• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಎಸ್​ಎಸ್​ಎಲ್​ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಗೆ ಪತ್ರ

Sambrama Prabha News by Sambrama Prabha News
January 20, 2026
in Politics
0
ಎಸ್​ಎಸ್​ಎಲ್​ಸಿ ಪರೀಕ್ಷೆ ಓದಿಗಾಗಿ ನಿರಂತರ ವಿದ್ಯುತ್ ಒದಗಿಸುವಂತೆ ಮುಖ್ಯಮಂತ್ರಿಗೆ ಪತ್ರ

Updated By: Priyalachhi

ಉಡುಪಿ: ಹೊಯ್ಸಳ ಶೌರ್ಯ ಪ್ರಶಸ್ತಿ ವಿಜೇತ, ಉಡುಪಿಯ ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಎಸ್​ಎಸ್​ಎಲ್​ಸಿ ಪರೀಕ್ಷೆ ಸಂದರ್ಭ ನಿರಂತರ ವಿದ್ಯುತ್ ಸರಬರಾಜು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ದೀಪೇಶ್ ದೀಪಕ್ ಶೆಣೈ, ಉಡುಪಿಯ ಟಿ.ಎ. ಪೈ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್​ನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯಾಗಿದ್ದಾನೆ. ಕಳೆದ ವರ್ಷ ಈತನ ಧೈರ್ಯ ಮತ್ತು ಸಮಯಪ್ರಜ್ಞೆಗೆ ಕರ್ನಾಟಕ ಸರ್ಕಾರದಿಂದ ಅತ್ಯುನ್ನತ ಹೊಯ್ಸಳ ಶೌರ್ಯ ಪ್ರಶಸ್ತಿ ದೊರೆತಿದೆ.

ಸದ್ಯ ತಮ್ಮ ಪ್ರದೇಶದಲ್ಲಿ ನಡೆಯುತ್ತಿರುವ ಅನಿಯಮಿತ ಹಾಗೂ ಅಘೋಷಿತ ವಿದ್ಯುತ್ ಕಡಿತಗಳ ಕುರಿತು ಮಾಸ್ಟರ್ ದೀಪೇಶ್ ದೀಪಕ್ ಶೆಣೈ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನ ಸೆಳೆದಿರುವುದು ವಿಶೇಷ.

“ಮಾರ್ಚ್–ಏಪ್ರಿಲ್ 2026ರಲ್ಲಿ ನಡೆಯಲಿರುವ SSLC ಪರೀಕ್ಷೆಗೆ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾನೆ ಮತ್ತು ರಾತ್ರಿ ಹಗಲಿನ ಸಮಯದಲ್ಲಿ ನಿರಂತರ ವಿದ್ಯುತ್ ಒದಗಿಸಬೇಕು. ಈ ನಿಟ್ಟಿನಲ್ಲಿ ತಕ್ಷಣ ತಾಂತ್ರಿಕ ಪರಿಶೀಲನೆ ಮತ್ತು ದುರಸ್ತಿ ಕ್ರಮಗಳನ್ನು ಕೈಗೊಳ್ಳುವಂತೆ” ವಿದ್ಯಾರ್ಥಿ ದೀಪೇಶ್ ತನ್ನ ಪತ್ರದಲ್ಲಿ ಮನವಿ ಮಾಡಿದ್ದಾನೆ.

ಇದಲ್ಲದೆ ಆನ್‌ಲೈನ್ ಅಧ್ಯಯನ, ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳು ಹಾಗೂ ಸಾಧನಗಳ ಚಾರ್ಜಿಂಗ್‌ಗೆ ವಿದ್ಯುತ್ ಕಡಿತದಿಂದ ಅಡಚಣೆ ಉಂಟುಮಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಲ್ಲಿ ಆತಂಕ ಹೆಚ್ಚುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

Tags: ಮುಖ್ಯಮಂತ್ರಿ
Previous Post

DNA, ಡಿಜಿಟಲ್ ಸಾಕ್ಷಿಗಳ ರೆಕಾರ್ಡಿಂಗ್ ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ

Next Post

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆ

Next Post
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಸಚಿವ ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.