—Advertisement—

ಹಿಂದುಳಿದ ವರ್ಗಗಳ ಸಹಾಯವಿಲ್ಲದೆ ಸಮಾಜ ಮುನ್ನಡೆಯುವುದಿಲ್ಲ; ಡಿ.ಕೆ. ಶಿವಕುಮಾರ್

Author Picture
Published On: January 5, 2026

—Advertisement—

Updated By: Priyalachhi 

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಹಾಗೂ ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರ 1.50 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಶ್ರೀ ಮಹಾವೀರ್ ಜೈನ್ ಶಿಕ್ಷಣ್ ಸಂಘದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿದರು. ಇದು ಕೇವಲ ಸಿಲಿಕಾನ್ ನಗರ ಮಾತ್ರವಲ್ಲ ಆರೋಗ್ಯ ನಗರ ಎಲ್ಲಾ ಕ್ಷೇತ್ರಗಳಲ್ಲೂ ಬೆಳೆದಿರುವ ನಗರವಾಗಿದೆ. ಕಳೆದ 25 ವರ್ಷಗಳಿಂದ ನಗರದ ಜನಸಂಖ್ಯೆ ದುಪ್ಪಟ್ಟಾಗಿದೆ.

1.40 ಕೋಟಿ ಜನಸಂಖ್ಯೆ ಇದ್ದರೆ, ವಾಹನಗಳ ಸಂಖ್ಯೆಯೇ 1.30 ಕೋಟಿಯಿದೆ. ಎಲ್ಲರೂ ಖಾಸಗಿ ವಾಹನಗಳ ಬಳಕೆ ಹೆಚ್ಚಾಗಿದ್ದು ಸಾರ್ವಜನಿಕ ಸಾರಿಗೆ ಬಳಸಲು ಮುಂದಾಗುತ್ತಿಲ್ಲ. ಹೀಗಾಗಿ ಸಂಚಾರ ದಟ್ಟಣೆ ಹೆಚ್ಚಾಗಿದೆ” ಎಂದರು.

ಜೈನ ಸಂಸ್ಥೆ ಅತ್ಯುತ್ತಮ ಸೇವೆ ಮಾಡುತ್ತಿದೆ. ಹೀಗಾಗಿ ನಾನು ಕೂಡ ಶಿಕ್ಷಣ ಸಂಸ್ಥೆ ಹೊಂದಿದ್ದರೂ ನನ್ನ ಶಿಕ್ಷಣ ಸಂಸ್ಥೆ ಕಾರ್ಯಕ್ರಮಕ್ಕೆ ಹೋಗದೆ ಈ ಸಂಸ್ಥೆ ಜೊತೆ ಇದ್ದೇನೆ ಎಂದು ಹೇಳಲು ಬಹಳ ಸಂತೋಷದಿಂದ ಬಂದಿದ್ದೇನೆ” ಎಂದು ತಿಳಿಸಿದರು. ಇಲ್ಲಿರುವ ಅನೇಕರು ದೇಶದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದಿದ್ದೀರಿ. ಬೆಂಗಳೂರು ಶ್ರೇಷ್ಠ ನಗರ. ಅತ್ಯುತ್ತಮ ಸಂಸ್ಕೃತಿ ಹಾಗೂ ಶಿಕ್ಷಣ ವ್ಯವಸ್ಥೆ ಹೊಂದಿದೆ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಇಂಜಿನಿಯರಿಂಗ್ ವೃತ್ತಿಪರರು ಇದ್ದರೆ, ಬೆಂಗಳೂರಿನಲ್ಲಿ 25 ಲಕ್ಷ ಇಂಜಿನಿಯರಿಂಗ್ ವೃತ್ತಿಪರರಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp