ತುಮಕೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣಗೆ ವೀರಶೈವ ಸಮುದಾಯ ಬೆಂಬಲ ಘೋಷಣೆ
ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸೊಗಡು ಶಿವಣ್ಣ ಅವರಿಗೆ ವೀರಶೈವ ಸಮುದಾಯ ಬೆಂಬಲ ಘೋಷಿಸಿದೆ. ಈ ವೇಳೆ ಸೊಗಡು ಶಿವಣ್ಣ ಭಾವುಕರಾಗಿದ್ದಾರೆ.
ಮಣಿಪುರದ ಇಂದಿನ ಸ್ಥಿತಿ ಹೇಗಿದೆ ನೋಡಿ – ಕಾಂಗ್ರೆಸ್ ಟ್ವೀಟ್
2022ರಲ್ಲಿ ಮಣಿಪುರದ ಭದ್ರತೆ, ಸಮಗ್ರತೆ, ಪ್ರಗತಿಗಾಗಿ ಬಿಜೆಪಿಗೆ ಸಂಪೂರ್ಣ ಬಹುಮತ ನೀಡಿ ಎಂದರು. ಜನತೆ ಬಿಜೆಪಿಗೆ ಪೂರ್ಣ ಬಹುಮತ ನೀಡಿ ಗೆಲ್ಲಿಸಿದರು. 2023ರಲ್ಲಿ ಬಿಜೆಪಿ ಆಡಳಿತದಲ್ಲಿ ಮಣಿಪುರದ ಇಂದಿನ ಸ್ಥಿತಿ ಹೇಗಿದೆ ನೋಡಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ
ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಪಕ್ಷದ ನಾಯಕರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋನಿಯಾ ಗಾಂಧಿ ಅವರನ್ನು ಸ್ವಾಗತಿಸಿದ್ದಾರೆ.
ಎಂ ಬಾಲಕೃಷ್ಣ ಜೆಡಿಎಸ್‌ನಿಂದ ಅಮಾನತು
ಜೆಡಿಎಸ್‌ನಿಂದ ಎಂ ಬಾಲಕೃಷ್ಣ ಅವರನ್ನು ಅಮಾನತು ಮಾಡಲಾಗಿದೆ. ಕೆಆರ್‌ಪುರದಲ್ಲಿ ಜೆಡಿಎಸ್ ಸಿಪಿಐ(ಎಂ) ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದೆ. ಆದರೆ ಬೆಂಗಳೂರಿನ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ಮತ್ತು ಕೆಆರ್ ಪುರಂ ಕ್ಷೇತ್ರದ ಮುಖಂಡ ಎಂ ಬಾಲಕೃಷ್ಣ ಅವರು ಪಕ್ಷದ ವರಿಷ್ಠರ ಆದೇಶವನ್ನು ಧಿಕ್ಕರಿಸಿ ಪಕ್ಷ ಬೆಂಬಲ ನೀಡಿರುವ ಅಭ್ಯರ್ಥಿಯ ವಿರುದ್ಧವಾಗಿ ಚುನಾವಣಾ ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ಅಮಾನತು ಮಾಡಿರುವುದಾಗಿ ಜೆಡಿಎಸ್ ಮೂಲಗಳು ತಿಳಿಸಿವೆ.
ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರ
ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿಯಿದೆ. ನಿಮ್ಮ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಚಂದಾಪುರ ಗ್ರಾಮದಲ್ಲಿ ರೋಡ್ ಶೋ ನಡೆಸಿ ಮಾತನಾಡಿದರು.
ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಸಿಎಂ ಆದೆ. ನಿಮ್ಮ ಮತಕ್ಕೆ ಮುಖ್ಯಮಂತ್ರಿ ಮಾಡುವ ಶಕ್ತಿ ಇದೆ. ಹುದ್ದೆಯ ಗೌರವ ನಿಮಗೆ ಸಲುತ್ತದೆ.
ಈ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡಲು ನಿಮ್ಮೆಲ್ಲರ ಆಶೀರ್ವಾದ ಇದೆ ಎಂದರು.
ನರೇಂದ್ರ ಮೋದಿ ರೋಡ್ ಶೋ
ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ನೃತ್ಯದ ಮೂಲಕ ಸ್ವಾಗತಿಸಲು ಸೃಷ್ಟಿಕಲಾ ವಿದ್ಯಾಲಯದ ಕಲಾ ತಂಡ ಸಿದ್ಧರಾಗಿ ನಿಂತಿದ್ದಾರೆ.
ನರೇಂದ್ರ ಮೋದಿ ರೋಡ್‌ಶೋ ವೀಕ್ಷಿಸಲು ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಸುಬುಧೇಂದ್ರ ತೀರ್ಥ ಶ್ರೀಗಳು ಬೆಂಗಳೂರಿಗೆ ಆಗಮಿಸಿದ್ದಾರೆ.
ಇಂದು ಹುಬ್ಬಳ್ಳಿಗೆ ಸೋನಿಯಾ ಗಾಂಧಿ
ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರ ನಡೆಸಲಿದ್ದಾರೆ.
ನರೇಂದ್ರ ಮೋದಿ ರೋಡ್‌ಶೋ, ರೂಟ್ ಮ್ಯಾಪ್‌ನಲ್ಲಿ ಬದಲಾವಣೆ
ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಮತ್ತು ನಾಳೆಯ ಬೆಂಗಳೂರು ರೋಡ್‌ಶೋದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಶನಿವಾರಕ್ಕೆ ನಿಗದಿ ಮಾಡಲಾಗಿದೆ. ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ ಪ್ರಧಾನಿ ಕಚೇರಿ ನಿರ್ದೇಶನದಂತೆ ರೋಡ್‌ಶೋ ರೂಟ್ ಮ್ಯಾಪ್ ಬದಲಾಯಿಸಲಾಗಿದೆ. ಇದನ್ನೂ ಓದಿ: Modi in Bengaluru: ಬೆಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋ; ಈ ರಸ್ತೆಗಳಲ್ಲಿ ಓಡಾಡುವುದನ್ನು ತಪ್ಪಿಸಿ, ಬದಲಿ ರಸ್ತೆ ನೋಡಿಕೊಳ್ಳಿ
ಪ್ರಧಾನಿ ಮೋದಿ ಆರೋಪಗಳಿಗೆ ಸಿದ್ದರಾಮಯ್ಯ ತಿರುಗೇಟು
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಮಾಡಿರುವ ಆರೋಪಗಳಿಗೆ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಮಾಧ್ಯಮಗಳ ಸುಳ್ಳು ಸಮೀಕ್ಷೆಗಳನ್ನು ಪ್ರಸಾರ ಮಾಡಿ ಬೆಂಬಲಗಳಿಸಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೊಟ್ಟೆ ಉರ್ಕೊಳ್ಳುತ್ತಿರುವುದು ನೋಡಿದಾಗ ಕನಿಕರ ಹುಟ್ಟುತ್ತಿದೆ ಎಂದು ಹೇಳಿದ್ದಾರೆ.
ಮಾಧ್ಯಮ ಪ್ರಕಟಣೆಯಲ್ಲಿ ಅವರು, ಏನಿದರ ಅರ್ಥ ಮೋದಿಯವರೇ? ನಿಮ್ಮನ್ನು ಹಾಡಿ ಹೊಗಳುತ್ತಿರುವ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ನೀವೇ ಸಂಶಯಿಸುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್, ಜೆಡಿಎಸ್‌ನಿಂದ ಜನರ ಲೂಟಿ – ಪ್ರಧಾನಿ ನರೇಂದ್ರ ಮೋದಿ
ಬಿಜೆಪಿಯಿಂದ ಮಾತ್ರ ಕರ್ನಾಟಕದಲ್ಲಿ ಅಭಿವೃದ್ಧಿ ಸಾಧ್ಯ. ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯದ ಜನರನ್ನು ಲೂಟಿ ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತುಮಕೂರಿನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಗುಂಡ್ಲುಪೇಟೆ ಬಿಜೆಪಿ ಅಭ್ಯರ್ಥಿ ಪರ ನಟ ಕಿಚ್ಚ ಸುದೀಪ್ ರೋಡ್ ಶೋ
ಗುಂಡ್ಲುಪೇಟೆ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿಎಸ್ ನಿರಂಜನಕುಮಾರ್ ಪರ ನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದ್ದಾರೆ.
ವರುಣಾದಲ್ಲಿ ಸೋಮಣ್ಣ ಪರ ಸಿಎಂ ಬೊಮ್ಮಾಯಿ ಮತಯಾಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮೈಸೂರಿನ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಹಾಗೂ ಟಿ ನರಸಿಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರೇವಣ್ಣ ಪರವಾಗಿ ರೋಡ್ ಶೋ ನಡೆಸಿದ್ದಾರೆ.
ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ, ಟಿ ನರಸೀಪುರ ಬಿಜೆಪಿ ಅಭ್ಯರ್ಥಿ ಡಾ. ರೇವಣ್ಣ, ನಟ ಶಶಿಕುಮಾರ್ ಈ ವೇಳೆ ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಪರ ನಟ ದುನಿಯಾ ವಿಜಿ, ನಟಿ ಅಶ್ವಿಕಾ ನಾಯ್ಡು ಪ್ರಚಾರ
ವರುಣಾ ವಿಧಾನಸಭೆ ಕ್ಷೇತ್ರದ ಚಿಕ್ಕಹಳ್ಳಿ, ಬುಗತಗಳ್ಳಿ ಹಾಗೂ ವಾಜಮಂಗಲ ಗ್ರಾಮಗಳಲ್ಲಿ ಸಿದ್ದರಾಮಯ್ಯ ಅವರು ಇಂದು ರೋಡ್ ಶೋ ನಡೆಸಿ ಮತ ಯಾಚಿಸಿದ್ದಾರೆ. ನಟ ದುನಿಯಾ ವಿಜಿ, ನಟಿ ಅಶ್ವಿಕಾ ನಾಯ್ಡು ಅವರು ಸಿದ್ದರಾಮಯ್ಯ ಅವರ ಪರ ಪ್ರಚಾರ ಕ್ಯಾಂಪೇನ್ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಬದಲಾಗಿ ಭ್ರಷ್ಟಾಚಾರ-ಪ್ರಧಾನಿ ಮೋದಿ
ಬಳ್ಳಾರಿಯಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಭೆಯಲ್ಲಿ ಮಾತನಾಡಿತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಭಿವೃದ್ಧಿಯ ಬದಲಾಗಿ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳಗಿತ್ತು. ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ನೇತೃತ್ವದ 3.5 ವರ್ಷಗಳ ಡಬಲ್ ಇಂಜಿನ್ ಸರ್ಕಾರ ಉತ್ತಮ ಕೆಲಸಗಳನ್ನು ಮಾಡಿದೆ ಎಂದು ಹೇಳಿದ್ದಾರೆ
ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ
ಕರ್ನಾಟಕ ಚುನಾವಣೆ (Karnataka Election)ಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆಯನ್ನು ಮೂರು ಚುನಾವಣಾ ಪೂರ್ವ ಸಮೀಕ್ಷೆಗಳು ನೀಡಿವೆ. ಝೀ ನ್ಯೂಸ್ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಬರುವ ಮುನ್ಸೂಚನೆ ದೊರಕಿದೆ. ಈ ಕುರಿತ ವರದಿ ಇಲ್ಲಿದೆ ಓದಿ
