Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಚಾಲನಾ ಪರವಾನಗಿಯಲ್ಲಿ ಜನನ ದಿನಾಂಕ, ಪೋಷಕರ ಹೆಸರು ತಿದ್ದುಪಡಿಗಿಲ್ಲ ಅವಕಾಶ
Latest News

ಚಾಲನಾ ಪರವಾನಗಿಯಲ್ಲಿ ಜನನ ದಿನಾಂಕ, ಪೋಷಕರ ಹೆಸರು ತಿದ್ದುಪಡಿಗಿಲ್ಲ ಅವಕಾಶ

Sambrama Prabha NewsBy Sambrama Prabha NewsJanuary 8, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಕಡಬ/ದ.ಕ: ಚಾಲನಾ ಪರವಾನಗಿ (Driving Licence) ಎನ್ನುವುದು ಕೇವಲ ವಾಹನ ಚಾಲನೆಗೆ ಮಾತ್ರವಲ್ಲ, ನಾಗರಿಕರ ಗುರುತಿನ ಪ್ರಮುಖ ದಾಖಲೆಗಳಲ್ಲೊಂದು. ಆದರೆ ಇಂತಹ ಮಹತ್ವದ ದಾಖಲೆಗಳಲ್ಲಿ ಸಂಭವಿಸಿರುವ ಪೋಷಕರ ಹೆಸರು ತಿದ್ದುಪಡಿ ಮತ್ತು ಜನನ ದಿನಾಂಕದ ತಪ್ಪುಗಳನ್ನು ತಿದ್ದುಪಡಿ ಮಾಡಲು ಅವಕಾಶವೇ ಇಲ್ಲ ಎನ್ನುವ ಕಠಿಣ ನಿಯಮ ಸಾರ್ವಜನಿಕರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ.

ರಾಜ್ಯಾದ್ಯಂತ ಅನೇಕರು, ತಮ್ಮ ಚಾಲನಾ ಪರವಾನಗಿಯಲ್ಲಿ ಪೊಷಕರ ಹೆಸರಿನ ಅಕ್ಷರದ ತಪ್ಪುಗಳು, ಜನನ ವರ್ಷ ಅಥವಾ ದಿನಾಂಕದ ಲಘು ವ್ಯತ್ಯಾಸ ಕಂಡುಬಂದರೂ, ಅದನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗದೇ ಆರ್‌ಟಿಒ ಕಚೇರಿಗಳ ಮೆಟ್ಟಿಲು ಹತ್ತಿ ಹತ್ತಿ ಬೇಸತ್ತಿದ್ದಾರೆ.

ಕಾನೂನು ಏನು ಹೇಳುತ್ತದೆ?: ಮೋಟಾರ್ ವಾಹನ ಕಾಯ್ದೆ ಹಾಗೂ ಸಾರಿಗೆ ಇಲಾಖೆಯ ಪ್ರಚಲಿತ ಮಾರ್ಗಸೂಚಿಗಳ ಪ್ರಕಾರ, ಒಮ್ಮೆ ದಾಖಲಾಗಿರುವ ಜನನ ದಿನಾಂಕವನ್ನು ಮತ್ತು ಪೊಷಕರ ಹೆಸರು ತಿದ್ದುಪಡಿ ಮಾಡಲು ಅವಕಾಶ ಇಲ್ಲ. ಅರ್ಜಿದಾರರು ಜನನ ಪ್ರಮಾಣಪತ್ರ, ಶಾಲಾ ದಾಖಲಾತಿ ಅಥವಾ ಆಧಾರ್ ಕಾರ್ಡ್ ಮುಂತಾದ ದಾಖಲೆಗಳನ್ನು ಸಲ್ಲಿಸಿದರೂ ಸಹ, ನಿಯಮ ಅವಕಾಶ ನೀಡುವುದಿಲ್ಲ ಎನ್ನುವ ಒಂದೇ ಉತ್ತರ ದೊರೆಯುತ್ತಿದೆ.

ಸಾಮಾನ್ಯ ಜನರ ಸಂಕಷ್ಟಗಳು:

  • ಉದ್ಯೋಗ ಅರ್ಜಿ ಸಲ್ಲಿಸುವಾಗ ದಾಖಲೆಗಳ ನಡುವೆ ವ್ಯತ್ಯಾಸ ಬ್ಯಾಂಕ್, ವಿಮಾ ಹಾಗೂ ಪಿಂಚಣಿ ಪ್ರಕ್ರಿಯೆಗಳಲ್ಲಿ ಅಡಚಣೆ
  • ಪಾಸ್‌ಪೋರ್ಟ್, ಸರ್ಕಾರಿ ಯೋಜನೆಗಳಲ್ಲಿ ಸಮಸ್ಯೆ, ವಯೋಮಿತಿ ಆಧಾರಿತ ಸೌಲಭ್ಯ ಕಳೆದುಕೊಳ್ಳುವ ಆತಂಕ
  • ಇದೆಲ್ಲದರ ಪರಿಣಾಮವಾಗಿ, ಸಾಮಾನ್ಯ ನಾಗರಿಕರು ತಪ್ಪು ತಮ್ಮದಲ್ಲದಿದ್ದರೂ ಅದರ ಬೆಲೆ ಕಟ್ಟುವಂತಾಗಿದೆ.

