BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ

Author Picture
Published On: January 18, 2026

—Advertisement—

Updated By: Priyalachhi

ಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ ಮಾಡದಿದ್ದರೆ, ಸಿಎಂಗೆ 85% ಕಮಿಷನ್ ಹೋಗುತ್ತಿದೆ ಅಂತರ್ಥ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಜೊತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಅಬಕಾರಿ ಇಲಾಖೆಗೆ ವರ್ಷದಿಂದ ವರ್ಷಕ್ಕೆ ಕಲೆಕ್ಷನ್ ಟಾರ್ಗೆಟ್ ಕೊಡುತ್ತಿದ್ದರು. ಅದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗುತ್ತಿದೆ. ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡ ತಿಮಿಂಗಿಲ ಬಂಧಿಸಿದ್ದಾರೆ. ಒಂದೇ ಒಂದು ಸನ್ನದಿಗೆ 2.30 ಕೋಟಿ ರೂ. ಕೇಳಿ ರೆಡ್ ‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಬಕಾರಿ ಇಲಾಖೆಯು ಆರ್ಥಿಕ ಇಲಾಖೆಯಡಿ ಬರುತ್ತದೆ. ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದು ಆರೋಪಿಸಿದರು.

”ನಕಲಿ ಗಾಂಧಿಗಳು ಇವರು, ಗಾಂಧಿ ಹೆಸರು ಹೇಳಲು ನೈತಿಕತೆ ಇಲ್ಲ. ಗಾಂಧಿಯವರ ಬಗ್ಗೆ ಮಾತಾಡ್ತಾರೆ? ಎಲ್ಲಿದೆ ಆದರ್ಶ? ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡುತ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರನ್ನು ನಶೆಯಲ್ಲಿ ಮುಳುಗಿಸಿದ್ದಾರೆ. ಕಳ್ಳ ಕಾಂಗ್ರೆಸಿಗರು ಒಂದು ಕಡೆ ಕುಡಿಸೋದು, ಇನ್ನೊಂದು ಕಡೆ ವಸೂಲಿ. ಅಬಕಾರಿ ಮಂತ್ರಿ ತಿಮ್ಮಾಪುರ ಒಂದು ಕ್ಷಣವೂ‌ ಅಧಿಕಾರದಲ್ಲಿ ಇರಬಾರದು, ರಾಜೀನಾಮೆ ಕೊಡಬೇಕು. ಇಲ್ಲವೆಂದರೆ ಮಂತ್ರಿಗಳನ್ನು ಸಂಪುಟದಿಂದ ಸಿಎಂ ತೆಗೆಯಲಿ” ಎಂದು ಒತ್ತಾಯಿಸಿದರು.

”ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಎ1 ಖದೀಮ, ಸೂಪರಿಂಟೆಂಡೆಂಟ್ ತಮ್ಮಣ್ಣ ಮಿನಿ ಖದೀಮ, ಲಕ್ಕಪ್ಪ ಗಣಿ ಹೆಸರಲ್ಲೇ ಗಣಿ ಇದೆ. ಮೂವರೂ ಲೋಕಾ ಬಲೆಗೆ ಬಿದ್ದಿದ್ದಾರೆ. ಸಿಎಲ್-7 ಒಟ್ಟು 750 ಲೈಸೆನ್ಸ್ ಕೊಡುತ್ತಿದ್ದಾರೆ. ಪ್ರತಿ ಸಿಎಲ್‌-7ಗೆ 1.5 ಕೋಟಿ ರೂ. ಲಂಚ, 650 ಸಿಎಲ್-2 ಸನ್ನದುಗಳು 1.5 ಕೋಟಿ ರೂ.ಗೆ ಹರಾಜು, ಒಟ್ಟು 950 ಕೋಟಿ ಲಂಚ, 1 ಕೋಟಿಗೆ ಸಿಎಲ್-9 ಕೊಡುತ್ತಿದ್ದಾರೆ, ಒಟ್ಟು 92 ಕೋಟಿ, ಮೈಕ್ರೋಬ್ರೆವರಿಗಳಿಗೆ ಅತೀ ಹೆಚ್ಚು ಲಂಚ ಕೊಡಬೇಕು. 1 ಮೈಕ್ರೋಬ್ರೆವರಿಗೆ 2.5 ಕೋಟಿ ರೂ., ಅಂತಹ 550 ಮೈಕ್ರೋಬ್ರೆವರಿಗಳಿವೆ” ಎಂದರು.‌

ಜಗದೀಶ್ ನಾಯ್ಕ್ ಆಡಿಯೋ ಕೇಳಿಸಿದ ಆರ್​.ಅಶೋಕ್: ”ಕಾಂಗ್ರೆಸ್​​ನವರು ಇಷ್ಟು ದಿನ ಸಾಕ್ಷಿ ಕೇಳುತ್ತಿದ್ದರು. ಮಂತ್ರಿಗೇ ಲಂಚ ಕೊಡಬೇಕು ಎಂಬ ಆಡಿಯೋ ಇದೆ. ಮಂತ್ರಿಗೆ ಇಷ್ಟು ಮಂತ್ಲಿಮನಿ ಕೊಡಬೇಕು ಅಂತ ಆಡಿಯೋದಲ್ಲಿದೆ. ಅಬಕಾರಿ ಡಿಸಿ ಜಗದೀಶ್ ನಾಯ್ಕ್ ಆಡಿಯೋ ಇದು ಎಂದು ಸುದ್ದಿಗೋಷ್ಟಿ ನಡುವೆ ಜಗದೀಶ್ ನಾಯ್ಕ್​​ರದ್ದು ಎನ್ನಲಾದ ಆಡಿಯೋವನ್ನು ಕೇಳಿಸಿದರು. ನಾಲ್ಕು ಟೇಬಲ್​ಗಳಿಗೆ ಅಬಕಾರಿ ಇಲಾಖೆಯಲ್ಲಿ ಹಣ ಹೋಗಬೇಕು. ಎಲ್ಲರಿಗೂ ಹಣ ಶೇರ್ ಮಾಡಬೇಕು, ಮಂತ್ರಿವರೆಗೂ ಹೋಗಬೇಕು. ಬೇಗ ಹಣ ಕೊಡಿ, ಸ್ಪಾಟ್​​ನಲ್ಲಿ ಲೈಸೆನ್ಸ್ ಸಿಗುತ್ತೆ ಅಂತ ಆಡಿಯೋದಲ್ಲಿದೆ. ಇದು ಗಾಂಧಿವಾದಿಗಳ ಸರ್ಕಾರವೇ” ಎಂದು ಅಶೋಕ್​ ಕಿಡಿಕಾರಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp