ರಾಜಕೀಯರಾಜ್ಯ

ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ‘ಮಾರಾಟ’ ಎನ್ನುವುದೇಕೆ?’ ಕಿಚ್ಚನ ಬಗ್ಗೆ ಚೇತನ್‌ ಮಾತು..

If a movie star joins the BJP, why do the liberals call it a 'sale'?' Chetan's words about Kich

ಕಿಚ್ಚ ಸುದೀಪ್‌ ಬಿಜೆಪಿ ಸೇರ್ಪಡೆ ಆಗಲಿದ್ದಾರೆ… ಇಂದು ಪಕ್ಷ ಸೇರ್ಪಡೆ ಆಗಿ, ವಿಧಾನ ಸಭೆ ಚುನಾವಣೆಗೂ ಸ್ಪರ್ಧಿಸಲಿದ್ದಾರೆ ಎಂಬಿತ್ಯಾದಿ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಅಭಿಮಾನಿ ವಲಯದಲ್ಲಿಯೂ ಕುತೂಹಲ ಮೂಡಿತ್ತು. ಆದರೆ, ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು. ಜತೆಗೆ ಈ ಸಲದ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಸುದೀಪ್ ಹೇಳಿದ್ದಾರೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ, ನಟ ಚೇತನ್‌ ಅಹಿಂಸಾ, ಪ್ರತಿಕ್ರಿಯೆ ನೀಡಿದ್ದಾರೆ.

ಚೇತನ್‌ ಅಹಿಂಸಾ ಹೇಳಿಕೆ ಏನು?

“ಸಿನಿಮಾ ತಾರೆಯೊಬ್ಬರು ಬಿಜೆಪಿ ಪಕ್ಷಕ್ಕೆ ಸೇರಿದರೆ ಉದಾರವಾದಿಗಳು ಅದನ್ನು ‘ಮಾರಾಟ’ ಎನ್ನುತ್ತಾರೆ — ಏಕೆ? ಏಕೆಂದರೆ ಈ ಉದಾರವಾದಿಗಳು ಈಗಾಗಲೇ ಕಾಂಗ್ರೆಸ್‌/ಜೆಡಿಎಸ್/ಎಎಪಿ ಅಂತಹ ವ್ಯವಸ್ಥಿತ ರಾಜಕೀಯ ಹಿಂದೂ ಶಕ್ತಿಗಳಿಗೆ ‘ಮಾರಾಟ’ ಆಗಿದ್ದಾರೆ.

ನೆನಪಿಡಿ: ಬಿಜೆಪಿ ಮಾತ್ರ ಶತ್ರು ಎಂದು ಹೇಳುವವರು ಕೂಡ ನಮ್ಮ ಶತ್ರುಗಳು. ನಾವು ಅನ್ಯಾಯದ ಮತ್ತು ಅಸಮಾನತೆಯ ಸಂಪೂರ್ಣ ವ್ಯವಸ್ಥೆಯ ವಿರುದ್ಧ ಹೋರಾಡಬೇಕು” ಎಂದು ಚೇತನ್‌ ಅಹಿಂಸಾ ಫೇಸ್‌ಬುಕ್‌ನಲ್ಲಿ ಈ ಬರಹವನ್ನು ಪೋಸ್ಟ್‌ ಮಾಡಿದ್ದಾರೆ.

ಅಂಬಿ ಸ್ಮಾರಕ ನಿರ್ಮಾಣಕ್ಕೆ ಸಾರ್ವಜನಿಕರ ಹಣ ಬಳಸುವ ಜರೂರತ್ತೇನಿತ್ತು?

ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರ ಎರಡು ಎಕರೆ ಜಾಗದಲ್ಲಿ ಅಂಬಿ ಸ್ಮಾರಕ ನಿರ್ಮಾಣ ಮಾಡಿದೆ. ಇದಕ್ಕೆ 12 ಕೋಟಿ ರೂಪಾಯಿಗಳನ್ನೂ ಸರ್ಕಾರ ವ್ಯಯಿಸಿದೆ. ಇದನ್ನು ಖಂಡಿಸಿರುವ ಚೇತನ್‌ ಇತ್ತೀಚೆಗಷ್ಟೇ ಸೋಷಿಯಲ್‌ ಮೀಡಿಯಾದಲ್ಲಿ ಈ ವಿಚಾರವನ್ನು ಟೀಕಿಸಿದ್ದರು. ಅವರ ಟ್ವಿಟ್‌ ಹೀಗಿತ್ತು..

‘ಅಂಬರೀಶ್ ಯಾರನ್ನೂ ಕೈ ಚಾಚಿದವರಲ್ಲ’- ಸುಮಲತಾ

(ಅನಗತ್ಯ) ಅಂಬರೀಶ್ ಸ್ಮಾರಕಕ್ಕೆ ಸುಮಲತಾರವರು ಅಂದಾಜು ಎರಡು ಎಕರೆ ಜಾಗ & 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ‘ಕೈ ಚಾಚಿ’ ಪಡೆದಿರುವುದು ವಿಪರ್ಯಾಸವಾಗಿದೆ.

ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾರವರು ತಮ್ಮ ಸ್ವಂತ 23.4 ಕೋಟಿ ರೂ.ಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ?

ಎಲ್ಲಾ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ? ಎಂದಿದ್ದಾರೆ..

ಇದನ್ನೂ ಓದಿ...

Back to top button
>