ರಾಜಕೀಯರಾಜ್ಯರಾಷ್ಟ್ರೀಯ

ಇಂದು ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ, ಬಿಜೆಪಿ ಪರ ಭರ್ಜರಿ ಪ್ರಚಾರ

Today, Home Minister Amit Shah is campaigning for BJP in the state

ಬೆಂಗಳೂರು: ಕರ್ನಾಟಕದಲ್ಲಿ ಚುನಾವಣಾ (Karnataka Elections) ಪ್ರಚಾರ ಕಾವೇರಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah ) ಅವರು ಇಂದು ಬೆಂಗಳೂರಿಗೆ (Bengaluru News) ಆಗಮಿಸಲಿದ್ದಾರೆ. ಇಂದು ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಅಮಿತ್‌ ಶಾ ಭರ್ಜರಿ ರೋಡ್‌ ಶೋ ನಡೆಸಲಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಅಮಿತ್‌ ಶಾ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಮೇ 10 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಸಿದ್ಧತೆಗಳ ಬಗ್ಗೆಯೂ ಇವರು ಪರಿಶೀಲನೆ ನಡೆಸಲಿದ್ದಾರೆ. ಮಾರ್ಚ್ 29 ರಂದು ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದ ನಂತರ ಅಮಿತ್‌ ಶಾ ಅವರು ಕರ್ನಾಟಕಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ.

ಅಮಿತ್‌ ಶಾ ಅವರು ಇಂದು ಮಧ್ಯಾಹ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 18 ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಜನ್ಮಸ್ಥಳವಾದ ದೇವನಹಳ್ಳಿಯ ತಾಲ್ಲೂಕು ಕೇಂದ್ರ ಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಇಂದು ಸಂಜೆ ಅಮಿತ್‌ ಶಾ ಅವರು ಬಿಜೆಪಿಯ ಹಿರಿಯ ಮುಖಂಡರ ಜತೆ ಸಭೆ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಶನಿವಾರ, ಅವರು ಹೊಸದಿಲ್ಲಿಗೆ ಹಿಂತಿರುಗುವ ಮೊದಲು ಖಾಸಗಿ ಸುದ್ದಿ ವಾಹಿನಿಯೊಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ದೇವನಹಳ್ಳಿಯಲ್ಲಿ ಹಾಲಿ ಜೆಡಿಎಸ್‌ ಶಾಸಕ ಎಲ್‌ಎನ್‌ ನಾರಾಯಣಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಚ್‌ ಮುನಿಯಪ್ಪ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿಯ ಪಿಳ್ಳ ಮುನಿಶಾಮಪ್ಪ ಪರ ಕೇಂದ್ರ ಸಚಿವರು ಪ್ರಚಾರ ನಡೆಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮುನಿಯಪ್ಪ ಚೊಚ್ಚಲ ಬಾರಿಗೆ ವಿಧಾನಸಭೆ ಚುನಾವಣೆಗೆ ಧುಮುಕಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ನಾರಾಯಣಸ್ವಾಮಿ (86,966 ಮತಗಳು) ಮತ್ತು ವೆಂಕಟಸ್ವಾಮಿ (69,956) ನಡುವೆ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿ ಅಭ್ಯರ್ಥಿ ಕೆ.ನಾಗೇಶ್ 9,820 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

ಇಂದು ದೇವನಹಳ್ಳಿಯಲ್ಲಿ ರೋಡ್‌ಶೋ ಮುಗಿಸಿದ ಬಳಿಕ ಅಮಿತ್‌ ಶಾ ಅವರು ಸಂಜೆ 6 ಗಂಟೆ ಸುಮಾರಿಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ಗೆ ತೆರಳುವರು. ಅಲ್ಲಿ ರಾತ್ರಿ 7:45ಗಂಟೆಯಿಂದ ಬಿಜೆಪಿ ಮುಖಂಡರ ಜತೆ ಸಭೆ ನಡೆಯಲಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್‌ನಲ್ಲಿಯೇ ಅಮಿತ್‌ ಶಾ ಉಳಿದುಕೊಳ್ಳಲಿದ್ದಾರೆ.

ಹೋಟೆಲೊಂದಕ್ಕೆ ಶಾ ಆಗಮಿಸಲಿದ್ದಾರೆ. ಅಲ್ಲಿ, ರಾಜ್ಯ ಬಿಜೆಪಿ ನಾಯಕರ ಜೊತೆಗೆ ಮಹತ್ವದ ಸಭೆ ನಡೆಯಲಿದೆ. ಸಂಜೆ 7:45ರ ಹೊತ್ತಿಗೆ ಸಭೆಯನ್ನು ನಿಗದಿಪಡಿಸಲಾಗಿದೆ. ರಾತ್ರಿ 9ರವರೆಗೆ ಸಭೆ ನಡೆಯುವ ಸಾಧ್ಯತೆಗಳಿವೆ. ಆನಂತರ, ರೇಸ್ ಕೋರ್ಸ್ ರಸ್ತೆಯಲ್ಲಿರುವ ಹೋಟೆಲ್ ನಲ್ಲೇ ಶಾ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಖಾಸಗಿ ಚಾನೆಲ್‌ನ ಕಾರ್ಯಕ್ರಮ ಮುಗಿಸಿಕೊಂಡು ನವದೆಹಲಿಗೆ ಹಿಂತುರುಗುವರು ಎಂದು ಮೂಲಗಳು ತಿಳಿಸಿವೆ.

 

ಇದನ್ನೂ ಓದಿ...

Back to top button
>