ಕರ್ನಾಟಕದಿಂದಲೇ ಕೇಸರಿ ಪಕ್ಷ ಅವನತಿ ಆರಂಭ; ಮಮತಾ ಬ್ಯಾನರ್ಜಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಬೇಡಿ. ನಿಮಗೆ ಇಷ್ಟವಾಗುವ ಯಾವುದೇ ಪಕ್ಷಕ್ಕೆ ನಿಮ್ಮ ಅಮೂಲ್ಯವಾದ ಮತ ನೀಡಿ. ಬಿಜೆಪಿಯ ಅವನತಿ ಕರ್ನಾಟಕದಿಂದ ಪ್ರಾರಂಭವಾದರೆ ನನಗೆ ಸಂತೋಷವಾಗುತ್ತದೆ. ಭಾರತೀಯ ಜನತಾ ಪಾರ್ಟಿ ಹಿಂದೂ ಧರ್ಮದಲ್ಲಿನ ಆಧ್ಯಾತ್ಮಿಕತೆಯನ್ನು ನಾಶಪಡಿಸುತ್ತಿದೆ ಎಂದು ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತ ವರದಿ ಇಲ್ಲಿದೆ ಓದಿ
ಕೋಲಾರದಲ್ಲಿ ದಾಖಲೆ ಇಲ್ಲದ 4 ಕೋಟಿ ನಗದು ಜಪ್ತಿ
ಕೋಲಾರ ಗೋಲ್ಡ್ ಫೀಲ್ಡ್ (ಕೆಜಿಎಫ್) ಪೊಲೀಸರು ಗುರುವಾರ ಕೋಲಾರದ ಜಿಯಾನ್ ಹಿಲ್ಸ್‌ನಲ್ಲಿ ಮನೆ ಮತ್ತು ಕಾರಿನಲ್ಲಿ ದಾಖಲೆ ಇಲ್ಲದ 4 ಕೋಟಿ ರೂ. ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ
ಕರ್ನಾಟಕ ಚುನಾವಣೆ, ಮೇ 8 ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ
– ರಾಜಕೀಯ ಪಕ್ಷಗಳಿಗೆ ಇಂದಿನಿಂದ ನಾಲ್ಕು ದಿನ ಬಹಿರಂಗ ಪ್ರಚಾರಕ್ಕೆ ಅವಕಾಶ ಮಾತ್ರವಿದೆ. ಮೇ 8 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
– ಮೇ 8 ರಂದು ಸಂಜೆ 6 ಗಂಟೆವರೆಗೆ ಮಾತ್ರ ಅವಕಾಶವಿದೆ. ಮೇ 8ರ ಸಂಜೆ 6 ಗಂಟೆ ನಂತರ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಕೈಗೊಳ್ಳಬಹುದಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಮುಖ್ಯಾಧಿಕಾರಿ ಮನೋಜ್ ಕುಮಾರ್ ಮಾಹಿತಿ ನೀಡಿದ್ದಾರೆ.
ತುಮಕೂರು ಮತ್ತು ಬಳ್ಳಾರಿಯಲ್ಲಿ ಇಂದು ಪ್ರಧಾನಿ ಮೋದಿ ಪ್ರಚಾರ
ಕರ್ನಾಟಕ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ತುಮಕೂರು ಮತ್ತು ಬಳ್ಳಾರಿಗೆ ಆಗಮಿಸಲಿದದ್ದಾರೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ಪ್ರಧಾನಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇಂದು ಮತ್ತೆ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಇಂದು ಬಳ್ಳಾರಿ ಮತ್ತು ತುಮಕೂರಿಗೆ ಪ್ರಧಾನಿ ಭೇಟಿ ನೀಡಲಿದ್ದಾರೆ.
ಕಲಬುರಗಿಯ ಸೇಡಂಗೆ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿ
ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು ಸಂಜೆ 5.30 ಕ್ಕೆ ಸೇಡಂ ಆಗಮಿಸುವ ಜೆಪಿ ನಡ್ಡಾ, ಬಿಜೆಪಿ ಅಭ್ಯರ್ಥಿ ರಾಜಕುಮಾರ ಪಾಟೀಲ್ ತೇಲ್ಕೂರ್ ಪರ ಪ್ರಚಾರ ನಡೆಸಲಿದ್ದಾರೆ. ಸಂಜೆ ಆರು ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆ ವಿವಿಧ ಮಠಾದೀಶರೊಂದಿಗೆ ಜೆಪಿ ನಡ್ಡಾ ಮಾತುಕತೆಯನ್ನು ನಡೆಸಲಿದ್ದಾರೆ.
