Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥ ಪ್ರಯತ್ನ: ಸಿಎಂ
Politics

ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥ ಪ್ರಯತ್ನ: ಸಿಎಂ

Sambrama Prabha NewsBy Sambrama Prabha NewsJanuary 3, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಬೆಂಗಳೂರು: ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥ ಪ್ರಯತ್ನ ರಾಜ್ಯದಲ್ಲಿ ವಿರೋಧ ಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು.

ಮೊದಲನೆಯದಾಗಿ, ಈ ತಥಾಕಥಿತ ಸಮೀಕ್ಷೆ ರಾಜ್ಯ ಚುನಾವಣಾ ಆಯೋಗವು ಮೇ 2025ರಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಸಿದ ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌) ಕಾರ್ಯಕ್ರಮದ ಒಂದು ಭಾಗವಾಗಿದೆ. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತೇ ಹೊರತು ಇದು ರಾಹುಲ್ ಗಾಂಧಿ ಅವರು ಆರೋಪಿಸಿರುವ ಮತಗಳ್ಳತನದ ಜನಾಭಿಪ್ರಾಯ ಸಂಗ್ರಹ ಅಲ್ಲ. ಮತದಾರರ ಜಾಗೃತಿಯ ಉದ್ದೇಶವನ್ನು ಚುನಾವಣಾ ಅಕ್ರಮದ ಕುರಿತಾದ ಜನಾಭಿಪ್ರಾಯವೆಂದು ಬಿಂಬಿಸುವುದು ಸರಿಯಲ್ಲ. ಇದು ಜನರ ದಾರಿ ತಪ್ಪಿಸುವ ದುರುದ್ದೇಶದ ರಾಜಕೀಯ ಹುನ್ನಾರವಾಗಿದೆ ಎಂದು ಆರೋಪಿಸಿದ್ದಾರೆ.

ಎರಡನೆಯದಾಗಿ, ಸಮೀಕ್ಷೆ ನಡೆಸಲಾದ ಸಮಯವೇ ಸತ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಮೀಕ್ಷೆಯನ್ನು ಮೇ 2025ರಲ್ಲಿ ನಡೆಸಲಾಗಿದೆ. ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮಗಳ ಕುರಿತು ಪುರಾವೆ ಸಹಿತ ಸುದ್ದಿಗೋಷ್ಠಿ ನಡೆಸಿದ್ದು ಆಗಸ್ಟ್‌ 2025ರಲ್ಲಿ, ಅಂದರೆ ಸಮೀಕ್ಷೆಯಾದ 3 ತಿಂಗಳ ಬಳಿಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ವಿರುದ್ಧ ಧ್ವನಿಯೆತ್ತಿದ್ದಾರೆ. ಹಿಂದಿನ ಜನಾಭಿಪ್ರಾಯದ ಡಾಟಾವನ್ನು ಬಳಸಿಕೊಂಡು ನಂತರದ ಮತಗಳ್ಳತನದ ಆರೋಪಕ್ಕೆ ಜನಮನ್ನಣೆ ನೀಡಿಲ್ಲ ಎನ್ನುವುದು ಹಾಸ್ಯಾಸ್ಪದ. ಸತ್ಯಾಂಶವನ್ನು ಪರಿಶೀಲಿಸದೆ ಮಾಡಿರುವ ಈ ವರದಿಗೆ ಸತ್ಯಾಂಶವನ್ನು ಮರೆಮಾಚುವ ಉದ್ದೇಶವಿದ್ದಂತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೂರನೆಯದಾಗಿ, ಸಮೀಕ್ಷೆಯಲ್ಲಿ ಬಳಸಲಾದ ಮಾದರಿ ಪ್ರಮಾಣವು ರಾಜ್ಯದ ಜನಾಭಿಪ್ರಾಯವೆಂದು ಪರಿಗಣಿಸುವಷ್ಟು ಸಮರ್ಥನೀಯವಾಗಿಲ್ಲ. ಸುಮಾರು 5.3 ಕೋಟಿಗೂ ಹೆಚ್ಚು ವಯಸ್ಕ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಕೇವಲ 5,100 ಜನರನ್ನಷ್ಟೇ ಸಮೀಕ್ಷೆಗೆ ಒಳಪಡಿಸಲಾಗಿದೆ. ಇದು ಮತದಾರರನ್ನು 0.01% ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರತಿನಿಧಿಸುತ್ತದೆ. ಗಂಭೀರವಾದ ವಿಷಯಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳನ್ನು ಸಂಗ್ರಹಿಸುವಾಗ ಇಷ್ಟು ಸಣ್ಣ ಪ್ರಮಾಣದ ಮಾದರಿಯು ಸಮೀಕ್ಷೆಯ ದೊಡ್ಡ ಲೋಪವಾಗಿದೆ. ಬೆಂಗಳೂರು ಸೆಂಟ್ರಲ್‌ ನಂತಹ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ತಿರುಚಿರುವುದು ಸತ್ಯಾಂಶವಿರುವ ಆರೋಪವಾಗಿದೆ. ಅಂತಹ ಕ್ಷೇತ್ರದಲ್ಲಿ ಸಮೀಕ್ಷೆಗೆ ಒಳಪಟ್ಟಿರುವವರ ಸಂಖ್ಯೆ ಎರಡಂಕಿಯನ್ನು ದಾಟಿಲ್ಲ. ಇದನ್ನೇ ಜನರ ತೀರ್ಮಾನ ಎಂದು ಬಿಂಬಿಸುವುದು ಸಮಂಜಸವೆನಿಸುವುದಿಲ್ಲ ಎಂದಿದ್ದಾರೆ.

ನಾಲ್ಕನೆಯದಾಗಿ, ಸಮೀಕ್ಷೆ ನಡೆಸಿದವರ ಹಿನ್ನೆಲೆಯನ್ನು ಮಾಧ್ಯಮಗಳು ಕೂಡಾ ಪರಿಶೀಲಿಸಿದಂತಿಲ್ಲ. ಈ ಸಮೀಕ್ಷೆಯನ್ನು ಡಾ. ಆರ್. ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಬಾಲಸುಬ್ರಮಣ್ಯಂ ಅವರು ಪ್ರಸ್ತುತ ಕೇಂದ್ರ ಸರ್ಕಾರ ನೇಮಿಸಿರುವ ಒಂದು ಹುದ್ದೆಯಲ್ಲಿದ್ದಾರೆ. ಇವರು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಬರೆದಿರುವ ಪುಸ್ತಕವನ್ನು ನೋಡಿದರೆ ಈ ಮಹಾಶಯರು ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟರು ನಡೆಸಿರುವ ಸಮೀಕ್ಷೆಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ ಎಂದು ಪ್ರಶ್ನಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಿಎಂ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಶನಿವಾರದ ರಾಶಿ ಭವಿಷ್ಯ, ಪಂಚಾಂಗ
Next Article ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟ ಅಸ್ತು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.