BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯ ಉದ್ಯಮಿ ಸೇರಿ ಇಬ್ಬರ ಬಂಧನ

Author Picture
Published On: December 20, 2025

—Advertisement—

Updated By: Priyalachhi

ಬಳ್ಳಾರಿ/ಎರ್ನಾಕುಲಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳವು ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಶುಕ್ರವಾರ ಬಳ್ಳಾರಿಯ ಚಿನ್ನದ ಉದ್ಯಮಿ ಸೇರಿದಂತೆ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಬರಿಮಲೆ ದೇಗುಲದಲ್ಲಿ ಕಲಾಕೃತಿಗಳಿಗೆ ವಿದ್ಯುತ್‌ ಲೇಪನ ಮಾಡಿದ್ದ ‘ಸ್ಮಾರ್ಟ್ ಕ್ರಿಯೇಷನ್ಸ್’ ಸಿಇಒ ಪಂಕಜ್ ಭಂಡಾರಿ ಹಾಗೂ ಬಳ್ಳಾರಿಯ ಚಿನ್ನದ ಉದ್ಯಮಿ ಗೋವರ್ಧನ್ ಬಂಧಿತ ಆರೋಪಿಗಳು. ಇವರಿಬ್ಬರನ್ನು ವಶಕ್ಕೆ ಪಡೆದು ತಿರುವನಂತಪುರದಲ್ಲಿರುವ ಅಪರಾಧ ವಿಭಾಗದ ಕಚೇರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿ, ಬಳಿಕ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಹಿಂದೆ ಪ್ರಕರಣ ಸಂಬಂಧ ಕೇರಳದ ಟಿಡಿಬಿಯ ಮಾಜಿ ಆಡಳಿತಾಧಿಕಾರಿ ಎಸ್. ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. 2019ರಲ್ಲಿ ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದ್ವಾರಪಾಲಕರ ಮೂರ್ತಿಗಳು ಹಾಗೂ ಗರ್ಭಗುಡಿಯ ದ್ವಾರಕ್ಕೆ ವಿದ್ಯುತ್ ಲೇಪನಕ್ಕಾಗಿ ಸ್ಮಾರ್ಟ್ ಕ್ರಿಯೇಷನ್‌ಗೆ ತೆಗೆದಕೊಂಡು ಹೋಗಿದ್ದ. ಆ ವೇಳೆ ಅದರಲ್ಲಿದ್ದ ಚಿನ್ನವನ್ನು ತೆಗೆಯಲಾಗಿದೆ ಎನ್ನುವುದು ಎಸ್‌ಐಟಿ ತನಿಖೆಯಲ್ಲಿ ಗೊತ್ತಾಗಿದೆ. ವಿದ್ಯುತ್ ಲೇಪನದ ವೇಳೆ 400 ಗ್ರಾಂಗೂ ಅಧಿಕ ಚಿನ್ನವನ್ನು ತೆಗೆದು ಅದನ್ನು ಗೋವರ್ಧನ್​ಗೆ ಹಸ್ತಾಂತರಿಸಲಾಗಿದೆ ಎಂದು ಪೊಟ್ಟಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ದ್ವಾರಪಾಲಕ ಮೂರ್ತಿಗಳ ಚಿನ್ನಗಳವು ಸಂಬಂಧ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಪ್ರಕರಣದದಲ್ಲಿ ಪಂಕಜ್ ಭಂಡಾರಿ ಹಾಗೂ ಗೋವರ್ಧನ್​ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿತ್ತು. ವಿಚಾರಣೆ ವೇಳೆ, ಹೆಚ್ಚಿನ ಸಾಕ್ಷಿಗಳು ಪತ್ತೆಯಾಗಿದ್ದವು. ಈಗಾಗಲೇ ಎಸ್‌ಐಟಿ ಗೋವರ್ಧನ್​ ಚಿನ್ನದ ಅಂಗಡಿಯಿಂದ 400 ಗ್ರಾಂ ಚಿನ್ನ ವಶಪಡಿಸಿಕೊಂಡಿದೆ. ಭಂಡಾರಿ ಹಾಗೂ ಗೋವರ್ಧನ ಪ್ರಕರಣದಲ್ಲಿ ಬಂಧಿತರಾದ 8 ಹಾಗೂ 9ನೇ ಆರೋಪಿಗಳಾಗಿದ್ದಾರೆ. ಬಂಧಿತರನ್ನು ಕೋಲಂನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp