ರಾಜಕೀಯರಾಜ್ಯ

ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

Butti who made Congress lose: Chief Minister Basavaraja Bommai

ಪ್ರಿಯಲಚ್ಛಿ sambramaprabha

ಬೀದರ್ (ಹುಮ್ನಾಬಾದ): ಕಾಂಗ್ರೆಸ್ ನಾಯಕರು ಲಿಂಗಾಯತರು ಭ್ರಷ್ಟರು ಅಂತ ಹೇಳಿದರು. ರಾಜ್ಯದ ಅತ್ಯಂತ ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಕಾಂಗ್ರೆಸ್ ನವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಹುಮ್ನಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿಶ್ವಮಾನವ ಬಸವಣ್ಣ ಅವರ ನಾಡಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಯವರಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ ಅವರು,

ಪ್ರಜಾಪ್ರಭುತ್ವದ ಮೊದಲನೇ ಕರ್ತವ್ಯ ಎಲ್ಲರನ್ನೂ ಸಮಾನವಾಗಿ ನೋಡುವುದು. ಕಾಂಗ್ರೆಸ್ ಇಷ್ಟು ವರ್ಷ ಅದನ್ನು ಮಾಡಿಲ್ಲ. ನಾವು ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುತ್ತಿದ್ದೇವೆ ಎಂದರು.

ನಮ್ಮ ಪ್ರಧಾನ ಮಂತ್ರಿ ಇಡೀ ದೇಶ ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತಿದ್ದಾರೆ‌. ಕರ್ನಾಟಕದಲ್ಲಿ 13 ಲಕ್ಷ ಮನೆಗಳನ್ನು ಮಂಜೂರು ಮಾಡಿದ್ದಾರೆ‌. ಜಲ ಜೀವನ್ ಮಿಷನ್ ಅಡಿಯಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ 54 ಲಕ್ಷ ರೈತರಿಗೆ 16000 ಕೋಟಿ ನೀಡಿದ್ದೇವೆ‌ ಎಂದರು.

ರಾಜ್ಯದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನೀಡಿದ್ದಾರೆ. ಇದರಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. ಬೀದರ್ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಿ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ...

Back to top button
>