ಜನರ ಆಕ್ರೋಶ: ಆಧುನಿಕ ಯುಗದಲ್ಲಿ ಆಧಾರ್, ಪಾಸ್‌ಪೋರ್ಟ್‌ನಲ್ಲಿ ತಿದ್ದುಪಡಿ ಸಾಧ್ಯವಾಗುವಾಗ, ಚಾಲನಾ ಪರವಾನಗಿಯಲ್ಲಿ ಯಾಕೆ ಇಲ್ಲ? ಎಂಬ ಪ್ರಶ್ನೆ ಜನರಿಂದ ಕೇಳಿಬರುತ್ತಿದೆ. ತಂತ್ರಜ್ಞಾನ ಯುಗದಲ್ಲಿ ಇಂತಹ ನಿಯಮಗಳು ಜನವಿರೋಧಿ ಎನ್ನುವ ಅಭಿಪ್ರಾಯವೂ ಒಂದು ಕಡೆ ವ್ಯಕ್ತವಾಗುತ್ತಿದೆ.

ಪರಿಹಾರ ಏನು?: ವಿಶೇಷ ಕಾನೂನು ತಜ್ಞರ ಅಭಿಪ್ರಾಯದಂತೆ, ದಾಖಲೆಗಳ ನಿಖರ ಪರಿಶೀಲನೆಯೊಂದಿಗೆ, ನಿಗದಿತ ಅವಧಿ ಹಾಗೂ ಶುಲ್ಕದ ಮೂಲಕ, ವಿಶೇಷ ಸಮಿತಿಯ ಅನುಮೋದನೆಯೊಂದಿಗೆ ಜನನ ದಿನಾಂಕ ಮತ್ತು ಪೋಷಕರ ಹೆಸರು ತಿದ್ದುಪಡಿ ಮಾಡಲು ಅವಕಾಶ ನೀಡಿದರೆ, ನಕಲಿ ತಿದ್ದುಪಡಿ ತಡೆದು ನಿಜವಾದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎನ್ನುವುದು ಜನರ ವಾದ.

ಸಾರ್ವಜನಿಕರ ನಿರೀಕ್ಷೆ: ಹಲವು ವರ್ಷಗಳ ಹಿಂದೆ ಶಾಲಾ ದಾಖಲಾತಿ ಸಮಯದಲ್ಲಿ ಪೋಷಕರ ಎಡವಟ್ಟಿನಿಂದಾಗಿ ತತ್ಸಮಾನ(ಎಸ್ಎಸ್ಎಲ್‌ಸಿ) ಸರ್ಟಿಫಿಕೇಟ್‌ನಲ್ಲಿ ಆದ ತೊಂದರೆಗಳನ್ನು ಸಾರಿಗೆ ಇಲಾಖೆ ಹಾಗೂ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ, ಜನಪರ ಹಾಗೂ ಸೂಕ್ತ ತಿದ್ದುಪಡಿ ನೀತಿ ಜಾರಿಗೆ ತರಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಚಾಲನಾ ಪರವಾನ ತಿದ್ದುಪಡಿಗಿಲ್ಲ ಅವಕಾಶ
Add as Preferred on Google Follow on Google News
Share. WhatsApp Facebook Twitter Telegram
Previous Articleಇಂದು ರಾಕಿಂಗ್ ಸ್ಟಾರ್ ಯಶ್​ ಅವರ ಹುಟ್ಟುಹಬ್ಬ: ಅಭಿಮಾನಿಗಳಿಗೆ ಕೊಟ್ಟ ಸಂದೇಶ ಏನು?
Next Article ಭರತ್ ರೆಡ್ಡಿ ಸ್ಥಳಕ್ಕೆ ಬಂದಿರಲಿಲ್ಲ ಅಂದ್ರೆ ಇನ್ನೂ ಹೆಚ್ಚು ಸಮಸ್ಯೆ ಆಗ್ತಿತ್ತು: ಸಚಿವ ಜಮೀರ್ ಅಹ್ಮದ್ ಖಾನ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.