ರಾಜಕೀಯರಾಜ್ಯ

ಹಗರಣಗಳಿಲ್ಲದೇ 17 ಸಾವಿರ ಶಿಕ್ಷಕರ ನೇಮಕ, 8 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ ಬಿಜೆಪಿಯ ಸಾಧನೆ ಎಂದ ಬೊಮ್ಮಾಯಿ

Appointment of 17,000 teachers and construction of 8,000 school rooms without scandals is BJP's achievement, said Bommai

ತುಮಕೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಇಲಾಖೆಯು ರಾಜ್ಯದಲ್ಲಿ 17,000 ಶಿಕ್ಷಕರ ನೇಮಕ ಹಾಗೂ 8,000 ಶಾಲಾ ಕೊಠಡಿಗಳನ್ನು ನಿರ್ಮಿಸಿದೆ ಎಂದು ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ತುಮಕೂರಿನಲ್ಲಿ ತಿಳಿಸಿದ್ದಾರೆ.

ತಿಪಟೂರಿನ ಬಿಜೆಪಿ ಅಭ್ಯರ್ಥಿ ಬಿ.ಸಿ. ನಾಗೇಶ್‌ ಪರ ರೋಡ್‌ ಶೋ ಕಾರ್ಯಕ್ರಮದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ʼನಮ್ಮ ಸರ್ಕಾರದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರದ ಹಗರಣಗಳು ಹಾಗೂ ಫೌಲ್‌ ಪ್ಲೇ ನಡೆದಿಲ್ಲ ಎಂದಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ
ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಬೊಮ್ಮಾಯಿ ʼಸಿದ್ದರಾಮಯ್ಯನವರ ಆಡಳಿತದಲ್ಲಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸದೆ ಹಲವು ಶಿಕ್ಷಕರನ್ನು ಹುದ್ದೆಗೆ ನೇಮಿಸಿಕೊಳ್ಳಲಾಗಿತ್ತುʼ ಎಂದು ಆರೋಪಿಸಿದ್ದಾರೆ.

ʼಹಿಂದಿನ ಸರ್ಕಾರವು ಭ್ರಷ್ಟಾಚಾರದಿಂದ ತುಂಬಿತ್ತು. ನೇಮಕಾತಿ ಹಗರಣಗಳಿಂದ ಹಿಡಿದು ಶಿಕ್ಷಣ ವ್ಯವಸ್ಥೆಯ ಹಲವು ಅಕ್ರಮಗಳಿಗೆ ಕಾಂಗ್ರೆಸ್‌ ಸರ್ಕಾರ ಸಾಕ್ಷಿಯಾಗಿತ್ತುʼಎಂದು ಅವರು ದೂರಿದ್ದಾರೆ.

ತಮ್ಮ ಪಕ್ಷದ ಅಭ್ಯರ್ಥಿಯ ಪರ ಪ್ರಚಾರಕ್ಕಿಳಿದ ಸಿಎಂ ಬೊಮ್ಮಾಯಿ ʼನಮ್ಮ ಶಾಸಕ ನಾಗೇಶ್‌ ತಿಪಟೂರನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಈ ಭಾಗದಲ್ಲಿ ಹೊನ್ನಳ್ಳಿ ಏತ ನೀರಾವರಿ ಯೋಜನೆ ಜಾರಿಗೆ ತಂದು ಕಟ್ಟ ಕಡೆಯ ಕೆರೆಯನ್ನೂ ತುಂಬಿಸುವ ಕೆಲಸ ಮಾಡಿದ್ದಾರೆ ನಾಗೇಶ್‌. ಬಿಎಸ್ ಯಡಿಯೂರಪ್ಪ ಸರ್ಕಾರ ಜಾರಿಗೆ ತಂದ ಭಾಗ್ಯಲಕ್ಷ್ಮಿ ಯೋಜನೆಯೂ ಇಲ್ಲಿನ ಅಲ್ಪಸಂಖ್ಯಾತ ಸಮುದಾಯದ ಶೇ.30 ರಷ್ಟು ಮಹಿಳೆಯರಿಗೆ ನೆರವಾಗಿದೆ. ಕಲ್ಪವೃಕ್ಷದ ನಾಡಿನ ಜನರು ನಾಗೇಶ್‌ ಅವರನ್ನು ಬೆಂಬಲಿಸಿ, ಮತ ನೀಡಬೇಕುʼ ಎಂದು ರೋಡ್‌ ಷೋನಲ್ಲಿ ಸಿಎಂ ಮನವಿ ಮಾಡಿದ್ದಾರೆ.

ʼಬಿಜೆಪಿ ಸರ್ಕಾರ ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ. ಹೇಮಾವತಿಯಿಂದ ಈ ಭಾಗಕ್ಕೆ ನೀರು ತರುವುದೂ ಸೇರಿದಂತೆ ಸಾಕಷ್ಟು ಅನುದಾನಗಳನ್ನು ತಂದಿದ್ದಾರೆ. ನಮ್ಮ ಅಭ್ಯರ್ಥಿಯನ್ನು 25 ಸಾವಿರ ಮತಗಳ ಅಂತರದಿಂದ ಜನರು ಗೆಲ್ಲಿಸಿʼ ಎಂದು ಸಿಎಂ ಕೇಳಿಕೊಂಡಿದ್ದಾರೆ.

ʼರಾಜ್ಯದಲ್ಲಿ ಕಳೆದ 70 ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ನೀರು ನೀಡಲಾಗಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ನಲ್ಲಿ ನೀರು ನೀಡಲಾಗಿದೆ, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿ ಸರ್ಕಾರ ರೈತರು, ಮೀನುಗಾರರ ಮಕ್ಕಳು ಮತ್ತು ಇತರರಿಗೆ ಹಲವಾರು ಯೋಜನೆಗಳು ಮತ್ತು ಉಪಕ್ರಮಗಳನ್ನು ಘೋಷಿಸಿದೆʼ ಎಂದಿದ್ದಾರೆ.

ʼ10 ಕೆಜಿ ಅಕ್ಕಿ, ಪ್ರತಿ ಮಹಿಳೆಗೆ ತಿಂಗಳಿಗೆ 2000 ರೂ., ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ 200 ಉಚಿತ ವಿದ್ಯುತ್ ಘಟಕಗಳನ್ನು ಕಾಂಗ್ರೆಸ್ ಭರವಸೆ ನೀಡಿದ್ದರೂ, ಜನರಿಗೆ ಅವರ ಮೇಲೆ ನಂಬಿಕೆ ಇಲ್ಲʼ ಎಂದಿದ್ದಾರೆ ಬೊಮ್ಮಾಯಿ.

ಮೇ 10 ರಂದು ಒಂದೇ ಹಂತದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ...

Back to top button
>