Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » DNA, ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ
Politics

DNA, ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ

Sambrama Prabha NewsBy Sambrama Prabha NewsJanuary 20, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವ ಇರುವವರೆಗೂ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಂಶವಾಹಿ (ಡಿಎನ್ಎ) ಮತ್ತು ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ದಳಕ್ಕೆ (ಎಸ್ಐಟಿ) ಹೈಕೋರ್ಟ್ ಸೋಮವಾರ ಸೂಚಿಸಿದೆ.

ತಮಗೆ ವಿಧಿಸಲಾಗಿರುವ ಶಿಕ್ಷೆ ರದ್ದುಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೆಚ್.ಪಿ.ಸಂದೇಶ್ ಮತ್ತು ಟಿ.ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ಇದಕ್ಕೆ ಸರ್ಕಾರದ ಪರ ವಕೀಲರು, ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಿಆರ್​ಪಿಸಿ ಸೆಕ್ಷನ್ 391ರ ಅಡಿ ಕೆಲವು ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಒಂದು ವಾರ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ಇದೇ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್ ತಿರಸ್ಕರಿಸಿತ್ತು. ದಾಖಲೆಗಳನ್ನು ಪರಿಗಣಿಸಿ, ಅಪರಾಧದ ಗಂಭೀರತೆ, ಪ್ರಜ್ವಲ್ ಬಿಡುಗಡೆ ಮಾಡಿದರೆ ಅದು ಇತರರ ಮೇಲೆ ಉಂಟು ಮಾಡುವ ಪರಿಣಾಮವನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ಪೀಠ ತಿಳಿಸಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪ್ರಜ್ವಲ್ ರೇವಣ್ಣ
Add as Preferred on Google Follow on Google News
Share. WhatsApp Facebook Twitter Telegram
Previous Articleಬಾದಾಮಿ ಜನ ಗೆಲ್ಲಿಸಿದ್ದರಿಂದಲೇ ಮುಖ್ಯಮಂತ್ರಿಯಾದೆ; ಸಿಎಂ
Next Article ಎಸ್​ಎಸ್​ಎಲ್​ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಗೆ ಪತ್ರ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.