ್ಣ ಪುನರ್‍ಪರಿಶೀಲನೆಗೆ ಸಮಿತಿ ರಚನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರಿಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ವರದಿ ಮಂಡಿಸಿ, ಎಲ್ಲಾ ಶಾಸಕರಿಗೂ ಮಾಹಿತಿ ನೀಡುವಂತೆ ಇಲಾಖೆಯಿಂದ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ 36992 ಹೆಕ್ಟೇರ್ ಮೀಸಲು, 545.65 ಹೆಕ್ಟೇರ್ ಗ್ರಾಮ, 2885.59 ಹೆಕ್ಟೇರ್ ರಕ್ಷಿತ, ಸೆಕ್ಷೆನ್ 04 ಅಡಿ 1047.55 ಹೆಕ್ಟೇರ್, 5529.89 ಹೆಕ್ಟೇರ್ ವರ್ಗೀಕರಿಸಿದ ಹಾಗೂ 4986.70 ಹೆಕ್ಟೇರ್ ಪರಿಭಾವಿತ ಅರಣ್ಯವಿದೆ. ಒಟ್ಟಾರೆ ಜಿಲ್ಲೆಯಲ್ಲಿ 51987 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಕಂದಾಯ, ಮೋಜಿಣಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಮೋಜಿಣಿ ಕಾರ್ಯಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ಪ್ರದೇಶವನ್ನು ಗುರುತಿಸಿದ್ದಾರೆ. ಕರ್ನಾಟಕ ಅರಣ್ಯ ಕಾಯಿದೆ 1964ರ ಕಲಂ 64(ಎ) ಅನ್ವಯ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ ಎಂದರು.

ಒಮ್ಮೆ ಪಹಣಿಯಲ್ಲಿ ಅರಣ್ಯ ಎಂದು ನಮೂದಾದರೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಅನುಮತಿ ಪಡೆಯದೇ ಸಂಬಂದಿಸಿದ ಜಮೀನನ್ನು ಯಾರಿಗೂ ಮಂಜೂರು ಮಾಡಲು ಬರುವುದಿಲ್ಲ. ಸರ್ವೋಚ್ಛ ನ್ಯಾಯಾಲಯವು ಸಹ ಒಮ್ಮೆ ಅರಣ್ಯ ಎಂದರೆ ಸದಾ ಅರಣ್ಯ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ. ಖಾಸಗಿ ಹಾಗೂ ಪಟ್ಟಾ ಜಮೀನು ಹೊಂದಿರವ ಯಾರನ್ನು ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ಬಂಗಾರಪೇಟೆ ತಾಲೂಕಿನ ಇಂದಿರಾಗಾಂಧಿ ಪಾರ್ಕ್ ಅಭಿವೃದ್ಧಿ ಪಡಿಸಲು 2016-17 ರಿಂದ 2025-26 ರವರೆಗೆ ರೂ.2.37 ಕೋಟಿ ಅನುದಾನ ನೀಡಲಾಗಿದೆ. ಅಗತ್ಯವಿದ್ದಲ್ಲಿ ಶಾಸಕರ ಬೇಡಿಕೆ ಮೇರೆಗೆ ಅನುದಾನ ಒದಗಿಸಲಾಗುವುದು. ಮಾಲೂರು ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ತಡೆಗಟ್ಟಲು 74.43 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸಲಾಗಿದೆ. ತಂತಿಬೇಲಿ ನಿರ್ವಹಣೆ ಅಗತ್ಯ ಇರುವ ಅನುದಾನವನ್ನು ಸಹ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕೃಷ್ಣ ಭೈರೇಗೌಡ
Add as Preferred on Google Follow on Google News
Share. WhatsApp Facebook Twitter Telegram
Previous Articleಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ 300 ವಿದೇಶಿ ಪ್ರಜೆಗಳ ಗಡಿಪಾರು
Next Article ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.