Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಯಶ್ ಅನ್ನು ರಾವಣನ ಪಾತ್ರಕ್ಕೆ ಆರಿಸಿದ್ದೇಕೆ?
Crime News Exclusive Latest News

ಯಶ್ ಅನ್ನು ರಾವಣನ ಪಾತ್ರಕ್ಕೆ ಆರಿಸಿದ್ದೇಕೆ?

Sambrama Prabha NewsBy Sambrama Prabha NewsNovember 1, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಲಚ್ಚಿ

ಸದ್ಗುರು ಮತ್ತು ಯಶ್: ಸಿನಿಮಾ ಭಾರತದ ಅತ್ಯಂತ ದೊಡ್ಡ ಬಜೆಟ್​​ನ ಸಿನಿಮಾ ಆಗಿದೆ. ಸುಮಾರು ಎರಡು ವರ್ಷಗಳಿಂದಲೂ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. ನಟ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಅನ್ನು ಹಾಲಿವುಡ್​​ನನ ಟಾಪ್ ಸ್ಟುಡಿಯೋದ ಮಾಲೀಕ ನಮಿತ್ ಮಲ್ಹೋತ್ರಾ ಮತ್ತು ಯಶ್ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ಯಶ್ ಅವರಿಗೆ ಆಪ್ತರೂ ಆಗಿರುವ ಸದ್ಗುರು ಅವರು ಯಶ್ ಅವರನ್ನು ರಾವಣನ ಪಾತ್ರಕ್ಕೆ ಆಯ್ಕೆ ಮಾಡಿರುವ ಬಗ್ಗೆ ತಕರಾರು ವ್ಯಕ್ತಪಡಿಸಿದ್ದಾರೆ.

ಸದ್ಗುರು ಅವರು ಜನಪ್ರಿಯ ವ್ಯಕ್ತಿಗಳೊಡನೆ ಸಂವಾದ ನಡೆಸುತ್ತಿರುತ್ತಾರೆ. ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಿರುತ್ತಾರೆ. ಇದೀಗ ‘ರಾಮಾಯಣ’ ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆಗೆ ಸಂವಾದ ನಡೆಸಿದರು. ಈ ವೇಳೆ ಸದ್ಗುರು ಅವರು ಯಶ್ ಅವರನ್ನು ರಾವಣನ ಪಾತ್ರಕ್ಕೆ ಆಯ್ಕೆ ಮಾಡಿರುವ ಬಗ್ಗೆ ತಕರಾರು ವ್ಯಕ್ತಪಡಿಸಿದರು.

‘ಯಶ್ ನನಗೆ ಚೆನ್ನಾಗಿ ಪರಿಚಿತರು, ಅವರು ಅದು ಹೇಗೆ ರಾವಣನ ಪಾತ್ರ ಒಪ್ಪಿದರು ಗೊತ್ತಿಲ್ಲ. ಅವರು ಅದ್ಭುತ ವ್ಯಕ್ತಿ. ಯಶ್ ಬಹಳ ಸ್ಪುರದ್ರೂಪಿ ನಟ. ಅವರನ್ನು ರಾವಣನ ಪಾತ್ರಕ್ಕೆ ಹೇಗೆ ಆಯ್ಕೆ ಮಾಡಿದಿರಿ?’ ಎಂದು ಸದ್ಗುರು ನಮಿತ್ ಅವರನ್ನು ಪ್ರಶ್ನೆ ಮಾಡಿದರು. ಸದ್ಗುರು ಪ್ರಶ್ನೆಗೆ ಉತ್ತರಿಸಿದ ನಮಿತ್ ‘ನಾವು ಸೂಪರ್ ಸ್ಟಾರ್ ಲೆವೆಲ್​​ನ ನಟನೇ ರಾವಣನ ಪಾತ್ರದಲ್ಲಿ ನಟಿಸಬೇಕು ಎಂದು ಹುಡುಕುತ್ತಿದ್ದೆವು, ಯಶ್ ಹ್ಯಾಂಡ್ಸಮ್ ನಟ ಜೊತೆಗೆ ಅವರು ಅದ್ಭುತವಾದ ಪ್ರತಿಭೆಯುಳ್ಳವರೂ ಸಹ ಹೌದು. ರಾವಣ ತನ್ನಲ್ಲಿ ಹಲವು ಭಿನ್ನ ವ್ಯಕ್ತಿತ್ವಗಳನ್ನು ಹೊಂದಿದ್ದವ. ಆ ಪಾತ್ರ ಮಾಡಲು ಯಶ್ ಸಹ ಉತ್ಸುಕರಾಗಿದ್ದರು’ ಎಂದಿದ್ದಾರೆ.

ನಮಿತ್ ಅವರ ಉತ್ತರದಿಂದ ಸಂತುಷ್ಟರಾಗದ ಸದ್ಗುರು, ‘ಸಾಮಾನ್ಯವಾಗಿ ವಿಲನ್​​ಗಳು ಮೊಂಡು ಮೂಗು ಹೊಂದಿದವರು, ಕುರುಚಲು ಮುಖ ಹೊಂದಿದವರು ಆಗಿರುತ್ತಾರೆ. ಆದರೆ ನೀವು ಚೂಪಾದ ಮೂಗು ಹೊಂದಿದ ಸ್ಮಾರ್ಟ್ ಆಗಿರುವ ಯಶ್ ಅನ್ನು ಆಯ್ಕೆ ಮಾಡಿದ್ದೀರಿ’ ಎಂದು ತಮ್ಮದೇ ಶೈಲಿಯಲ್ಲಿ ನಕ್ಕರು.

ಬಳಿಕ ರಣ್​​ಬೀರ್ ಕಪೂರ್ ಅವರು ರಾಮನ ಪಾತ್ರ ನಿರ್ವಹಿಸುತ್ತಿರುವ ಬಗ್ಗೆ ಕೆಲವರು ಎತ್ತಿರುವ ಆಕ್ಷೇಪದ ಬಗ್ಗೆ ಮಾತನಾಡಿರುವ ಸದ್ಗುರು, ‘ಯಾರೋ ನಟ ಹಿಂದೆ ಯಾವುದೋ ಪಾತ್ರಗಳಲ್ಲಿ ನಟಿಸಿದ್ದಾನೆ ಎಂದ ಮಾತ್ರಕ್ಕೆ ಈಗ ರಾಮನ ಪಾತ್ರದಲ್ಲಿ ನಟಿಸಬಾರದು ಎಂಬುದು ಸರಿಯಲ್ಲ. ಆತ ನಟನಷ್ಟೆ, ನಾಳೆ ಆತ ಬೇರೆ ಯಾವುದೋ ಸಿನಿಮಾನಲ್ಲಿ ರಾವಣನ ಪಾತ್ರದಲ್ಲೂ ನಟಿಸಬಹುದು’ ಎಂದಿದ್ದಾರೆ ಸದ್ಗುರು.

‘ರಾಮಾಯಣ’ ಸಿನಿಮಾನಲ್ಲಿ ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಯಶ್ ಸಹ ನಿರ್ಮಾಪಕರೂ ಸಹ ಆಗಿದ್ದಾರೆ. ‘ರಾಮಾಯಣ’ ಸಿನಿಮಾಕ್ಕೆ ಎಆರ್ ರೆಹಮಾನ್ ಮತ್ತು ಖ್ಯಾತ ಸಂಗೀತ ನಿರ್ದೇಶಕ ಹಾನ್ಸ್ ಜೈಮರ್ ಸಂಗೀತ ನೀಡಿದ್ದಾರೆ. ಸಿನಿಮಾ ನಿರ್ದೇಶನ ಮಾಡುತ್ತಿರುವುದು ನಿತೀಶ್ ತಿವಾರಿ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Ravana Sadhguru Yash ಯಶ್ ಸದ್ಗುರು
Add as Preferred on Google Follow on Google News
Share. WhatsApp Facebook Twitter Telegram
Previous Articleನವೆಂಬರ್ ಆರಂಭದಲ್ಲೇ ಸಿಡಿದ ಡೆಡ್‌ಲೈನ್ ಬಾಂಬ್
Next Article ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಯಾವಾಗ? ಎಲ್ಲಿ?
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.