Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಜಿಬಿಎ ಚುನಾವಣೆಗೆ ಸೋಮವಾರದಿಂದ 369 ವಾರ್ಡ್ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ
Politics

ಜಿಬಿಎ ಚುನಾವಣೆಗೆ ಸೋಮವಾರದಿಂದ 369 ವಾರ್ಡ್ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ

Sambrama Prabha NewsBy Sambrama Prabha NewsDecember 15, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು/ನವದೆಹಲಿ: ಸೋಮವಾರದಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್​ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾತನಾಡಿದ ಅವರು, ಶನಿವಾರ ಸಚಿವರ ಜೊತೆ ಚರ್ಚಿಸಿ ಈ ಅರ್ಜಿ ಜೊತೆಗೆ ಪಡೆಯುವ ಹಣವನ್ನು ಪಕ್ಷದ ಕಟ್ಟಡ ನಿಧಿಗೆ ಬಳಸಲು ತೀರ್ಮಾನಿಸಲಾಗಿದೆ. ಸಾಮಾನ್ಯ ವರ್ಗಕ್ಕೆ 50 ಸಾವಿರ, ಮಹಿಳೆಯರು ಹಾಗೂ ಪರಿಶಿಷ್ಟ ಸಮುದಾಯದವರಿಗೆ 25 ಸಾವಿರ ರೂ. ನಿಗದಿಪಡಿಸಲಾಗಿದೆ. ಆನ್​ಲೈನ್ ಅರ್ಜಿ ಹಾಕಲು ಅವಕಾಶ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮತಗಳ್ಳತನ ಹೋರಾಟ ಮುಂದುವರಿಕೆ: ಮತಗಳ್ಳತನ ವಿರುದ್ಧದ ಹೋರಾಟ ಇಲ್ಲಿಗೆ ಮುಗಿಯುವುದೇ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಲು ಮತಗಳ್ಳತನ ವಿರುದ್ಧ ನಾವು ಆರಂಭಿಸಿರುವ ಹೋರಾಟ ಮುಂದುವರೆಯಲಿದೆ. ಪ್ರತಿ ಕ್ಷೇತ್ರದಲ್ಲಿ ನಾವು ಲೀಗಲ್ ಬ್ಯಾಂಕ್ ಸ್ಥಾಪಿಸುತ್ತೇವೆ. ನಮ್ಮ ಪಕ್ಷದ ಪರ ಇರುವ ವಕೀಲರನ್ನು ಇದರಲ್ಲಿ ಸೇರಿಸಲಾಗುವುದು. ಇವರು ನಮ್ಮ ಕಾರ್ಯಕರ್ತರಿಗೆ ಕಾನೂನು ಸಲಹೆ ನೀಡುತ್ತಾರೆ ಎಂದರು.

ಜಿ.ಸಿ. ಚಂದ್ರಶೇಖರ್ ಅವರು ಬಿಎಲ್​ಎ ಗುರುತಿನ ಚೀಟಿ ನೀಡಲು ತಯಾರು ಮಾಡಿಕೊಂಡಿದ್ದಾರೆ. ಎಐಸಿಸಿಯಿಂದ ಒಪ್ಪಿಗೆ ಪಡೆಯಲು ತೆಗೆದುಕೊಂಡು ಹೋಗಲಾಗುವುದು. ನಾವು ಇಡೀ ದೇಶದಲ್ಲಿಯೇ ಅತಿಹೆಚ್ಚು ಸಹಿ ಸಂಗ್ರಹ ಮಾಡಿದ್ದೇವೆ ಎಂದು ಡಿಕೆಶಿ ತಿಳಿಸಿದರು.

ಜನರ ಉತ್ಸಾಹ ಮುಂದಿನ ಚುನಾವಣೆಗಳಿಗೆ ನಾಂದಿ: ದೆಹಲಿ ಪ್ರತಿಭಟನೆಯಲ್ಲಿ ಜನರಲ್ಲಿದ್ದ ಉತ್ಸಾಹವು 2028 ಹಾಗೂ 2029ರ ಚುನಾವಣೆಗೆ ನಾಂದಿ ಹಾಡಿದೆ. ಈ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯತೆ ಇದೆ ಎಂದು ಪಕ್ಷ ಉಳಿಸಿಕೊಳ್ಳಲು ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದರಿಂದ ಸಂತೋಷವಾಗಿದೆ, ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ. ಅಧಿಕಾರ ಸಿಗದ ಕಾರ್ಯಕರ್ತರು ಕೂಡ ತಮ್ಮ ಹಣದಲ್ಲಿ ಈ ಪ್ರತಿಭಟನೆಗೆ ಆಗಮಿಸಿದ್ದಾರೆ ಎಂದರು.

ನಾಯಕರು ಕುಶಲೋಪರಿ ವಿಚಾರಿಸುತ್ತಾರೆ: ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಕೇಳಿದಾಗ, ನಮ್ಮ ನಾಯಕರಿಗೆ ನನ್ನನ್ನು ನೋಡಿದ ತಕ್ಷಣ ಅರ್ಥವಾಗುತ್ತದೆ. ನನ್ನ ಕುಶಲೋಪರಿ ವಿಚಾರಿಸುತ್ತಾರೆ. ಇದು ಸೌಹಾರ್ದಯುತ ಭೇಟಿ, ವೈಯಕ್ತಿಕ ಭೇಟಿ ಅಲ್ಲ. ಇದರ ಹೊರತಾಗಿ ಬೇರೆ ವಿಚಾರಗಳನ್ನು ನಿಮ್ಮ ಮುಂದೆ ಬಹಿರಂಗಪಡಿಸಲು ಆಗುವುದಿಲ್ಲ. ಅದರ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಬಹಳ ವರ್ಷಗಳ ನಂತರ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, ಇದು ಸುಳ್ಳು, ನಾವು ಭೇಟಿಯಾಗಿದ್ದಾಗ ಹೇಳಿಕೊಳ್ಳುವುದಿಲ್ಲ ಎಂದರು.

ಭಾನುವಾರದ ಭೇಟಿಯಲ್ಲಿ ನಿಮಗೆ ಅಭಯ ಸಿಕ್ಕಿದೆಯಂತೆ, ಸಮಸ್ಯೆ ಬಗೆಹರಿಯಲಿದೆ ಎಂದು ಕೇಳಿದಾಗ, ನಿಮ್ಮ ಅರ್ಥ ಏನಿದೆಯೋ, ನನಗೆ ಯಾವ ಸಮಸ್ಯೆ ಇಲ್ಲ. ನೀವು ಸಮಸ್ಯೆ ಸೃಷ್ಟಿಸುತ್ತಿದ್ದೀರಿ ಎಂದು ಪ್ರತಿಕ್ರಿಯಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಿಸಿಎಂ
Add as Preferred on Google Follow on Google News
Share. WhatsApp Facebook Twitter Telegram
Previous Articleಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಇರುವ ವರದಿ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ: ಸಚಿವ ದಿನೇಶ್ ಗುಂಡೂರಾವ್
Next Article ಬಿವೈವಿ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದರೆ ಇಡೀ ಬಣ್ಣವನ್ನು ವಿಸ್ತಾರವಾಗಿ ಕೋರ್ಟ್​ಗೆ ತಿಳಿಸುತ್ತೇನೆ: ಶಾಸಕ ಯತ್ನಾಳ್​
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.