ರಾಜಕೀಯರಾಜ್ಯ

502 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತ, 3130 ಕ್ರಮಬದ್ಧ; ಚುನಾವಣಾ ಆಯೋಗ ಮಾಹಿತಿ

Nomination papers of 502 candidates rejected, 3130 valid; Election Commission Information

ಇಂದು ರಾಹುಲ್​ ಗಾಂಧಿ ರಾಜ್ಯ ಪ್ರವಾಸ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಬಸವ ಜಯಂತಿ ಅಂಗವಾಗಿ ಕೂಡಲ ಸಂಗಮಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
502 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತ, 3130 ಕ್ರಮಬದ್ಧ

ವಿಧಾನಸಭೆ ಚುನಾವಣೆಗೆ 3632 ಅಭ್ಯರ್ಥಿಗಳಿಂದ ಒಟ್ಟು 5102 ನಾಮಪತ್ರ ಸಲ್ಲಿಕೆಯಾಗಿದ್ದವು. ಈ ಪೈಕಿ 3130 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, 502 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇಂದಿನಿಂದ ಸಿಎಂ ಬೊಮ್ಮಾಯಿ ರಾಜ್ಯ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನಿಂದ (ಏ 23) ಮೇ 8ರ ವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ರಥಯಾತ್ರೆ ಮೂಲಕ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ನಾಳೆ ಯಲಹಂಕದಲ್ಲಿ ರೋಡ್​ ಶೋ ನಡೆಸುವ ಮೂಲಕ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಲಿದ್ದಾರೆ.
Sun, 23 Apr 20237:33 IST
ಶಿವಮೊಗ್ಗದಲ್ಲಿ ಗೆದ್ದೇ ಗೆಲ್ತೇನೆ; ಆಯನೂರು ಮಂಜುನಾಥ್​

ಶಿವಮೊಗ್ಗ ನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಕೈತಪ್ಪಿದ ಹಿನ್ನೆಲೆ ಜೆಡಿಎಸ್​ ಸೇರಿರುವ ಆಯನೂರು ಮಂಜುನಾಥ್​ ಈ ಬಾರಿ ಜೆಡಿಎಸ್​ನಿಂದ ಶಿವಮೊಗ್ಗದಲ್ಲಿ​ ಗೆದ್ದೇ ಗೆಲ್ತೇನೆ ಎಂದು ಹೇಳಿದ್ದಾರೆ.

Sun, 23 Apr 20237:33 IST
ಸಚಿವ ಆನಂದ್ ಸಿಂಗ್ ಸಹೋದರಿ ಕಾಂಗ್ರೆಸ್ ಸೇರ್ಪಡೆ

ಸಚಿವ ಆನಂದ್ ಸಿಂಗ್ ಸಹೋದರಿ ಬಿ ಎಲ್ ರಾಣಿ ಸಂಯುಕ್ತ ಅವರು ಬಿಜೆಪಿ ತೊರೆದು ಶನಿವಾರ ( ಏ 22) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

Sun, 23 Apr 20237:33 IST
ಹೆಚ್ ಡಿ ಕುಮಾರಸ್ವಾಮಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ...

Back to top button
>