ಕರ್ನಾಟಕ ಚುನಾವಣೆಯು ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟ: ಪೃಥ್ವಿ ರೆಡ್ಡಿ
ಆಮ್ ಆದ್ಮಿ ಪಾರ್ಟಿಯು ದೆಹಲಿ ಹಾಗೂ ಪಂಜಾಬ್‌ನಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಬೇರೆ ಪಕ್ಷಗಳು ನಕಲು ಮಾಡಿ ಕರ್ನಾಟಕದಲ್ಲಿ ಆಶ್ವಾಸನೆಗಳನ್ನು ನೀಡುತ್ತಿದ್ದು, ಈ ಚುನಾವಣೆಯು ಅಸಲಿ ಮತ್ತು ನಕಲಿಗಳ ನಡುವಿನ ಹೋರಾಟವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಮಾಧ್ಯಮಗಳ ಜೊತೆ ಸಂವಾದ ನಡೆಸುವುದು ಒಳ್ಳೆಯ ಬೆಳವಣಿಗೆ. ಆಮ್ ಆದ್ಮಿ ಪಾರ್ಟಿಯು ಇಡೀ ದೇಶದ ರಾಜಕೀಯದಲ್ಲಿ ಬದಲಾವಣೆ ತಂದಿದ್ದು, ಕರ್ನಾಟಕದ ಚುನಾವಣೆಯಲ್ಲೂ ಭಾರೀ ಬದಲಾವಣೆಯನ್ನು ನೋಡುತ್ತಿದ್ದೇವೆ. ಹಿಂದಿನ ಚುನಾವಣೆಗಳಲ್ಲಿ ಮತದಾರರು ಕೊನೆ ಹಂತದ ಭಾವನಾತ್ಮಕ ವಿಚಾರಗಳಿಂದ ಕೇವಲ ಜಾತಿ ಹಾಗೂ ಧರ್ಮ ನೋಡಿ ಮತದಾನ ಮಾಡುತ್ತಿದ್ದರು. ಆದರೆ ಈ ಚುನಾವಣೆಯಲ್ಲಿ ʻಮತದಾನದಿಂದ ನಮಗೇನು ಲಾಭವಾಗುತ್ತದೆ?ʼ ಎಂದು ಯೋಚಿಸಲು ಆರಂಭಿಸಿದ್ದಾರೆ. ಈ ಮೂಲಕ ಜನಪರ ಆಡಳಿತವನ್ನು ಜನರು ಬಯಸಲು ಶುರು ಮಾಡಿದ್ದಾರೆ” ಎಂದು ಬೆಂಗಳೂರಿನ ಪ್ರೆಸ್‌ಕ್ಲಬ್ ನವರು ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಪೃಥ್ವಿ ರೆಡ್ಡಿ ಹೇಳಿದ್ದಾರೆ.
ಕಷ್ಟ ಬಂದಾಗ ಮೋದಿ ಕರ್ನಾಟಕಕ್ಕೆ ಮೋದಿ ಬರಲ್ಲ
ರಾಜ್ಯದ ಜನರು ನೆರೆ, ಬರ ಇನ್ನಿತರೆ ಕಷರಗಲ್ಲಿ ಇದ್ದಾಗ ಬಾರದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ಬಂದು ರೋಡ್ ಶೋ ಮಾಡಿ ಕೈಬೀಸಿ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ಕೊಪ್ಪಳದಲ್ಲಿ ನಿನ್ನೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚುನಾವಣೆ ಬಂದಿದೆ. ಬಿಜೆಪಿಯ ದೆಹಲಿ ನಾಯಕರು ರಾಜ್ಯಕ್ಕೆ ಲಗ್ಗೆ ಇಡ್ತಿದ್ದಾರೆ. ಇವರು ರಾಜ್ಯದ ಜನ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಾಗಿತ್ತು. ಇವಾಗ ಬಂದು ಮೋದಿಯವರು ರೋಡ್ ಶೋ ಮೂಲಕ ಜನರತ್ತ ಕೈ ಬೀಸುತ್ತಿದ್ದಾರೆ. ರಾಜ್ಯಕ್ಕೆ ಇವರ ಕೊಡುಗೆ ಏನು ಎಂದು ಖಾರವಾಗಿ ಪ್ರಶ್ನೆ ಮಾಡಿದರು.