ಕ್ರಿಕೆಟ್ಕ್ರೀಡೆ

ಗುಜರಾತ್ ಟೈಟಾನ್ಸ್ ವಿರುದ್ಧ ಬ್ಯಾಟಿಂಗ್‌ಗೆ ಇಳಿದ ಡೆಲ್ಲಿ

Delhi batted against Gujarat Titans

ವರದಿ: ಪ್ರಿಯಲಚ್ಛಿ
ಐಪಿಎಲ್‌ನ ಪ್ರಸಕ್ತ ಆವೃತ್ತಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು‌, ಮಂಗಳವಾರದ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯುವ ನಿರೀಕ್ಷೆಯಿದೆ.

ಪ್ರಮುಖ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್‌ ನಾಯಕ ಡೇವಿಡ್‌ ವಾರ್ನರ್‌, ಮೊದಲಿಗೆ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಡೆಲ್ಲಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಇಂದು ಮಿಚೆಲ್‌ ಮಾರ್ಷ್‌ ಆಡುತ್ತಿಲ್ಲ. ಅವರ ಬದಲಿಗೆ ರಿಲೀ ರೊಸ್ಸೋ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಖಲೀಲ್ ಅಹಮದ್‌ ಕೂಡಾ ಚೇತರಿಸಿಕೊಂಡಿದ್ದು, ಆಡುವ ಬಳಗ ಸೇರಿಕೊಂಡಿದ್ದಾರೆ.

ಚೇಸಿಂಗ್‌ನಲ್ಲಿ ಉತ್ತಮ ಅಂಕಿ ಅಂಶಗಳನ್ನು ಹೊಂದಿರುವ ಗುಜರಾತ್‌ ಟೈಟಾನ್ಸ್‌ ಈ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬೌಲಿಂಗ್‌ ಮಾಡುತ್ತಿದೆ. ತಂಡದಲ್ಲಿ ಇಂದು ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಡವೇ ಈ ಪಂದ್ಯದಲ್ಲೂ ಕಣಕ್ಕಿಳಿಯಲಿದೆ.

ಗುಜರಾತ್ ಟೈಟಾನ್ಸ್ ತಂಡವು ಕಳೆದ ಬಾರಿಯಂತೆ, ಈ ಆವೃತ್ತಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತದೆ. ಹಾಲಿ ಚಾಂಪಿಯನ್ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಅತ್ಯಂತ ಬಲಿಷ್ಠವಾಗಿದೆ. ತಂಡದಲ್ಲಿ ಮ್ಯಾಚ್‌ ವಿನ್ನರ್‌ಗಳ ದೊಡ್ಡ ಬಳಗವಿದ್ದು, ಕಠಿಣ ಸನ್ನಿವೇಶದಲ್ಲೂ ತಂಡವನ್ನು ಗೆಲುವಿನ ದಡ ಸೇರಿಸುವ ಸಾಮರ್ಥ್ಯವಿದೆ.

ಮತ್ತೊಂದೆಡೆ ಪ್ರಸಕ್ತ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್, ಹಾಲಿ ಚಾಂಪಿಯನ್‌ಗಳ ಎದುರು ಪುಟಿದೇಳುವ ವಿಶ್ವಾಸದಲ್ಲಿದೆ. ತಂಡದಲ್ಲಿ ಬಲಿಷ್ಠ ಆಟಗಾರರಿದ್ದರೂ, ಉತ್ತಮ ಪ್ರದರ್ಶನ ಹೊರಬರುತ್ತಿಲ್ಲ. ಬ್ಯಾಟಿಂಗ್‌ನಲ್ಲಿ ಮತ್ತೆ ಮತ್ತೆ ಪ್ರಮುಖ ಆಟಗಾರರು ವೈಫಲ್ಯ ಅನುಭವಿಸುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಮಿಚೆಲ್ ಮಾರ್ಶ್‌, ಸಾಲ್ಟ್‌, ಮನೀಶ್ ಪಾಂಡೆ ಸೇರಿದಂತೆ ಪ್ರಮುಖ ಬ್ಯಾಟರ್‌ಗಳು ತಂಡಕ್ಕೆ ರನ್‌ ಗಳಿಸುವಲ್ಲಿ ನೆರವಾಗಬೇಕಿದೆ.

ಇದನ್ನೂ ಓದಿ...

Back to top button
>