Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 569 ಅಬಕಾರಿ ಸನ್ನದು ಇ-ಹರಾಜು ಮೂಲಕ ಹಂಚಿಕೆಗೆ ಅಧಿಸೂಚನೆ; ಜ‌.13ರಿಂದ ನೇರ ಹರಾಜು ಪ್ರಕ್ರಿಯೆ
Latest News

569 ಅಬಕಾರಿ ಸನ್ನದು ಇ-ಹರಾಜು ಮೂಲಕ ಹಂಚಿಕೆಗೆ ಅಧಿಸೂಚನೆ; ಜ‌.13ರಿಂದ ನೇರ ಹರಾಜು ಪ್ರಕ್ರಿಯೆ

Sambrama Prabha NewsBy Sambrama Prabha NewsDecember 22, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರಾಜ್ಯ ಸರ್ಕಾರ ಖಾಲಿ ಅಥವಾ ಲಭ್ಯವಿರುವ ಮದ್ಯದ 569 ಸನ್ನದು (License) ಪಾರದರ್ಶಕ ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಹಂಚಿಕೆ ಮಾಡಲು ಅಧಿಸೂಚನೆ ಹೊರಡಿಸಿದೆ.

ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯೊಂದಿಗೆ ಹರಾಜು ಪ್ರಕ್ರಿಯೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಅಬಕಾರಿ ನಿಯಮಗಳಿಗೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದ್ದು, ಅದರಂತೆ, ಒಟ್ಟಾರೆ 569 ಸನ್ನದುಗಳನ್ನು ಇ-ಹರಾಜು ಮೂಲಕ ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ.

ಸ್ಥಗಿತಗೊಂಡಿರುವ/ಹಂಚಿಕೆಯಾಗದೇ ಇರುವ ಸಿಎಲ್-2‌ ಮತ್ತು ಸಿಎಲ್(11-ಸಿ) ಸನ್ನದುಗಳನ್ನು ಸಿಎಲ್(2-ಎ) ಎಂದು ಮತ್ತು ಸ್ಥಗಿತಗೊಂಡಿರುವ ಸಿಎಲ್-9‌ ಸನ್ನದುಗಳನ್ನು ಸಿಎಲ್(9-ಎ) ಎಂದು ವರ್ಗೀಕರಿಸಲಾಗಿದೆ. ಅದರಂತೆ, 569 ಸನ್ನದುಗಳ ಪೈಕಿ ಹರಾಜು ಪ್ರಕ್ರಿಯೆಗೆ 477 ಸಿಎಲ್(2-ಎ) ಮತ್ತು 92 ಸಿಎಲ್(9-ಎ) ಸನ್ನದುಗಳು ಲಭ್ಯವಿರುತ್ತವೆ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ.

ಸಿಎಲ್(2-ಎ) ಮತ್ತು ಸಿಎಲ್(9-ಎ) ಸನ್ನದುಗಳನ್ನು ಇ-ಹರಾಜಿನಲ್ಲಿ ಹರಾಜು ಮಾಡುವ ಸಂಬಂಧ ಪರಿಶಿಷ್ಟ ಜಾತಿ-ಎ ವರ್ಗದವರಿಗೆ ಶೇ.6ರಷ್ಟು, ಪರಿಶಿಷ್ಟ ಜಾತಿ-ಬಿ ವರ್ಗದವರಿಗೆ ಶೇ.6ರಷ್ಟು, ಪರಿಶಿಷ್ಟ ಜಾತಿ-ಸಿ ವರ್ಗದವರಿಗೆ ಶೇ.5ರಷ್ಟು ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ.7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ. ಇ-ಹರಾಜನ್ನು ಭಾರತ ಸರ್ಕಾರ ಸ್ವಾಮ್ಯದ ಸಂಸ್ಥೆಯಾದ MSTC ಲಿಮಿಟೆಡ್‌ನ ಇ-ಪೋರ್ಟಲ್‌ನಲ್ಲಿ ನಡೆಸಲಾಗುತ್ತದೆ. ಇ-ಹರಾಜಿನ ವೇಳಾಪಟ್ಟಿಯ ವಿವರಗಳು ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಪೋರ್ಟಲ್ https://stateexcise.karnataka.gov.in ಮತ್ತು ಇ-ಹರಾಜು ವೇದಿಕೆ MSTCಯ ಪೋರ್ಟಲ್ https://www.mstcecommerce.comನಲ್ಲಿ ಲಭ್ಯವಿದೆ ಎಂದು ತಿಳಿಸಿದೆ.

ಇ-ಹರಾಜಿನ ವೇಳಾಪಟ್ಟಿ ಹೀಗಿದೆ: ಈ ಹರಾಜು ಸಂಬಂಧ ಡಿ.19ರಂದು ಅಧಿಸೂಚನೆ ಹೊರಡಿಸಲಾಗಿದೆ. ಡಿ.22ರಿಂದ ಬಿಡ್‌ದಾರರ ನೋಂದಣಿ ಪ್ರಾರಂಭವಾಗಲಿದೆ.‌ ಡಿ.23, 2025ರಿಂದ ಜ.1, 2026ರ ವರೆಗೆ ಸಂಭಾವ್ಯ ಬಿಡ್‌ದಾರರಿಗೆ ಹಾಗೂ ಜಿಲ್ಲಾ ಇ-ಹರಾಜು ನೋಡಲ್‌ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. 13-01-2026ರಿಂದ 20-01-2026ರವರೆಗೆ ನೇರ ಹರಾಜು (Live Bidding) ನಡೆಯಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಬಿಡ್‌ದಾರರು ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಮತ್ತು ಅವರ ವ್ಯಾಲೆಟ್‌ನಲ್ಲಿ ಪಾವತಿಯನ್ನು ಆನ್‌ಲೈನ್‌ನಲ್ಲಿ ದೃಢೀಕರಿಸಿದ ನಂತರವೇ ಆನ್‌ಲೈನ್ ಹರಾಜಿನಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಆದ್ದರಿಂದ, ಬಿಡ್ಡರ್‌ಗಳು ತಾವು ಭಾಗವಹಿಸಲು ಬಯಸುವ ನಿರ್ದಿಷ್ಟ ಸ್ಲಾಟ್‌ನ ಹರಾಜು ಪ್ರಾರಂಭವಾಗುವ 48 ಗಂಟೆಗಳ ಮೊದಲು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ನೆಟ್‌ವರ್ಕ್ ವೈಫಲ್ಯ ಮತ್ತು ಇತರ ತಾಂತ್ರಿಕ ಸಮಸ್ಯೆಗಳ ಸಂದರ್ಭದಲ್ಲಿ ಯಾವುದೇ ವಿಳಂಬವನ್ನು ತಪ್ಪಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಡ್ಡರ್‌ಗಳು ಈ ಸಲಹೆಗಳನ್ನು ಪಾಲಿಸಲು ಸೂಚಿಸಲಾಗಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಇ-ಹರಾಜು
Add as Preferred on Google Follow on Google News
Share. WhatsApp Facebook Twitter Telegram
Previous Articleಸೋಮವಾರದ ಪಂಚಾಂಗ, ಭವಿಷ್ಯ
Next Article ನರೇಗಾ ಯೋಜನೆ ಹೆಸರು ಬದಲಾವಣೆಯಿಂದ ಮೋದಿ ಗೌರವ ಕಡಿಮೆ: ಕೆ.ಹೆಚ್​. ಮುನಿಯಪ್ಪ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.