ರಾಜಕೀಯರಾಜ್ಯ

ಆಶೀರ್ವಾದ ಮಾಡಲು ಮೋದಿ ದೇವರಲ್ಲ; ಜೆಪಿ ನಡ್ಡಾ ಅವರೇ” ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

Modi is not God to bless; JP Nadda himself," Siddaramaiah tweeted.

ಬೆಂಗಳೂರು: “ಕರ್ನಾಟಕವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು” ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್​ಗಳನ್ನು ಮಾಡಿರುವ ಸಿದ್ದರಾಮಯ್ಯ, “ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿ ಅವರು ದೇವರಲ್ಲ. ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆಪಿ ನಡ್ಡಾ ಅವರೇ” ಎಂದು ಹೇಳಿದ್ದಾರೆ.

“ಕರ್ನಾಟಕದ ಜನತೆ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು‌ ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್​ ಮಾಡಿದ್ದಾರೆ.

“ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ನಿಮ್ಮ‌ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ ಜೆಪಿ ನಡ್ಡಾ ಅವರೇ” ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇತ್ತ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಅವರು ನಡ್ಡಾ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಭಾರತೀಯ ಸಂಸ್ಕೃತಿ ಅರ್ಥವಾಗುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ಭಾರತೀಯ ಸಂಪ್ರದಾಯಗಳು ಅರ್ಥವಾಗದಿರುವುದು ಬೇಸರದ ಸಂಗತಿ. ಕರ್ನಾಟಕದ ಜನರು ಪ್ರಧಾನಿ ಮೋದಿಯನ್ನು ತುಂಬಾ ಗೌರವಿಸುತ್ತಾರೆ ಮತ್ತು ನಾವು ಗೌರವಿಸುವ ವ್ಯಕ್ತಿಯಿಂದ ಆಶೀರ್ವಾದ ಪಡೆಯುವುದರಲ್ಲಿ ಯಾವುದೇ ತಪ್ಪಿಲ್ಲ. ನಮ್ಮ ಸಂಪ್ರದಾಯವು ನಮಗೆ ಕಲಿಸಿದ್ದು ಅದನ್ನೇ ಎಂದು ಸುದ್ದಿ ಸಂಸ್ಥೆ ಎಎನ್​​ಐಗೆ ತಿಳಿಸಿದರು.
ನಿನ್ನೆ (ಏ 19) ಶಿಗ್ಗಾಂವಿಯಲ್ಲಿ ನಡೆದ ಬೃಹತ್ ಮೆರವಣಿಗೆಯಲ್ಲಿ ಜೆಪಿ ನಡ್ಡಾ ಹಾಗೂ ನಟ ಕಿಚ್ಚ ಸುದೀಪ್​ ಭಾಗಿಯಾಗಿದ್ದರು. ಬಳಿಕ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಜೆಪಿ ನಡ್ಡಾ, “ಕಾಂಗ್ರೆಸ್​ ಅಂದ್ರೆ ಕಮಿಷನ್​, ಕರಪ್ಷನ್ (ಭ್ರಷ್ಟಾಚಾರ), ಕ್ರಿಮಿನಲೈಸೇಷನ್​ (ಅಪರಾಧೀಕರಣ)” ಎಂದು ಆರೋಪಿಸಿದ್ದರು.

“ಕರ್ನಾಟಕವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು ಮತ್ತು ಅಭಿವೃದ್ಧಿಯ ಓಟದಲ್ಲಿ ಎಂದಿಗೂ ಹಿಂದೆ ಉಳಿಯಬಾರದು. ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಲು ನಾನು ಇಲ್ಲಿದ್ದೇನೆ ಎಂದರು. ‘ಕಮಲ’ವನ್ನು ಗೆಲ್ಲಿಸಿ, ಬಿಜೆಪಿಯನ್ನು ಗೆಲ್ಲಿಸಿ ಎಂದು ನಾನು ನಿಮ್ಮೆಲ್ಲರನ್ನು ಕೋರುತ್ತೇನೆ” ಎಂದು ಹೇಳಿದ್ದರು.

 

ಇದನ್ನೂ ಓದಿ...

Back to top button
>